< ಮತ್ತಾಯನು 18 >

1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು.
En aquel tiempo, los discípulos se llegaron a Jesús y le preguntaron: “En conclusión, ¿quién es el mayor en el reino de los cielos?”
2 ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ,
Entonces, Él llamó a sí a un niño, lo puso en medio de ellos,
3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
y dijo: “En verdad, os digo, si no volviereis a ser como los niños, no entraréis en el reino de los cielos.
4 ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.
Quien se hiciere pequeño como este niñito, ese es el mayor en el reino de los cielos.
5 ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.
Y quien recibe en mi nombre a un niño como este, a Mí me recibe”.
6 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.
“Pero quien encandalizare a uno solo de estos pequeños que creen en Mí, más le valdría que se le suspendiese al cuello una piedra de molino de las que mueve un asno, y que fuese sumergido en el abismo del mar.
7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!
¡Ay del mundo por los escándalosPorque forzoso es que vengan escándalos, pero ¡ay del hombre por quien el escándalo viene!
8 ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (aiōnios g166)
Si tu mano o tu pie te hace tropezar, córtalo y arrójalo lejos de ti. Más te vale entrar en la vida manco o cojo, que ser, con tus dos manos o tus dos pies, echado en el fuego eterno. (aiōnios g166)
9 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (Geenna g1067)
Y si tu ojo te hace tropezar, sácalo y arrójalo lejos de ti. Más te vale entrar en la vida con un solo ojo, que ser, con tus dos ojos, arrojado en la gehenna del fuego. (Geenna g1067)
10 “ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.
Guardaos de despreciar a uno solo de estos pequeños, porque os digo que sus ángeles, en los cielos, ven continuamente la faz de mi Padre celestial.
11 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
[Porque el Hijo del hombre ha venido a salvar lo que estaba perdido]”.
12 “ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?
“¿Qué os parece? Si un hombre tiene cien ovejas y una de ellas se llega a descarriar, ¿no dejará sobre las montañas las noventa y nueve, para ir en busca de la que se descarrió?
13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
Y si llega a encontrarla, en verdad, os digo, tiene más gozo por ella que por las otras noventa y nueve, que no se descarriaron.
14 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
De la misma manera, no es voluntad de vuestro Padre celestial que se pierda uno de estos pequeños”.
15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
“Si tu hermano peca [contra ti] repréndelo entre ti y él solo; si te escucha, habrás ganado a tu hermano.
16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’
Si no te escucha toma todavía contigo un hombre o dos, para que por boca de dos testigos o tres conste toda palabra.
17 ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
Si a ellos no escucha, dilo a la Iglesia. Y si no escucha tampoco a la Iglesia, sea para ti como un pagano y como un publicano.
18 “ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
En verdad, os digo, todo lo que atareis sobre la tierra, será atado en el cielo, y todo lo que desatareis sobre la tierra, será desatado en el cielo”.
19 “ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.
“De nuevo, en verdad, os digo, si dos de entre vosotros sobre la tierra se concertaren acerca de toda cosa que pidan, les vendrá de mi Padre celestial.
20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.
Porque allí donde dos o tres están reunidos por causa mía, allí estoy Yo en medio de ellos”.
21 ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.
Entonces Pedro le dijo: “Señor, ¿cuántas veces pecará mi hermano contra mí y le perdonaré? ¿Hasta siete veces?”
22 ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
Jesús le dijo: “No te digo hasta siete veces, sino hasta setenta veces siete.
23 “ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Por eso el reino de los cielos es semejante a un rey que quiso ajustar cuentas con sus siervos.
24 ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
Y cuando comenzó a ajustarlas, le trajeron a uno que le era deudor de diez mil talentos.
25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.
Como no tenía con qué pagar, mandó el Señor que lo vendiesen a él, a su mujer y a sus hijos y todo cuanto tenía y se pagase la deuda.
26 “ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.
Entonces arrojándose a sus pies el siervo, postrado, le decía: “Ten paciencia conmigo, y te pagaré todo”
27 ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
Movido a compasión el amo de este siervo, lo dejó ir y le perdonó la deuda.
28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.
Al salir, este siervo encontró a uno de sus compañeros, que le debía cien denarios, y agarrándolo, lo sofocaba y decía: “Paga lo que debes”.
29 “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.
Su compañero, cayendo a sus pies, le suplicaba y decía: “Ten paciencia conmigo y te pagaré”.
30 “ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Mas él no quiso, y lo echó a la cárcel, hasta que pagase la deuda.
31 ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.
Pero, al ver sus compañeros lo ocurrido, se contristaron sobremanera y fueron y contaron al amo todo lo que había sucedido.
32 “ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.
Entonces lo llamó su señor y le dijo: “Mal siervo, yo te perdoné toda aquella deuda como me suplicaste.
33 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,
¿No debías tú también compadecerte de tu compañero, puesto que yo me compadecí de ti?”
34 ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.
Y encolerizado su señor, lo entregó a los verdugos hasta que hubiese pagado toda su deuda.
35 “ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.
Esto hará con vosotros mi Padre celestial si no perdonáis de corazón cada uno a su hermano”.

< ಮತ್ತಾಯನು 18 >