< ಮತ್ತಾಯನು 19 >

1 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು.
Когда Иисус окончил слова сии, то вышел из Галилеи и пришел в пределы Иудейские, Заиорданскою стороною.
2 ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.
За Ним последовало много людей, и Он исцелил их там.
3 ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.
И приступили к Нему фарисеи и, искушая Его, говорили Ему: по всякой ли причине позволительно человеку разводиться с женою своею?
4 ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.
Он сказал им в ответ: не читали ли вы, что Сотворивший вначале мужчину и женщину сотворил их?
5 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ?
И сказал: посему оставит человек отца и мать и прилепится к жене своей, и будут два одною плотью,
6 ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು.
так что они уже не двое, но одна плоть. Итак, что Бог сочетал, того человек да не разлучает.
7 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.
Они говорят Ему: как же Моисей заповедал давать разводное письмо и разводиться с нею?
8 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.
Он говорит им: Моисей по жестокосердию вашему позволил вам разводиться с женами вашими, а сначала не было так;
9 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.
но Я говорю вам: кто разведется с женою своею не за прелюбодеяние и женится на другой, тот прелюбодействует; и женившийся на разведенной прелюбодействует.
10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.
Говорят Ему ученики Его: если такова обязанность человека к жене, то лучше не жениться.
11 ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.
Он же сказал им: не все вмещают слово сие, но кому дано,
12 ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.
ибо есть скопцы, которые из чрева матернего родились так; и есть скопцы, которые оскоплены от людей; и есть скопцы, которые сделали сами себя скопцами для Царства Небесного. Кто может вместить, да вместит.
13 ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
Тогда приведены были к Нему дети, чтобы Он возложил на них руки и помолился; ученики же возбраняли им.
14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.
Но Иисус сказал: пустите детей и не препятствуйте им приходить ко Мне, ибо таковых есть Царство Небесное.
15 ತರುವಾಯ ಯೇಸು ಮಕ್ಕಳ ಮೇಲೆ ತಮ್ಮ ಕೈಯಿಟ್ಟು ಆಶೀರ್ವದಿಸಿ ಅಲ್ಲಿಂದ ಹೊರಟು ಹೋದರು.
И, возложив на них руки, пошел оттуда.
16 ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios g166)
И вот, некто, подойдя, сказал Ему: Учитель благий! что сделать мне доброго, чтобы иметь жизнь вечную? (aiōnios g166)
17 “ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.
Он же сказал ему: что ты называешь Меня благим? Никто не благ, как только один Бог. Если же хочешь войти в жизнь вечную, соблюди заповеди.
18 ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,
Говорит Ему: какие? Иисус же сказал: не убивай; не прелюбодействуй; не кради; не лжесвидетельствуй;
19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.
почитай отца и мать; и люби ближнего твоего, как самого себя.
20 ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು.
Юноша говорит Ему: все это сохранил я от юности моей; чего еще недостает мне?
21 ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.
Иисус сказал ему: если хочешь быть совершенным, пойди, продай имение твое и раздай нищим; и будешь иметь сокровище на небесах; и приходи и следуй за Мною.
22 ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.
Услышав слово сие, юноша отошел с печалью, потому что у него было большое имение.
23 ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Иисус же сказал ученикам Своим: истинно говорю вам, что трудно богатому войти в Царство Небесное;
24 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.
и еще говорю вам: удобнее верблюду пройти сквозь игольные уши, нежели богатому войти в Царство Божие.
25 ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.
Услышав это, ученики Его весьма изумились и сказали: так кто же может спастись?
26 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
А Иисус, воззрев, сказал им: человекам это невозможно, Богу же все возможно.
27 ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.
Тогда Петр, отвечая, сказал Ему: вот, мы оставили все и последовали за Тобою; что же будет нам?
28 ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.
Иисус же сказал им: истинно говорю вам, что вы, последовавшие за Мною, - в пакибытии, когда сядет Сын Человеческий на престоле славы Своей, сядете и вы на двенадцати престолах судить двенадцать колен Израилевых.
29 ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios g166)
И всякий, кто оставит домы, или братьев, или сестер, или отца, или мать, или жену, или детей, или земли, ради имени Моего, получит во сто крат и наследует жизнь вечную. (aiōnios g166)
30 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.
Многие же будут первые последними и последние первыми.

< ಮತ್ತಾಯನು 19 >