< ಮತ್ತಾಯನು 2 >

1 ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
And Jesus having been born in Beth-Lehem of Judea, in the days of Herod the king, behold, magi from the east came to Jerusalem,
2 “ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.
saying, “Where is He who was born King of the Jews? For we saw His star in the east, and we came to worship Him.”
3 ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.
And Herod the king having heard, was stirred, and all Jerusalem with him,
4 ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.
and having gathered all the chief priests and scribes of the people, he was inquiring from them where the Christ is born.
5 ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:
And they said to him, “In Beth-Lehem of Judea, for thus it has been written through the prophet:
6 “‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.
And you, Beth-Lehem, the land of Judah, you are by no means the least among the leaders of Judah, for out of you will come One leading, who will feed My people Israel.”
7 ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.
Then Herod, having called the magi privately, inquired exactly from them the time of the appearing star,
8 “ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.
and having sent them to Beth-Lehem, he said, “Having gone—inquire exactly for the Child, and whenever you may have found, bring me back word, that I also having come may worship Him.”
9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು.
And they, having heard the king, departed, and behold, the star, that they saw in the east, went before them, until, having come, it stood over where the Child was.
10 ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.
And having seen the star, they rejoiced with exceedingly great joy,
11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.
and having come into the house, they found the Child with His mother Mary, and having fallen down they worshiped Him, and having opened their treasures, they presented to Him gifts, gold, and frankincense, and myrrh,
12 ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.
and having been divinely warned in a dream not to return to Herod, through another way they withdrew to their own region.
13 ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.
And on their having withdrawn, behold, a messenger of the LORD appears in a dream to Joseph, saying, “Having risen, take the Child and His mother, and flee to Egypt, and be there until I may speak to you, for Herod is about to seek the Child to destroy Him.”
14 ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.
And he, having risen, took the Child and His mother by night, and withdrew to Egypt,
15 ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.
and he was there until the death of Herod, that it might be fulfilled that was spoken by the LORD through the prophet, saying, “Out of Egypt I called My Son.”
16 ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.
Then Herod, having seen that he was deceived by the magi, was very angry, and having sent forth, he slew all the male children in Beth-Lehem, and in all its borders, from two years and under, according to the time that he inquired exactly from the magi.
17 ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:
Then was fulfilled that which was spoken by Jeremiah the prophet, saying,
18 “ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”
“A voice in Ramah was heard—weeping and much mourning—Rachel weeping [for] her children, and she would not be comforted because they are not.”
19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,
And Herod having died, behold, a messenger of the LORD appears in a dream to Joseph in Egypt,
20 “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.
saying, “Having risen, take the Child and His mother, and be going to the land of Israel, for they have died—those seeking the life of the Child.”
21 ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
And he, having risen, took the Child and His mother, and came to the land of Israel,
22 ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.
and having heard that Archelaus reigns over Judea instead of his father Herod, he was afraid to go there, and having been divinely warned in a dream, he withdrew to the parts of Galilee,
23 ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.
and coming, he dwelt in a city named Nazareth, that it might be fulfilled that was spoken through the Prophets, that “He will be called a Nazarene.”

< ಮತ್ತಾಯನು 2 >