< ಮಾರ್ಕನು 6 >

1 ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು.
Acuna hmün Jesuh naw ceh ta lü a ngnama cit be se axüisaw he naw pi ami läk.
2 ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?
Sabbath mhmüp pha law se Sinakoka k’uma a jah mthei. Acunüng khyang khawjah awmki he; a ngthu pyen ngja u lü, “Hin naw hawia hina ngkhaw he a jah yahei hü ni? Hina veia themnak pet hin, ia themnak ni? Ahinkba sena müncankse he jah pawhki ni?
3 ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.
Hina khyang hin Mariha ca Jakuk, Josep, Judah la Sihmona ami ktai, imksa am kya aih se? A na he pi hin üng am awmki hea kya aih u se?” tia ami ma.
4 ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.
Jesuh naw, “Sahma he cun amimäta ngnam, amimäta mjükphyüi la khuikkyawnga thea ta hmün naküta mhlünmtainak yahki he,” a ti.
5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.
Am phetkia khyang he ajawca hea khana a kut mtaih lü a jah m’yai be thea ta müncankse bilawh i pi am pawh.
6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.
Khyang he naw am ami jumeia phäha Jesuh aktäa müncaki. Acunüng ngnam he üng jah mthei hü lü ngvei hüki.
7 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.
Jesuh naw xaleinghngih he a veia jah khü lü nghngih cia a jah tüih. Ngmüimkhya kse he jah nängnaka ana a jah pet.
8 ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ.
Ami ceh üng, “Ksawngkhe thea muk, kthäheinaka ngja, nami kcukcawk üng ngui ä nami jah cehei vai.
9 ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು.
Khawdawk nami ngcum vai, kcu nghngih ä nami cehei vai,” a ti.
10 ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.
Acuna thea pi Jesuh naw, “Ahawiapi ami ning jah jenak üng nami ceh be vei acuna im üng nami awm vai.
11 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.
Am ami ning jah jenak la nami ngthu am ami ngainaka mlüha nami law üng, ceh ta u lü nami khaw üngka mput nami kha hüt vai. Acun cun ami phäha ngthumkhyanak vaia msingnaka kya khai,” a ti.
12 ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.
Acunüng cit u lü, acuna khyang he ami katnak he üngka naw ami nghlat lawnak vaia ngthu va pyenki he.
13 ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.
Khawyai he khawjah jah ksät u lü am phetki he khawjah Olip ksi am jah hluk u se yai beki he.
14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.
Sangpuxang Herod naw Jesuha ngming aktäa ngthang lawkia kyase a ngjak law. Khyang avang he naw, “Baptican Johan thihnak üngka naw tho law be ve. Acunakyase ni, hinkba khyaihbahnak he ani üng awm khai,” ami ti.
15 ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು.
Avang he naw, “Elijah ni” ami ti. Avang he naw, “Hin hin ajana ka sahma hea kba, sahma mat ni,” ami ti.
16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.
Herod naw a ngjak üng, “Hin hin a lu ka khyüna Johan ni, thihnak üngka naw tho law beki ni,” a ti.
17 ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.
Isetiakyaüng, Herod naw a na Philipa khyu, Herodih yut lü khyu naki naw, acuna nghnumia phäha Johan cun jah mansak lü thawngim üng a khyuma kyaki.
18 ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು.
Johan naw Herod üng, “Na naa khyu na khyunak hin nglawiki aw?” a ti.
19 ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
Acunakyase Herodih naw Johan cun hneng lü a mkhyüh vaia a bü, cunsepi Heroda phäha am hnim thei.
20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.
Sangpuxang Herod naw Johan cun khyang kdawa kya lü, ngcimcaihkia ksingki naw kyüh lü aktäa a yung. Johana ngthu pyena phäha kyükyawk sepi, a ngthu pyen cun ngai hlüki.
21 ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.
Mhmüp mat üng, Herod naw a hminaka khawmhmüp pawi pawh lü a khyang ngvai he, yekap ngvai he, bawi he la, Kalile khaw üng khyang ngvai he am buh a jah pawh pet. Acunüng Heroda khyu Herodih naw Johan a hnimnak vaia kcün kdaw yahki.
22 ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ,
Herodiha canu, nglaca law lü nglam lawki naw, Herod la a ngawhpüia khin he ami mlung aktäa a jah jesak. Acuna sangpuxang naw, “Ipi na ngaih kthäha, ka ning pe khai,” a ti.
23 “ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.
Acunüng Herod naw khyütam na lü, “Ipi na ngaih kthäha, ka uka khaw amte pi ka ning pe khai” a ti.
24 ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.
Acuna nglaca naw a nua veia cit lü, “Ini ka kthäh kawm?” ti se, A nu naw, “Baptican Johana lu,” a ti.
25 ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.
Acunja nglaca angxita sangpuxanga veia va cit be lü, “Baptican Johana lu, angxita mlikbe üng na na pet vai ngaih veng!” a ti.
26 ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.
Sangpuxang cun aktäa ngjutki, cunsepi a sitiha phäha la a veia ngawki khin hea phäha am ma thei.
27 ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು.
