< ಮತ್ತಾಯನು 16 >
1 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.
Acercáronse los fariseos y saduceos y, para ponerlo a prueba le pidieron que les hiciese ver alguna señal del cielo.
2 ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ
Mas Él les respondió y dijo: “Cuando ha llegado la tarde, decís: Buen tiempo, porque el cielo está rojo”,
3 ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.
y a la mañana: “Hoy habrá tormenta, porque el cielo tiene un rojo sombrío”. Sabéis discernir el aspecto del cielo, pero no las señales de los tiempos.
4 ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.
Una generación mala y adúltera requiere una señal: no le será dada otra que la del profeta Jonás”. Y dejándolos, se fue.
5 ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.
Los discípulos, al ir a la otra orilla, habían olvidado de llevar panes.
6 ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.
Y Jesús les dijo: “Mirad y guardaos de la levadura de los fariseos y de los saduceos”.
7 ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.
Ellos dentro de sí discurrían diciendo: “Es que no hemos traído panes”.
8 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?
Mas Jesús lo conoció y dijo: “Hombres de poca fe; ¿qué andáis discurriendo dentro de vosotros mismos que no tenéis panes?
9 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
¿No entendéis todavía, ni recordáis los cinco panes de los cinco mil, y cuántos canastos recogisteis?
10 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ?
¿Ni los siete panes de los cuatro mil, y cuántos canastos recogisteis?
11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.
¿Cómo no entendéis que no de los panes os quería hablar al deciros: “Guardaos de la levadura de los fariseos y de los saduceos?”
12 ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.
Entonces, comprendieron que no había querido decir que se guardasen de la levadura de los panes, sino de la doctrina de los fariseos y saduceos.
13 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.
Y llegado Jesús a la región de Cesarea de Filipo, propuso esta cuestión a sus discípulos: “¿Quién dicen los hombres que es el Hijo del hombre?”
14 ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.
Respondieron: “Unos dicen que es Juan el Bautista, otros Elías, otros Jeremías o algún otro de los profetas”.
15 ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.
Díjoles: “Y según vosotros, ¿quién soy Yo?”
16 ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.
Respondiole Simón Pedro y dijo: “Tú eres el Cristo, el Hijo del Dios vivo”.
17 ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
Entonces Jesús le dijo: “Bienaventurado eres, Simón Bar-Yoná, porque carne y sangre no te lo reveló, sino mi Padre celestial.
18 ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು. (Hadēs )
Y Yo, te digo que tú eres Pedro, y sobre esta piedra edificaré mi Iglesia, y las puertas del abismo no prevalecerán contra ella. (Hadēs )
19 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.
A ti te daré las llaves del reino de los cielos: lo que atares sobre la tierra, estará atado en los cielos, lo que desatares sobre la tierra, estará desatado en los cielos”.
20 ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.
Entonces mandó a sus discípulos que no dijesen a nadie que Él era el Cristo.
21 ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.
Desde entonces comenzó Jesús a declarar a sus discípulos que Él debía ir a Jerusalén y sufrir mucho de parte de los ancianos, de los sumos sacerdotes y de los escribas, y ser condenado a muerte y, resucitar al tercer día.
22 ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.
Mas Pedro, tomándolo aparte, se puso a reconvenirle, diciendo: “¡Lejos de Ti, Señor! Esto no te sucederá por cierto”.
23 ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.
Pero Él volviéndose, dijo a Pedro: “¡Quítateme de delante, Satanás! ¡Un tropiezo eres para Mí, porque no sientes las cosas de Dios, sino las de los hombres!”.
24 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Entonces, dijo a sus discípulos: “Si alguno quiere seguirme, renúnciese a sí mismo, y lleve su cruz y siga tras de Mí.
25 ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
Porque el que quisiere salvar su alma, la perderá; y quien pierda su alma por mi causa, la hallará.
26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
Porque ¿de qué sirve al hombre, si gana el mundo entero, mas pierde su alma? ¿O qué podrá dar el hombre a cambio de su alma?
27 ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.
Porque el Hijo del hombre ha de venir, en la gloria de su Padre, con sus ángeles, y entonces dará a cada uno según sus obras.
28 “ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.
En verdad, os digo, algunos de los que están aquí no gustarán la muerte sin que hayan visto al Hijo del hombre viniendo en su Reino”.