< ಮಾರ್ಕನು 4 >

1 ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.
And again He began to teach by the sea, and there was gathered to Him a great multitude, so that He, having gone into the boat, sat in the sea, and all the multitude was near the sea, on the land,
2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:
and He taught them many things in allegories, and He said to them in His teaching:
3 “ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.
“Listen, behold, the sower went forth to sow;
4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
and it came to pass, in the sowing, some fell by the way, and the birds of the sky came and devoured it;
5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
and other fell on the rocky ground, where it did not have much earth, and immediately it sprang forth, because of having no depth of earth,
6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
and the sun having risen, it was scorched, and because of having no root it withered;
7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.
and other fell toward the thorns, and the thorns came up and choked it, and it gave no fruit;
8 ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”
and other fell to the good ground, and was giving fruit, coming up and increasing, and it was bearing, one thirty-fold, and one sixty, and one a hundred.”
9 ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.
And He said to them, “He who is having ears to hear—let him hear.”
10 ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.
And when He was alone, those around Him, with the Twelve, asked Him of the allegory,
11 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.
and He said to them, “To you it has been given to know the secret of the Kingdom of God, but to those who are outside, in allegories are all the things done,
12 ಈ ಕಾರಣದಿಂದ, “‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.
that seeing they may see and not perceive, and hearing they may hear and not understand, lest they may turn, and the sins may be forgiven them.”
13 ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
And He says to them, “Have you not known this allegory? And how will you know all the allegories?
14 ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.
He who is sowing sows the word;
15 ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.
and these are they by the way where the word is sown: and whenever they may hear, Satan immediately comes, and he takes away the word that has been sown in their hearts.
16 ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
And these are they, in like manner, who are sown on the rocky ground: who, whenever they may hear the word, immediately receive it with joy,
17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
and have no root in themselves, but are temporary; afterward tribulation or persecution having come because of the word, immediately they are stumbled.
18 ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.
And these are they who are sown toward the thorns: these are they who are hearing the word,
19 ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn g165)
and the anxieties of this age, and the deceitfulness of the riches, and the desires concerning the other things, entering in, choke the word, and it becomes unfruitful. (aiōn g165)
20 ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.
And these are they who on the good ground have been sown: who hear the word, and receive, and bear fruit, one thirty-fold, and one sixty, and one a hundred.”
21 ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
And He said to them, “Does the lamp come that it may be put under the measure, or under the bed—not that it may be put on the lampstand?
22 ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.
For there is not anything hid that may not be revealed, nor was anything kept hid but that it may come to light.
23 ಕಿವಿಯುಳ್ಳವರು ಕೇಳಲಿ.”
If any has ears to hear—let him hear.”
24 ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
And He said to them, “Take heed what you hear; in what measure you measure, it will be measured to you; and to you who hear it will be added;
25 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.
for whoever may have, there will be given to him, and whoever has not, also that which he has will be taken from him.”
26 ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.
And He said, “Thus is the Kingdom of God: as if a man may cast the seed on the earth,
27 ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
and may sleep, and may rise night and day, and the seed springs up and grows, he has not known how;
28 ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.
for of itself the earth bears fruit, first a blade, afterward an ear, afterward full grain in the ear;
29 ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.
and whenever the fruit may yield itself, immediately he sends forth the sickle, because the harvest has come.”
30 ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?
And He said, “To what may we liken the Kingdom of God, or in what allegory may we compare it?
31 ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.
As a grain of mustard, which, whenever it may be sown on the earth, is less than any of the seeds that are on the earth;
32 ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.
and whenever it may be sown, it comes up, and becomes greater than any of the herbs, and makes great branches, so that under its shade the birds of the sky are able to rest.”
33 ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.
And with many such allegories He was speaking to them the word, as they were able to hear,
34 ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
and without an allegory He was not speaking to them, and by themselves, to His disciples He was expounding all.
35 ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.
And He says to them on that day, evening having come, “We may pass over to the other side”;
36 ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.
and having let away the multitude, they take Him up as He was in the boat, and other little boats were also with Him.
37 ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.
And there comes a great storm of wind, and the waves were beating on the boat, so that it is now being filled,
38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
and He Himself was on the stern, sleeping on the pillow, and they wake Him up, and say to Him, “Teacher, are You not caring that we perish?”
39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
And having awoken, He rebuked the wind and said to the sea, “Peace, be stilled”; and the wind stilled, and there was a great calm;
40 ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.
and He said to them, “Why are you so fearful? How have you no faith?”
41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
And they feared a great fear and said to one another, “Who, then, is this, that even the wind and the sea obey Him?”

< ಮಾರ್ಕನು 4 >