< ಮತ್ತಾಯನು 14 >
1 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,
Того часу Ірод четверовластник почув чутку про Ісуса,
2 ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.
і рече до слуг своїх: Се Йоан Хреститель; він устав з мертвих, то й чудеса дїють ся від него,
3 ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.
Бо Ірод піймав був Йоана, звязав його, і вкинув у темницю за Іродияду, жінку брата свого Филипа.
4 ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.
Бо казав йому Иоан: Не годить ся тобі мати її.
5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.
І, хотїв його стратити, та опасувась народу; бо мали його за пророка.
6 ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.
У день же родин Іродових, дочка Іродиядвна танцювала перед ними й догодила Іродові.
7 ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.
За се обіцяв він, клянучись, що дасть їй, чого просити ме.
8 ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.
Вона ж, наперед навчена від матері: Дай менї, каже, тут на блюдї голову Иоана Хрестителя.
9 ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
І засумів Ірод; однак, задля клятьби й задля тих, що сиділи з ним за столом, звелїв дати.
10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.
І, пославши, стяв Йоана в темниці.
11 ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
І принесено голову його на блюдї, й дано дївчинї, вона ж віднесла матері своїй.
12 ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.
І прийшли ученики його, і взяли тїло, й поховали його, й прийшовши, сповістили Ісуса.
13 ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.
Почувши про се Ісус, поплив звідтіля човном у пустиню сам один; і почувши народ, піишов слідом за Ним пішки з городів.
14 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.
І, вийшовши Ісус, побачив багато народу, й жалкував над ними, й сцїлив недужих їх.
15 ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.
Як же настав вечір, приступили до Него ученики Його, говорячи: Тут пустиня, і час уже минув; відошли народ, нехай іде в села, та накупить харчі собі.
16 ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.
Ісус же рече їм: Не треба їм ійти; дайте ви їм їсти.
17 ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.
Вони ж кажуть Йому: Не маємо тут, як тільки пять хлїбів та дві рибі.
18 ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು.
Він же рече: Принесіть менї їх сюди.
19 ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
І звелїв народові посідати на траві, і, взявши пять хлїбів та дві рибі, й поглянувши на небо, поблагословив, і, ламлючи, подавав хлїби ученикам, а ученики людям.
20 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
І їли вони всї, й понаїдались; і назбирали окрушин, що позоставались, дванайцять повних кошів.
21 ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
А тих, що їли, було тисяч із пять чоловіка, опріч жінок та дітей.
22 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
І примусив зараз Ісус учеників своїх увійти в човен, і плисти поперед Него на той бік, поки Він одпустить народ.
23 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.
А відпустивши народ, зійшов на гору самотою молитись; і як настав вечір, був там один.
24 ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
Човен же був уже серед моря, і било його филями; бо вітер був противний.
25 ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.
У четверту ж сторожу ночи, прийшов до них Ісус, ідучи по морю.
26 ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು.
І побачивши ученики, що Він іде по морю, стрівожились, кажучи, що се мара, й кричали з переляку.
27 ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.
Ісус же заговорив зараз до них, глаголючи: Спокойте ся: се я: не лякайтесь.
28 ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.
Петр же, озвавшись, каже до Него: Господи, коли се Ти, зведи менї йти то Тебе по водї.
29 ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.
Він же рече: Іди. І вийшов Петр із човна, й пійшов по водї, щоб ійти до Ісуса.
30 ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.
Та, бачивши сильний вітер, злякавсь, і, почавши тонути, кричав, говорячи: Господи, спаси мене.
31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.
Ісус же простяг зараз руку, вхопив його, й рече до него: Маловіре, чого всумнив ся єси?
32 ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.
І як увійшли вони в човен, утих вітер.
33 ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.
А ті, що були в човнї, приступивши, поклонились Йому, кажучи: Істино Божий Син єси.
34 ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.
І, попливши, прибули вони в землю Генисарецьку.
35 ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.
І дознавши Його тамешні люде, послали по всій тій околиці, і приводили до Него всіх недужих;
36 ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.
і благали Його, щоб тільки приторкнутись їм до краю одежі Його; й скільки їх доторкувалось, одужували.