< ಮಾರ್ಕನು 2 >
1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.
Entró de nuevo en Cafarnaúm al cabo de cierto tiempo, y oyeron las gentes que estaba en casa.
2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.
Y se juntaron allí tantos que ya no cabían ni delante de la puerta; y les predicaba la palabra.
3 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.
Le trajeron, entonces, un paralítico, llevado por cuatro.
4 ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
Y como no podían llegar hasta Él, a causa de la muchedumbre, levantaron el techo encima del lugar donde Él estaba, y haciendo una abertura descolgaron la camilla en que yacía el paralítico.
5 ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
Al ver la fe de ellos, dilo Jesús al paralítico: “Hijo mío, tus pecados te son perdonados”.
6 ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು,
Mas estaban allí sentados algunos escribas, que pensaron en sus corazones:
7 “ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.
“¿Cómo habla Este así? Blasfema. ¿Quién puede perdonar los pecados sino solo Dios?”
8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?
Al punto Jesús, conociendo en su espíritu que ellos tenían estos pensamientos dentro de sí, les dijo: “¿Por qué discurrís así en vuestros corazones?
9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?
¿Qué es más fácil, decir al paralítico: “Tus pecados te son perdonados”, o decirle: “Levántate, toma tu camilla y anda?”
10 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,
¡Pues bien! para que sepáis que el Hijo del hombre tiene el poder de remitir los pecados, sobre la tierra,
11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
—dijo al paralítico—: “te lo digo, levántate, toma tu camilla y vuélvete a tu casa”.
12 ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Se levantó, tomó en seguida su camilla y se fue de allí, a la vista de todos, de modo que todos se quedaron asombrados y glorificaban a Dios diciendo “¡No hemos visto jamás nada semejante!”.
13 ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.
Salió otra vez a la orilla del mar, y todo el pueblo venía a Él, y les enseñaba.
14 ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Al pasar vio a Leví, hijo de Alfeo, sentado en la recaudación de impuestos, y le dijo: “Sígueme”. Y, levantándose, lo siguió.
15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.
Y sucedió que cuando Jesús estaba sentado a la mesa en casa de él, muchos publicanos y pecadores se hallaban también ( allí ) con Él y sus discípulos, porque eran numerosos los que lo habían seguido.
16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
Los escribas de entre los fariseos, empero, viendo que comía con los pecadores y publicanos, dijeron a sus discípulos: “¿Por qué come con los publicanos y los pecadores?”
17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
Mas Jesús, oyéndolo, les dijo: “No necesitan de médico los sanos, sino los que están enfermos. No vine a llamar a justos, sino a pecadores”.
18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
Un día ayunaban los discípulos de Juan y también los fariseos y vinieron a preguntarle: “¿Por qué, mientras los discípulos de Juan y los de los fariseos ayunan, tus discípulos no ayunan?”
19 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.
Respondioles Jesús: “¿Pueden acaso ayunar los compañeros del esposo mientras el esposo está con ellos? En tanto que el esposo está con ellos no pueden ayunar.
20 ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.
Pero tiempo vendrá en que el esposo les será quitado, y entonces en aquel tiempo, ayunarán.
21 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.
Nadie zurce remiendo de paño nuevo en vestido viejo; pues de lo contrario, el remiendo tira de él: lo nuevo de lo viejo, y la rotura, se hace peor.
22 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.
Nadie tampoco echa vino nuevo en cueros viejos, pues de lo contrario, el vino hará reventar los cueros, y se pierde el vino lo mismo que los cueros; sino que se ha de poner el vino nuevo en cueros nuevos”.
23 ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.
Sucedió que, un día de sábado, Él iba atravesando los sembrados, y sus discípulos, mientras caminaban, se pusieron a arrancar espigas.
24 ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.
Entonces los fariseos le dijeron: “¿Ves?” ¿Por qué hacen, en día de sábado, lo que no es lícito?”
25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?
Respondioles: “¿Nunca leísteis lo que hizo David cuando tuvo necesidad y sintió hambre, él y sus compañeros,
26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.
cómo entró en la casa de Dios, en tiempo del sumo sacerdote Abiatar y comió de los panes de la proposición, los cuales no es lícito comer sino a los sacerdotes y dio también a sus compañeros?”.
27 ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.
Y les dijo: “El sábado se hizo por causa del hombre, y no el hombre por causa del sábado;
28 ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು.
de manera que el Hijo del hombre es dueño también del sábado”.