Acuna sangpuxang naw yekap angxita tüi lü, Johana lu a lawpüi vaia a mtheh. Yekap naw thawngima cit lü Johana lu a va khyün.
28 ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.
Acunüng, Johana lu mlikbe üng lawpüi lü nglaca am pe se, nglaca naw a nu üng a pet.
29 ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.
Johana axüisaw he naw ami ngjak üng a yawk va mhläm u lü ami k’ut.
30 ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.
Ngsä he Jesuha veia law be u lü ami pawhmsah he la ami jah mtheimthange avan ami mtheh law be.
31 ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು.
Khyang khawjah citcawn hüki hea kyase, Jesuh la axüisaw he ei, ami ei vaia pi am ngbünei u. Acuna Jesuh naw “Khyang am a awmnaka mi cit vai u, namimät awm u lü asäng nami xüieinak thei vaia,” a ti.
32 ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು.
Acuna angxinaka mlawng am amimät citki he.
33 ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು.
Cunsepi ami ktawih jah hmu u lü, ami unak jah ksingki he naw, ami van mlüh avan üngka naw kawng lama ana dawng u lü, Jesuh la axüisaw he am ami pha phat üng phaki he.
34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.
Jesuh mlawng üngka naw kyum law lü khyang aktäkpai, toksäm am awmkia to hea kba law u se jah hmu lü, aktäa mthinmhnateiki. Acunüng tün lü khawjah a jah mthei.
35 ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ,
Khaw mü law se axüisaw he a veia law u lü, “Hin hin angxinak khawkhyawng khawa kyaki, khaw pi mü pängki.
36 ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.
Khyang he jah tüi bea, ahina pipei ngnam he la lomaea ami ei vai kheihei hü u se,” ami ti.
37 ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.
Jesuh naw, “Nangmi naw ami ei vai iyaw jah pe ua,” a ti. Axüisaw he naw, “Cit u lü, denarih ngui phya nghngihphu muk ei vai va khei u lü kami jah pe khai aw?” ami ti.
38 ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು.
Jesuh naw, “Muk, ijah nami taki aw? Cit u lü va teng ua,” ti se. Hmu u lü, “Muk mhma la nga nghngih,” ami ti.
39 ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು.
Jesuh naw axüisaw he üng msai kxünga khana aphäh phäha ami jah ngawhsak vaia a jah mtheh.
40 ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು.
Acunüng avang aphya, avang mhmakip phäh phäha ngawki he.
41 ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು.
Acunüng Jesuh naw muk mhma la nga nghngih jah lo lü, khana mang lü, Mhnama veia jenak pyen lü, muk cun boki naw ami yet vaia axüisaw he üng a jah pet. Nga nghngih pi bo lü a jah pet.
42 ಅವರೆಲ್ಲರೂ ತಿಂದು ತೃಪ್ತರಾದರು.
Ami van naw ei u lü phüki he.
43 ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
Axüisaw he naw muk la nga mnawi mkhäm u se, cä xaleinghngih lawki.
44 ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು.
Muk eiki he cun kpami däng thawng mhma lawki he.
45 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
Jesuh naw khyang he a jah ngpyengsak k’um üng, axüisaw he mlawnga khana jah luhsak ktäih lü, caye tuili kam Bethsaida mlüh da a jah cehsak.
46 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.
Acukba khyang he a jah khyah käna amät cun ktaiyü khaia mcunga citki.
47 ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.
Khawmü lama mlawng tuili nglung üng ve se, Jesuh amät kawnga awmki.
48 ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.
Acunüng khawkhi naw ami mlawng vei hü hü se, am va pek thei u lü ami ve k’um üng, ngawi lam naji kthum la khyuka nglak üng Jesuh tuia khana ami veia lawki. Jah khye law hlü lü,
49 ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.
tuia khana cit se hmuki he naw ngmüimkhyaa sui u lü ngpyangki he.
50 ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು.
Ami van naw hmu u lü, kyühki he. Jesuh naw, “Dim’yenak am ve ua, kei ni, ä kyüh ua,” ti lü a jah msang.
51 ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.
Acunüng ami veia mlawnga khana kai hnga se khawkhi ngdümki. Acunüng ami van aktäa cäi leng lengki he.
52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.
Isetiakyaüng muk am a jah mcaha mawng pi akcanga am ami ksing theia phäha kyaki; ami ngaikyunak naw am ksing thei.
53 ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.
Tuili khe u lü ami va pek käna Kenesaret mlüh kawnga pha law u lü, tui kama ami mlawng cun ami kphung.
54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.
Mlawng üngka naw ami kyum law la khyang he naw Jesuh cun ami ksing law.
55 ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.
Acunakyase khaw üngka avan dawng law u lü, Jesuh awmki ti ami ngjaknak avana, am phetki he cun ami ngjännak maha a veia ami jah kawh law.
56 ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
Ahawia pi Jesuh a cehnak ngnam avan, mlüh avan la loma avana, am phetkia khyang he jah lawpüi u lü khyang hea ngcunnak hmüna jah ta hüt u lü, a suisak mdawngca hleng hnet vaia ami nghuinak. Acunüng hnetki avan cun phet beki he.

< ಮಾರ್ಕನು 6 >