< ಮಾರ್ಕನು 15 >
1 ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.
Kerkent ha ma voe deiz, ar veleien vras, gant an henaourien hag ar skribed, hag ar sanedrin o vezañ en em guzuliet, a zegasas Jezuz ereet hag en lakajont etre daouarn Pilat.
2 ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು.
Pilat a c'houlennas outañ: Bez' out-te roue ar Yuzevien? Jezuz a respontas dezhañ: Te en lavar.
3 ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.
Ar veleien vras a damalle anezhañ eus meur a dra.
4 ಆದರೆ ಪಿಲಾತನು ತಿರುಗಿ ಯೇಸುವಿಗೆ, “ನೀನು ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು,” ಎಂದು ಕೇಳಿದನು.
Met Pilat a reas c'hoazh ar goulenn-mañ outañ, o lavarout: Ne respontez netra dezho? Gwel pegement a draoù a damallont dit.
5 ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
Met Jezuz ne respontas ken netra, en hevelep doare ma oa Pilat souezhet.
6 ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
Bez' e oa ar c'hiz da leuskel dezho, da bep gouel, an hini eus ar brizonidi a c'houlenne ar bobl.
7 ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.
Hag e oa er prizon unan galvet Barabbaz gant e genseurted, rak graet o devoa ur muntr e-pad un dispac'h.
8 ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು.
Ar bobl en em lakaas da c'houlenn [gant kriadennoù bras, ] ma vije graet dezho evel m'en devoa atav graet.
9 ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು.
Pilat a respontas dezho: Fellout a ra deoc'h e laoskfen deoc'h roue ar Yuzevien?
10 ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.
Rak anavezout a rae e oa dre avi o devoa ar veleien vras e lakaet etre e zaouarn.
11 ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.
Met ar veleien vras a vroude ar bobl da c'houlenn ma vije laosket kentoc'h dezho Barabbaz.
12 ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು.
Pilat, oc'h adkemer ar gomz, a lavaras dezho: Petra a fell deoc'h e rafen eta eus an hini e c'halvit roue ar Yuzevien?
13 ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು.
Int a grias a-nevez: Ouzh ar groaz!
14 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Pilat a lavaras dezho: Met peseurt droug en deus graet? Hag e krijont c'hoazh kreñvoc'h: Ouzh ar groaz!
15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
Pilat eta, o c'hoantaat plijout d'ar bobl, a laoskas dezho Barrabaz; ha goude bezañ lakaet skourjezañ Jezuz, en roas evit bezañ staget ouzh ar groaz.
16 ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.
Ar soudarded a zegasas anezhañ e diabarzh ar palez, da lavarout eo er pretordi, hag e tastumjont eno an holl strollad.
17 ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು.
Hag e wiskjont anezhañ gant ur vantell vouk, hag e lakajont war e benn ur gurunenn spern o devoa gweet.
18 ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.
Neuze en em lakajont d'e saludiñ, o lavarout: Salud, roue ar Yuzevien!
19 ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.
Hag e skojont war e benn gant ur gorzenn, hag e krañchjont outañ, hag, o plegañ o glin, e stoujont dirazañ.
20 ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.
Goude bezañ graet goap anezhañ, e lamjont ar vantell vouk diwarnañ, e wiskjont dezhañ e zilhad en-dro, hag e kasjont anezhañ evit e lakaat ouzh ar groaz.
21 ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
Un den eus Siren, anvet Simon, tad da Aleksandr ha da Rufuz, a dremene dre eno, o tont eus ar parkeier; ober a rejont dezhañ dougen kroaz Jezuz.
22 ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು.
Hag e kasjont Jezuz d'ul lec'h anvet Golgota, da lavarout eo lec'h ar c'hlopenn.
23 ಆಗ ಅವರು ಯೇಸುವಿಗೆ ರಕ್ತಬೋಳ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ.
Hag e kinnigjont dezhañ da evañ gwin mesket gant mir; met ne evas ket anezhañ.
24 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.
