< ಮಾರ್ಕನು 14 >
1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.
Yabi siku ya nyaibele bai baada ya lisiku ya Pasaka ni mikate yangayeyelwa nzaso. Makuhani akolo ni baandishi bai kabapala namna ya kum'boywa Yesu kwa hila ni kum'bulaga.
2 ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು.
Kwa kuwa bakoiye, “wakati gono kwa wa sikukuu, bandu kana baise kutenda gasia”.
3 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.
Palyo Yesu abi Bethaia kaasake Simoni mkoma, kayenda pameza, nnwawa yumo kaisa ni chupa ya marashi ya nardo ya pwela ngolo muno, katula ni kuyitiya kumutwe wake.
4 ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?
Pai benge bakasilike, bate kokeyana bene kwa bene kabakoya”sa upotevu gono?
5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.
Manukato gano gabi kusulusa zaidi ya dinari mia tatu kabapaywa akeba.”Nibembe kabankoya.
6 ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
Yesu kakoya 'Nnekaye yika yake. Munkundiya kele masaka? Alei kilebe kinoke kwangu.
7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
Kila lisiku akeba m'binabo, muda wowote wa mana mupenda kuatendya ganoike atendyaye. Lakini muba kwa minee muda wote.
8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.
Atei sa akiwesike aipakiye yega yango mauta kwaajili ya masiko.
9 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.
Kweli niabakiya, kila pandu injili apo ihubiriwa Dunia nzima, sa akitei nnwawa yono salongelwa kwa ukombokeyo wake.
10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
Yuda Iskariote, yomo kati ya balyo komi ni ibele ayei kwa makuhani akolo ili apa kuapaya.
11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.
Akuhani akolo palyo bayowine iyeyo, bate pulai ni kuahidi kumpaya pwela. Katumbua kupala nafasi ya kumkabidhi kwabe.
12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.
lisiku ya kwanza ya mkate wanga yeyelwa nzaso palyo bapiiye mwana ngondolo wa pasaka, benepunzi bake kabankokeya, “Upala tuyende kwako tukaandae ili upate kulya kilalyo sa Pasaka?”
13 ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
Kabatuma benepunzi bake abele kikualokiya, “Yendaye mjini mwabonagana ni nnalome apotwi kibenga. Munkengame.
14 ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.
Nyumba ayingya, nkotaye na nlokiyaye mwenye nsengo ogo “Mwalimu alokiye,” Kibii kwaa chumba cha ageni pandu nalya pasaka ni benepunzi bango?”
15 ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.
Aobonenya kyumba sa kunani kikolo kibii ni samani kibii yayari. Tendaye maandalizi kwa ajili yitu palyo.”
16 ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.
Benepunzi baboi kabayenda mjini babweni kila kilebe kati ya babakiywe, kabatengeneya kilalyo sa Pasaka.
17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.
Wakati yai kitamwinyo, aisi ni balyo komi ni ibele.
18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
Kabaikaribia meza ni kulya, Yesu kakoya, “kweli nando kuabakiya, yumo kati yinu alya pamwepe ni nee angana.”
19 ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.
Bote kaba sikitika, yumo yumo kabankokeya “Balatu nenga kwaa?”
20 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.
Yesu kayangwa ni kuakokiya, yumo kati ya komi ni ibele nkati yinu, yumo mbeyambe ayeya ndonge mubakuli pamwepe ni nee.
21 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.
Kwa kuwa mwana wa Adamu ayenda kati aya maandiko gakoya kunani yake. Lakiniole wake mundu ywa kupitya ywembe mwana wa Adamu aakanwa! Yai bwiso muno kana aibelikwe kwaa.
22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.
Kabalyaa, Yesu katola mkate, kaubariki ni kuutekwa. Kapaya kakoya, “Tolaye, yeno yega yango.”
23 ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.
Katola kikombe, akashukuru, ni kwapaya ni bote kabanywaa.
24 ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
Kabaakokeya, “yeno damu yango ya agano, damu iyitikayo mwalo wa bingi.
25 ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.
Kweli niakokeya, ninywa kwaa lelo mukibelei seno sa lizabibuy mpaka lisiku ya ninywaa ya ayambe kwa upwalume wa Nnongo.”
26 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.
Palyo bayomwile kuyemba wimbo, bayei kuya katika kunnema wa Mizeituni.
27 ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’
Yesu kabakokeya, “Mwenga mwabote mwatama kutalu mwalo wa nee, mwalo iteandikwa,'nankombwa mchungaji ni ngondolo batawanyika.'
28 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.
Lakini baada ya kuyoka kwango, naalongoylya kulonge yinu Galilaya.”
29 ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.
Petro kam'bakiya, “Hata mana bote bakulei nee nikuleka kwaa.”
30 ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.
Yesu kam'bakiya “kweli nikubakiya, kilo yeno kabla nzigolo anabeka malaibele, wangana mara tatu”
31 ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
Lakini Petro akoiye “Nibi tayari kuwaa pamwepe ni wee, nikukana kwaa.”bote bapiiye ahadi yeyelo.
32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.
Baisi kulieneo likemwage Gethsemane, ni Yesu kabaakokeya benepunzi bake “tameni pano wakati nasali.”
33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,
Kabatola Petro, Yakobo ni yohana pamwepe ni ywembe katumbua kuhuzunika ni kukunda masaka muno.
34 “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.
Kabaakokeya, “Nafsi yango ibii ni huzuni muno, hata kuwaa mtame pano kana mugonze.”
