< ಮತ್ತಾಯನು 17 >
1 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.
A po šesti dnech pojal Ježíš Petra a Jakuba a Jana bratra jeho, i uvedl je na horu vysokou soukromí,
2 ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.
A proměnil se před nimi. I zastkvěla se tvář jeho jako slunce, a roucho jeho učiněno bílé jako světlo.
3 ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.
A aj, ukázali se jim Mojžíš a Eliáš, rozmlouvající s ním.
4 ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.
A odpověděv Petr, řekl Ježíšovi: Pane, dobré jest nám tuto býti. Chceš-li, udělejme tuto tři stánky, tobě jeden a Mojžíšovi jeden a Eliášovi jeden.
5 ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.
Když pak on ještě mluvil, aj, oblak světlý zastínil je. A aj, zavzněl hlas z oblaku řkoucí: Toto jest ten můj milý Syn, v němž mi se dobře zalíbilo, toho poslouchejte.
6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
To uslyšavše učedlníci, padli na tváři své a báli se velmi.
7 ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.
A přistoupiv Ježíš, dotekl se jich, řka jim: Vstaňte, nebojte se.
8 ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
A pozdvihše očí svých, žádného neviděli, než samého Ježíše.
9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.
Když pak sstupovali s hory, přikázal jim Ježíš, řka: Žádnému nepravte tohoto vidění, dokudž by Syn člověka nevstal z mrtvých.
10 ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
I otázali se ho učedlníci jeho, řkouce: Což to pak zákoníci praví, že má Eliáš prve přijíti?
11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.
A Ježíš odpovídaje, řekl jim: Eliáš zajisté přijde prve a napraví všecky věci.
12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
Ale pravím vám, že Eliáš již přišel, avšak nepoznali ho, ale učinili mu, což chtěli. Takť i Syn člověka trpěti bude od nich.
13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
Tedy srozuměli učedlníci, že jim to praví o Janovi Křtiteli.
14 ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,
A když přišli k zástupu, přistoupil k němu člověk jeden, a poklekl před ním na kolena,
15 “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
A řekl: Pane, smiluj se nad synem mým, nebo náměsičník jest, a bídně se trápí. Èasto zajisté padá do ohně a častokrát do vody.
16 ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.
I přivedl jsem ho učedlníkům tvým, ale nemohli ho uzdraviti.
17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
Odpovídaje pak Ježíš, řekl: Ó národe nevěrný a převrácený, dokud budu s vámi? Dokudž vás trpěti budu? Přiveďte jej sem ke mně.
18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
I pohrozil jemu Ježíš. I vyšlo od něho ďábelství a uzdraven jest mládenec v tu hodinu.
19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
Tedy přistoupivše učedlníci k Ježíšovi soukromí, řekli jemu: Proč jsme my ho nemohli vyvrci?
20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.
Řekl jim Ježíš: Pro nevěru vaši. Amen zajisté pravím vám: Budete-li míti víru, jako jest zrno horčičné, díte hoře této: Jdi odsud tam, a půjde, a nebudeť vám nic nemožného.
21 ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.
Toto pak pokolení nevychází, jediné skrze modlitbu a půst.
22 ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.
A když byli v Galileji, řekl jim Ježíš: Syn člověka bude zrazen v ruce lidí bezbožných.
23 ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.
A zabijíť jej, a třetího dne z mrtvých vstane. I zarmoutili se náramně.
24 ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.
A když přišli do Kafarnaum, přistoupili, kteříž plat vybírali, ku Petrovi a řekli: Což mistr váš nedává platu?
25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.
A on řekl: Dává. A když všel do domu, předšel jej Ježíš řečí, řka: Co se tobě zdá, Šimone? Králové zemští od kterých berou daň anebo plat, od synů-li svých, čili od cizích?
26 “ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.
Odpověděl jemu Petr: Od cizích. I dí mu Ježíš: Tedy synové jsou svobodní?
27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.
Ale abychom jich nepohoršili, jda k moři, vrz udici, a tu rybu, kteráž nejprve uvázne, vezmi, a otevra ústa její, nalezneš groš. Ten vezma, dej jim za mne i za sebe.