< ಮಾರ್ಕನು 9 >
1 ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
Yesu akaendelea kuwaambia, “Kweli nawaambieni, wako wengine papa hapa ambao hawatakufa kabla ya kuuona Ufalme wa Mungu ukija kwa enzi.”
2 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.
Baada ya siku sita, Yesu aliwachukua Petro, Yakobo na Yohane juu ya mlima mrefu peke yao. Huko, Yesu akageuka sura mbele yao,
3 ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.
mavazi yake yakang'aa, yakawa meupe sana, jinsi dobi yeyote duniani asingeweza kuyafanya meupe.
4 ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.
Eliya na Mose wakawatokea, wakazungumza na Yesu.
5 ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.
Petro akamwambia Yesu, “Mwalimu, ni vizuri sana kwamba tuko hapa. Basi, afadhali tujenge vibanda vitatu: kimoja chako, kimoja cha Mose na kimoja cha Eliya.”
6 ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.
Yeye na wenzake waliogopa hata hakujua la kusema.
7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
Kisha likatokea wingu likawafunika, na sauti ikasikika kutoka katika hilo wingu, “Huyu ni Mwanangu mpendwa, msikilizeni.”
8 ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.
Mara wanafunzi hao wakatazama tena, lakini hawakumwona mtu mwingine, ila Yesu peke yake pamoja nao.
9 ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.
Walipokuwa wakishuka mlimani, Yesu aliwakataza wasimwambie mtu yeyote mambo waliyoyaona, mpaka Mwana wa Mtu atakapokuwa amefufuka kutoka wafu.
10 “ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
Basi, wakashika agizo hilo, lakini wakawa wanajadiliana wao kwa wao maana ya kufufuka kutoka wafu.
11 ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
Wakamwuliza Yesu, “Mbona walimu wa Sheria wanasema kwamba ni lazima Eliya aje kwanza?”
12 ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?
Naye akawajibu, “Naam, Eliya anakuja kwanza kutayarisha yote. Hata hivyo, kwa nini basi imeandikwa katika Maandiko Matakatifu kwamba Mwana wa Mtu atapatwa na mateso mengi na kudharauliwa?
13 ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Lakini nawaambieni, Eliya amekwisha kuja, nao wakamtendea walivyotaka kama ilivyoandikwa juu yake.”
14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.
Walipowafikia wale wanafunzi wengine, waliona umati mkubwa wa watu hapo. Na baadhi ya walimu wa Sheria walikuwa wanajadiliana nao.
15 ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.
Mara tu ule umati wa watu ulipomwona, wote walishangaa sana, wakamkimbilia wamsalimu.
16 ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.
Yesu akawauliza, “Mnajadiliana nini nao?”
17 ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.
Hapo mtu mmoja katika ule umati wa watu akamjibu, “Mwalimu, nimemleta mwanangu kwako, ana pepo aliyemfanya kuwa bubu.
18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.
Kila mara anapomvamia, humwangusha chini na kumfanya atokwe na povu kinywani, akisaga meno na kuwa mkavu mwili wote. Niliwaomba wanafunzi wako wamtoe huyo pepo lakini hawakuweza.”
19 ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
Yesu akawaambia, “Enyi kizazi kisicho na imani! Nitakaa nanyi mpaka lini? Nitawavumilia mpaka lini? Mleteni kwangu.”
20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
Wakampeleka. Mara tu huyo pepo alipomwona Yesu, alimtia mtoto kifafa, naye mtoto akaanguka chini, akagaagaa na kutoka povu kinywani. Yesu akamwuliza baba yake huyo mtoto,
21 ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.
“Amepatwa na mambo hayo tangu lini?” Naye akamjibu, “Tangu utoto wake.
22 ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.
Na mara nyingi pepo huyo amemwangusha motoni na majini, ili amwangamize kabisa. Basi, ikiwa waweza, utuhurumie na kutusaidia!”
23 ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
Yesu akamwambia, “Eti ikiwa waweza! Mambo yote yanawezekana kwa mtu aliye na imani.”
24 ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
Hapo, huyo baba akalia kwa sauti, “Naamini! Lakini imani yangu haitoshi, nisaidie!”
