< ಮಾರ್ಕನು 16 >

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.
Kaj kiam la sabato jam pasis, Maria Magdalena, kaj Maria, la patrino de Jakobo, kaj Salome aĉetis aromaĵojn, por ke ili iru kaj ŝmiru lin.
2 ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,
Kaj tre frue en la unua tago de la semajno ili venis al la tombo, kiam la suno ĵus leviĝis.
3 “ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kaj ili diris inter si: Kiu derulos por ni la ŝtonon de la enirejo de la tombo?
4 ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು.
kaj suprenrigardante, ili vidis, ke la ŝtono estas derulita; ĉar ĝi estis tre granda.
5 ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.
Kaj enirinte en la tombon, ili vidis junulon sidantan ĉe la dekstra flanko, vestitan per blanka robo; kaj ili miregis.
6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.
Sed li diris al ili: Ne miregu; vi serĉas Jesuon, la Nazaretanon, la krucumitan: li leviĝis; li ne estas ĉi tie; jen la loko, kien oni metis lin!
7 ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.
Sed iru, diru al liaj disĉiploj kaj al Petro: Li iras antaŭ vi en Galileon; tie vi vidos lin, kiel li diris al vi.
8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
Kaj elirinte, ili forkuris de la tombo, ĉar tremado kaj konfuziĝo posedis ilin; kaj ili diris nenion al iu, ĉar ili timis.
9 (note: The most reliable and earliest manuscripts do not include Mark 16:9-20.) ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.
(note: The most reliable and earliest manuscripts do not include Mark 16:9-20.) Sed leviĝinte frue en la unua tago de la semajno, li aperis unue al Maria Magdalena, el kiu li elpelis sep demonojn.
10 ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.
Ŝi iris, kaj sciigis ĝin al la homoj, kiuj estis kun li, dum ili malĝojis kaj ploris.
11 ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.
Kaj aŭdinte, ke li vivas kaj estas vidita de ŝi, ili ne kredis.
12 ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.
Kaj post tio li aperis sub alia formo al du el ili, dum ili piediris en la kamparon.
13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.
Kaj foririnte, ili sciigis al la aliaj, kaj ankaŭ ili ne kredis.
14 ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.
Poste li aperis al la dek unu, dum ili sidis ĉe manĝo, kaj riproĉis ilian nekredemon kaj korobstinon, ĉar ili ne kredis tiujn, kiuj vidis lin leviĝintan.
15 ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
Kaj li diris al ili: Iru en la tutan mondon, kaj prediku la evangelion al ĉiu kreitaĵo.
16 ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
Kiu kredos kaj estos baptita, tiu estos savita; sed kiu ne kredos, tiu estos kondamnita.
17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.
Kaj jenaj signoj sekvos la kredantojn: en mia nomo ili elpelos demonojn; ili parolos per lingvoj;
18 ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.
ili prenos en manojn serpentojn, kaj se ili trinkos ion mortigan, ĝi neniel difektos ilin; sur malsanulojn ili metos la manojn, kaj ili saniĝos.
19 ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.
Tiam la Sinjoro Jesuo, post kiam li parolis al ili, estis ricevita supren en la ĉielon, kaj sidiĝis dekstre de Dio.
20 ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.
Kaj elirinte, ili predikis ĉie, kaj la Sinjoro laboris kun ili kaj fortikigis la vorton per la signoj, kiuj sekvis. Amen.

< ಮಾರ್ಕನು 16 >