35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,
Yesu ayei kulonge kidogo katomboka pae, kayopa, mana iwezekana saa yeno ingemuepuka.”
36 “ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.
Akoiye “Aba Tate kila kilebe kwako sando wezekana niboyee seno kikombe. Lakini kwa mapenzi gango kwaa bali kwa mapenzi gako.”
37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?
Aabui ni kuabona baginzike, ni kankokeya Petro, Simoni, ugonzike? uwesike kwaa kutama minyo hata saa yimo?
38 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
Kana mugonze ni muyope kana muise kuyingya kwenye majaribu. Hakika Roho abi radhi lakini yega dhaifu.”
39 ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.
Ayei tena kuyopa, na atumile yayegeyo gagalyo.
40 ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
Aisi tena kababon bagonzike, minyo gabe gai gatopike, batangike kwaa kele sa kumualya.
41 ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.
Aisi mara ya nyaitatu ni kuabakiya “mke mkagonza ni kupomolya? Ilengani muda uike. Lola mwana wa Adamu bankana mmaboko mwa bene sambi.
42 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
Yumukaye, tuboke lola ywa angana abi karibu.”
43 ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.
Palyo kalongela bai, Yuda, yumo wa balyo komi ni ibele, aike, ni kipenga sa bandu kuoma kwa makuhani akolo, aandishi ni agoi bai ni mapanga ni ipeke peke mmoko.
44 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.
Msaliti apayi ishara ywa nambusu ngaywembe mboywaye mumpeleke pae ya ulinzi.”
45 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.
Yuda kuika bai kayenda kwa Yesu ni kukoya “mwalimu” kam'busu.
46 ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು.
Kaban'yeya pae ya ulinzi ni kum'boywa.
47 ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Yumo kati yabe ayemi karibu yake kapiya upanga wake ni kumpumunda ni kumkata likutu mtumishi wa kahani nkolo.
48 ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?
Yesu kabaakokeya “muisi kuniboywa ni mapanga, mapekepeke kati kingongolo?
49 ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.
Wakati kila lisiku nibii na mwenga kanipundisha hekaluni, muniboywi kwaa. leno mulitei ili maandiko yatimie.
50 ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.
Balyo bote bai ni Yesu banlei ni kubutuka.
51 ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,
mwisembe yumo kankota, abii aweti shuka bai aigubike kunteteleka, kabankamwaa.
52 ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.
Kapolonyoka kaleka suka ni kubutuka utopo.
53 ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.
Kabanlongoya Yesu kwa kuhani nkolo. Palyo bakusanyike makuhani akolo bote, agoi, ni aandishi.
54 ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.
Petro ni ywembe kankota Yesu kwa kutalu, kuyenda kulua ya kuhani nkolo. Atami pamwepe ni alinzi, bai karibu ni moto kabayota kupala lyoto.
55 ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.
Muda ogo makuhani akolo ni ni baraza lote baika bapala ushaidi kuhusu Yesu ili bapate kum'bulaga. lakini baaupatike kwaa.
56 ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ.
Kuba bandu bingi baletike ushuhuda wa uboso dhidi yake, lakini ushahidi wabe upwanine kwaa.
57 ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,
Benge kabayema ni kupiya ushaidi wa ubosho dhidi yake, kabakoya,
58 “‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.
“Twan'yowine kukoya, nilipimwanane leno liekalu lisengikwe nimaboko.”
59 ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
lakini ushaidi wabe upwanine kwaa.
60 ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.
Kuhani akolo ayemi katikati yabe ni kunlokiya Yesu “Je wantopo saugwaa? bandu aba bakoya kele kwako?”
61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.
Aatami poloi ayangwi kwea kilebe. Kuhani nkolo kanlokiya tena “wenga wa kristo, mwana wa m'barikiwa?”
62 ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.
Yesu kakoya “Nenga oyo. Na ummona mwana wa Adam atami lumoko wa mmulyo wa ngupu kaisaa ni maunde ya mbinguni.”
63 ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ?
Kuhani nkolo apapwile ngobo yake ni kukoya “Je bado tukapala mashaidi?
64 ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.
Muyowine kupulu. Muamua kele? bote bate muhukumu kati mundu wakuwaa.
65 ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.
Benge kabatumbwa kumuunia mata ni kumgubika kuminyo ni kumkombwa ni kunkokeya, “Tabiri!” Maafisa kaba mpotya ni kumpumunda.
66 ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
Petro bado abi pae kuyeto, mtumishi yumo muenza wa kuhani nkolo kaisa kwake.
67 ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.
Kammona Petro palyo ayemi kayota moti, kanlokiya kwa kumsogelea kisha kakoya, ni wenga wabi ni mnazareti Yesu.”
68 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.
Lakini kakana, kakoya, nenga kwaa wala ndangike kwaa eso ukoya” Kapita kayenda kunza kuyeto
69 ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.
Lakini ntumishi nnwawa amweni palyo ayemi katumbwa kuwakokeya balyo bai bayemi palyo “Mundu oyo babalyo!”
70 ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.
Lakini kakana tena. baada balyo bai bayemi palyo bai kabankokeya Petro “Balatu wenga babalyo maana wenga wa Galilaya”.
71 ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.
Katumbwa kuibeka mwene pae ya laana ni kulapa, “Nitangike kwa mundu oyo munkoya”.
72 ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.
Nzogolo kabeka tena mara ya nyaibele. Petro kakombokeya mayegeyo ya Yesu aam'bakiye “Wangana mara tatu, kabla nzogolo ana beka mara ibele. Katomboka pae ni kulela.