< ಮತ್ತಾಯನು 10 >

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.
तवय येशुनी आपला बारा शिष्यसले जोडे बलाईसन भूते काढाना अनी सर्वा रोग अनं सर्वा दुर्बलसले बरं कराना अधिकार दिधा.
2 ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;
त्या बारा शिष्यसना नावे असा शेतस पहिला, पेत्र ज्याले शिमोन म्हणतस अनं त्याना भाऊ अंद्रिया; जब्दीना पोऱ्या याकोब, अनं त्याना भाऊ योहान,
3 ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;
फिलीप्प अनं बर्थलमय; थोमा, अनं मत्तय जकातदार; अल्फीना पोऱ्या याकोब अनं तद्दय;
4 ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
शिमोन कनानी अनं येशुले धरीसन देणारा यहुदा इस्कर्योत.
5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.
ह्या बारा जणसले येशुनी अशी आज्ञा करीसन धाडं, की, गैरयहूदीसकडे जावानी वाट वरतीन जाऊ नका, अनं शोमरोनी लोकसना कोणताच शहरमा जावू नका;
6 ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
तर इस्त्राएलसना घरमधला दवडेल मेंढरसकडे जा.
7 ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.
अनी जावाना येळले अशी घोषणा करा की, स्वर्गना राज्य जोडे येल शे.
8 ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
अनं रोगीसले बरं करा, मरेलसले ऊठाडा, कोड लागलेसले शुध्द करा, अनं भूते काढा कारण जे तुमले मोफत मिळनं ते तुम्हीन मोफत द्या.
9 “ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ.
सोनं, चांदी अनं तांबाना पैसा आपला कंबरबंधमा लेवु नका;
10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.
प्रवासकरता झोळी, दुसरा कपडा, जोडा लेवु नका, कारण काम करनारासनं पोषण व्हवाकरता हाई योग्य शे.
11 ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.
ज्या ज्या शहरमा गावसमा तुम्हीन जाशात तठे कोण योग्य शे हाई शोधी काढा अनं तुम्हीन तठेन निंघतस तोपावत त्यासना आठेच राहा;
12 ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.
जवय तुम्हीन त्या घरमा जाशात तवय तठे तुमले शांती मिळो असं म्हणा;
13 ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ते घर चांगलं ऱ्हायनं तर तुम्हीन देयल शांतीना आशिर्वाद त्यासले लागो; अनं जर त्या चांगला नही राहीनात तर तो आशिर्वाद तुमनाकडे परत येवो.
14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
जो कोणी तुमनं स्वागत करावं नही, अनं तुमनं वचन ऐकावु नही, त्या घरमातीन किंवा शहरमातीन निंघतांना आपला पायनी धुळ झटकी टाका.
15 ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
मी तुमले सत्य सांगस, न्यायना दिनले त्या शहरनापेक्षा सदोम अनं गमोरा ह्या प्रदेशले सोपं जाई.
16 “ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
लांडगासमा जसं मेंढरूले धाडतस तसं मी तुमले धाडी ऱ्हायनु म्हणीसन तुम्हीन सापनामायक चपळ अनं कबुतरना मायक भोळा बना.
17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
लोकसपाईन सावध राहा; कारण त्या तुमले न्यायलयना स्वाधीन करतीन, अनी त्यासना सभास्थानमा तुमले फटका मारतीन,
18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.
अनी देशना अधिकारीसले, राजासले अनं गैरयहूदीसले समजाले पाहिजे की तुम्हीन मना साक्षीदार शेतस, म्हणीसन तुमले त्यासनासमोर नेतीन.
19 ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,
जवय तुमले त्यासना स्वाधीन करतीन तवय कसं काय बोलानं यानी चिंता करू नका, कारण तुमले जे काही बोलना शे हाई त्याच येळले तुमले सुचाडाई जाई.
20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.
कारण बोलणारा तुम्हीन नही, तर तुमना स्वर्गना बापना आत्मा हाऊच तुमनामा बोलणारा शे,
21 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
भाऊ भाऊले अनी बाप आपला पोऱ्याले मारा करता धरी दि; पोऱ्या मायबापसं विरूध्द ऊठतीन, त्यासले मारी टाकतीन;
22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
मना नावमुये सर्वा लोके तुमनी निंदा करतीन; पण जो शेवटपावत टिकी राही त्यानंच तारण व्हई.
