< ಮಾರ್ಕನು 13 >
1 ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು.
And as he went forth out of the temple, one of his disciples says to him, Teacher, see what kind of stones and what kind of buildings.
2 ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.
And Jesus having answered, he said to him, See thou these great buildings? There will be left, no, not a stone upon a stone, that will, no, not be brought down.
3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,
And as he sat upon the mount of Olives opposite the temple, Peter and James and John and Andrew questioned him privately,
4 “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.
Tell us, when will these things be? And what is the sign when all these things are going to be fulfilled?
5 ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
And having answered them, Jesus began to say to them, Watch that not any man lead you astray.
6 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
For many will come in my name, saying, I am, and they will lead many astray.
7 ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
And when ye may hear of wars and rumors of wars, be not alarmed, for it must happen, but the end is not yet.
8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.
For nation will rise against nation, and kingdom against kingdom, and there will be earthquakes in various places, and there will be famines and troubles. These things are the beginnings of travails.
9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.
But watch ye yourselves, for they will deliver you up to councils, and ye will be beaten in synagogues. And ye will be stood before rulers and kings because of me, for a testimony to them.
10 ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.
And the good news must first be preached to all the nations.
11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.
But when they lead you, delivering you up, be not anxious before what ye might speak, nor meditate. But whatever may be given you in that hour, speak ye this, for ye are not who speak, but the Holy Spirit.
12 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
And brother will betray brother to death, and a father a child. And children will rise up against parents, and will condemn them to death.
13 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
And ye will be hated by all men because of my name, but he who endures to the end, this man will be saved.
14 “ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
But when ye see the abomination of desolation, which was spoken by Daniel the prophet, standing where it ought not (let him who reads understand), then let those in Judea flee to the mountains,
15 ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
and let the man on the housetop not go down into the house, nor enter in to take anything out of his house,
16 ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.
and let the man who is in the field not turn back for the things behind, to take his cloak.
17 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!
But woe to those who have in the womb, and to those who suckle in those days.
18 ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
And pray ye that your flight may not be in winter.
19 ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
For those days will be tribulation, such as has not happened from the beginning of the creation that God created until now, and no, will not happen.
20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.
And unless the Lord cut short the days, no flesh would have been saved, but because of the chosen, whom he chose, he cut short the days.
21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.
And then if any man should say to you, Lo, here is the Christ, or, Lo, there, do not believe.
22 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
For false Christs and false prophets will arise, and will give signs and wonders, in order to lead astray, if possible, even the chosen.
23 ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.
But watch ye. Behold, I have foretold all to you.
24 “ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.
But in those days, after that tribulation, the sun will be darkened, and the moon will not give its light,
25 ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’
and the stars of the sky will be falling, and the powers that are in the heavens will be shaken.
26 “ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.
And then they will see the Son of man coming in clouds with much power and glory.
27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.
And then he will send forth his agents, and will gather together his chosen from the four winds, from the outermost part of the earth as far as the outermost part of heaven.
28 “ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
But learn a parable from the fig tree. When its branch now becomes tender, and sprouts the leaves, ye know that summer is near.
29 ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.
So ye also, when ye may see these things happening, know ye that it is near, at the doors.
30 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Truly I say to you, that this generation will, no, not pass away, until all these things happen.
31 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
The sky and the earth will pass away, but my words may, no, not pass away.
32 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
But about that day or that hour no man knows, not even the agents in heaven, nor the Son, but the Father.
33 ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.
Watch ye! Be alert and pray, for ye know not when the time is,
34 ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
like a man abroad, having left his house, and having given authority to his bondmen, and to each man his work, and commanded the doorkeeper that he should watch.
35 “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
Watch therefore, for ye know not when the lord of the house comes, at evening, or at midnight, or at cock crowing, or in the morning,
36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.
lest having come suddenly, he may find you sleeping.
37 ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’” ಎಂದರು.
And what I say to you I say to all, watch!