Goude m'o devoe e staget ouzh ar groaz, e lodennjont e zilhad, o teurel d'ar sord, evit anavezout lod pep hini.
25 ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.
Bez' e oa an trede eur, pa en stagjont ouzh ar groaz.
26 ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.
Abeg e gondaonidigezh a oa lakaet dre ar skrid-mañ: ROUE AR YUZEVIEN.
27 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
Stagañ a rejont ivez ouzh ar groaz gantañ daou laer, unan a-zehou, hag egile a-gleiz dezhañ.
28 ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.
[Evel-se ar gomz-mañ eus ar Skritur a voe peurc'hraet: Lakaet eo bet e renk an dorfedourien.]
29 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
Ar re a dremene dre eno a lavare dismegañsoù dezhañ, o hejañ o fenn, hag o lavarout: He! Te, an hini a ziskar an templ hag en adsav e tri deiz,
30 ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದು ಬಾ,” ಎಂದು ಯೇಸುವನ್ನು ಅಪಹಾಸ್ಯ ಮಾಡಿದರು.
en em savete da-unan, ha diskenn eus ar groaz!
31 ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!
Evel-se ivez, ar veleien vras, gant ar skribed, a lavare etrezo, en ur c'hoapaat: Saveteet en deus ar re all, ha ne c'hell ket en em saveteiñ e-unan!
32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.
Ra ziskenno ar C'hrist, roue Israel, bremañ eus ar groaz, abalamour deomp d'e welout, ha ma kredimp! Hag ar re a oa staget ouzh ar groaz gantañ, a lavare ivez dismegañsoù dezhañ.
33 ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
Pa zeuas ar c'hwec'hvet eur, e voe teñvalijenn war an douar holl, betek an navet eur.
34 ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.
Ha d'an navet eur, Jezuz a grias gant ur vouezh kreñv: Eloi, Eloi, lama sabaktani? Da lavarout eo: Va Doue, va Doue, perak ec'h eus va dilezet?
35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.
Hiniennoù eus ar re a oa eno, o vezañ e glevet, a lavare: Setu e c'halv Elia.
36 ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.
Unan anezho a redas, a leunias ur spoueenn a winegr, he lakaas e penn ur gorzenn, hag he roas dezhañ da evañ, en ur lavarout: Lezit; gwelomp hag-eñ e teuio Elia d'e ziskenn.
37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು.
Neuze Jezuz, o vezañ taolet ur griadenn vras, a varvas.
38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.
Gouel an templ a rogas e div, adalek krec'h betek traoñ.
39 ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.
Ar c'hantener a oa dirazañ, o welout e oa marvet en ur grial evel-se, a lavaras: Hemañ, evit gwir, a oa Mab Doue.
40 ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.
Bez' e oa ivez gwragez a selle a-bell. En o-zouez e oa Mari a Vagdala, ha Mari mamm da Jakez ar Yaouankañ ha da Jozef, ha Salome,
41 ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು.
ar re en heulie hag en servije pa oa e Galilea, ha meur a hini all a oa pignet gantañ da Jeruzalem.
42 ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.
Diouzh an abardaez, evel ma oa deiz ar c'hempennadur, da lavarout eo deiz kent ar sabad,
43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.
Jozef a Arimatea, ur c'huzulier enoret a c'hortoze ivez rouantelezh Doue, a zeuas gant hardizhegezh da gavout Pilat, hag a c'houlennas digantañ korf Jezuz.
44 ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ
Pilat a voe souezhet bras ma oa marv ken buan; hag o vezañ galvet ar c'hantener, e c'houlennas digantañ hag-eñ e oa marv pell a oa.
45 ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು.
O vezañ anavezet kement-se, gant ar c'hantener, e roas ar c'horf da Jozef.
46 ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.
Jozef, o vezañ prenet ul lienenn, en diskennas eus ar groaz, en goloas gant ul lienenn, a lakaas anezhañ en ur bez toullet er roc'h, hag a ruilhas ur maen ouzh dor ar bez.
47 ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Mari a Vagdala ha Mari mamm Jozef, a selle pelec'h e oa lakaet.