25 ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
Yesu alipouona umati wa watu unaongezeka upesi mbele yake, alimkemea yule pepo mchafu, “Pepo unayemfanya huyu mtoto kuwa bubu-kiziwi, nakuamuru, mtoke mtoto huyu wala usimwingie tena!”
26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.
Hapo huyo pepo alipaaza sauti, akamwangusha huyo mtoto chini, kisha akamtoka. Mtoto alionekana kama maiti, hata wengine walisema, “Amekufa!”
27 ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
Lakini Yesu akamshika mkono, akamwinua, naye akasimama.
28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
Yesu alipoingia nyumbani, wanafunzi wake walimwuliza kwa faragha, “Kwa nini sisi hatukuweza kumtoa?”
29 ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
Naye akawaambia, “Pepo wa aina hii hawezi kutoka isipokuwa kwa sala tu.”
30 ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.
Yesu na wanafunzi wake waliondoka hapo, wakaendelea na safari kupitia wilaya ya Galilaya. Yesu hakupenda watu wajue alipokuwa,
31 ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.
kwa sababu alikuwa anawafundisha wanafunzi wake. Aliwaambia, “Mwana wa Mtu atakabidhiwa kwa watu ambao watamuua; lakini siku ya tatu baada ya kuuawa atafufuka.”
32 ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.
Wanafunzi hawakufahamu jambo hilo. Wakaogopa kumwuliza.
33 ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.
Basi, walifika Kafarnaumu. Na alipokuwa nyumbani, aliwauliza, “Mlikuwa mnajadiliana nini njiani?”
34 ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.
Lakini wao wakanyamaza, maana njiani walikuwa wamebishana ni nani aliye mkuu kati yao.
35 ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.
Yesu akaketi chini, akawaita wale kumi na wawili, akawaambia, “Yeyote anayetaka kuwa wa kwanza lazima awe wa mwisho na kuwa mtumishi wa wote.”
36 ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,
Kisha akamchukua mtoto mdogo, akamsimamisha kati yao, akamku mbatia, halafu akawaambia,
37 “ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
“Anayempokea mtoto kama huyu kwa jina langu, ananipokea mimi; na anayenipokea mimi, hanipokei mimi tu, bali anampokea yule aliyenituma.”
38 ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.
Yohane akamwambia, “Mwalimu, tumemwona mtu mmoja akitoa pepo kwa kulitumia jina lako, nasi tukajaribu kumkataza kwa kuwa yeye si mmoja wetu.”
39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.
Lakini Yesu akasema, “Msimkataze, maana hakuna mtu anayefanya muujiza kwa jina langu, na papo hapo akaweza kusema mabaya juu yangu.
40 ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
Maana, asiyepingana nasi, yuko upande wetu.
41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Mtu yeyote atakeyewapeni kikombe cha maji ya kunywa kwa sababu ninyi ni watu wake Kristo, hakika hatakosa kupata tuzo lake.
42 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
“Mtu yeyote atakayemfanya mmoja wa hawa wadogo wanaoniamini atende dhambi, ingekuwa afadhali kwa mtu huyo kufungiwa shingoni mwake jiwe kubwa la kusagia na kutupwa baharini.
43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
Mkono wako ukikukosesha, ukate! Afadhali kuingia kwenye uzima bila mkono mmoja, kuliko kuwa na mikono miwili na kwenda katika moto wa Jehanamu. (Geenna )
44 ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
Humo, wadudu wake hawafi na moto hauzimiki.
45 ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
Na mguu wako ukikukosesha, ukate! Afadhali kuingia katika uzima bila mguu mmoja, kuliko kuwa na miguu yote miwili na kutupwa katika moto wa Jehanamu. (Geenna )
46 ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
Humo, wadudu wake hawafi na moto hauzimiki.
47 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. (Geenna )
Na jicho lako likikukosesha, ling'oe! Afadhali kuingia katika utawala wa Mungu ukiwa na jicho moja tu, kuliko kuwa na macho yako yote mawili na kutupwa katika moto wa Jehanamu. (Geenna )
48 ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’
Humo wadudu wake hawafi, na moto hauzimiki.
49 ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
“Maana kila mmoja atakolezwa kwa moto.
50 “ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.
Chumvi ni nzuri, lakini ikipoteza ladha yake, itakolezwa na nini? Muwe na chumvi ndani yenu na kudumisha amani kati yenu.”