23 ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
जवय एक गावमा तुमना छळ व्हई तवय दुसरा गावमा पळी जा; मी तुमले खरंखरं सांगस की, याना पहिले तुमनं इस्त्राएलना सर्वा नगरसमा फिरीनं व्हस नही, तोपावत मनुष्यना पोऱ्या ई जाई.
24 “ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ.
गुरूपेक्षा शिष्य थोर नही अनी मालकपेक्षा नोकर थोर नही.
25 ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!
शिष्यसनी गुरूनामायक अनी नोकरनी मालकनामायक व्हावं, इतलंच त्यासले पुरं, घर धनीले सैतान म्हणतस, तर घरना लोकसले का बरं नही म्हणतीन?
26 “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.
यामुये त्यासले घाबरू नका; कारण उघडामा ई अस काहीच झाकायल नही अनी कळाव नही अस काहीच गुप्त नही.
27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.
जे मी तुमले अंधारमा सांगस, ते उजेडमा बोला, अनी जे काही तुम्हीन कानतीन ऐकतस ते धाबावर जाईन प्रचार करा.
28 ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ. (Geenna g1067)
ज्या शरिरना नाश करतस पण आत्माना नाश कराले समर्थ नही त्यासले घाबरू नका, तर आत्मा अनं शरीर ह्या दोन्हीसले नरकमा नाश कराले जो परमेश्वर समर्थ शे त्याले घाबरा. (Geenna g1067)
29 ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.
एक नाणामा दोन चिमण्या ईकतस की, नही? तरी पण तुमना स्वर्गना बापशिवाय त्यापाईन एक बी जमीनवर पडस नही.
30 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
तुमना डोकावरना सर्वा केस बी मोजेल शेतस.
31 ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
म्हणीन घाबरू नका, कारण बराच चिमण्यासपेक्षा तुमनं मोल अधिक शे.
32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
जो कोणी लोकसना समोर मना स्विकार करी, त्याना स्विकार मी मना स्वर्गना बापसमोर करसु;
33 ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.
पण जो कोणी लोकसना समोर माले नाकारी, त्याना नाकार मी मना स्वर्गना बापसमोर करसु;
34 “ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.
अस नका समजा; की मी पृथ्वीवर शांतता कराले येल शे; मी शांतता कराले नही तर तलवार चालाडाले येल शे.
35 ಹೇಗೆಂದರೆ, “‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.
कारण पोऱ्या अनं बाप, पोर अनं माय, सुन अनं सासु, यासमा फुट पाडाकरता मी येल शे;
36 ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’
अनी माणुसनाच घरना लोके त्याना वैरी व्हतीन.
37 “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.
जो कोणी मनापेक्षा बाप अनं मायवर जास्त प्रेम करस तो माले योग्य नही; जो मनापेक्षा पोऱ्यावर किंवा पोरवर जास्त प्रेम करस तो माले योग्य नही;
38 ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.
अनी जो कोणी स्वतःना क्रुसखांब उचलीन मनामांगे येस नही तो माले योग्य नही.
39 ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.
जो स्वतःना जिवले वाचाडी तो त्याले गमाडी, अनी जो मनाकरता स्वतःना जिव गमाडी, तो त्याना जिवले वाचाडी.
40 “ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.
जो तुमना स्विकार करस, तो मना स्विकार करस अनी जो माले स्वीकारस, तो ज्यानी माले धाडेल शे त्याले स्वीकारस.
41 ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.
जो संदेष्टाले म्हणीन स्वीकारस त्याले संदेष्टानं प्रतिफळ मिळी; अनी न्यायी माणुसले न्यायी म्हणीसन जो त्याना स्विकार करी, त्याले न्यायीजणसना प्रतिफळ मिळी;
42 ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”
मी तुमले खरंखरं सांगस, जो कोणी ह्या धाकलासपैकी एकले मना शिष्य समजीन गल्लासभर थंड पाणी पाजी, तर त्याले त्यानं प्रतिफळ मिळाशिवाय रावावू नही.

< ಮತ್ತಾಯನು 10 >