< ಮತ್ತಾಯನು 21 >

1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,
Wa Yesu ni mrli koh ma ba hi ka tie whiewhiere ni Urushalima nda hi ni ngblu u Zaitun u Betafaji, u Yesu ka ton mrli koh ma ha bari,
2 ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.
nda hla ni bawu, “Hi ni vi gbu u whiewhiere yi u bi toh ba lo nankpron mba vren nankpron bari zi. Si ba ndi nji ba ye nimu.
3 ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.
Indrjori nita mye yi kpye, bika hla ndi, 'Bachi ni tie ndu niwu,' u ndji kima ni gbla nno yi ni mba.”
4 ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,
Bati wayi ni ndu ku gyren me ni tre wa ba hlawu ni nyu anabia. A tre ndi,
5 “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’”
“Hla ni vrenwa u Sihiyona, 'Toh yi, Ichu mbi si ye ni yi,' U katu grji nda hon ni nankpron wa ahi vren maa.'”
6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು.
U mrli koh ma ba hi nda ka tie towa Yesu a hla ni bawu'a.
7 ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.
Ba ka nji nankpron a mba vren maa ye, nda vu ba nklon ba sa nitu mba, u Yesu ka hon son ni tu kpi mba.
8 ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.
Imbru gbugbu ndji ba ba ka ba nklon mba l'ba ni wu nitu nkon, u bari baka tsen vunvu kunkron sru ni nkon a.
9 ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.
U ijbu ndji biwa ba he ni ko shishi ma, ni biwa ba he ko gon maa, baka kla ngblo nyu nda ni hla ndi, “Hosanna ni vren Doda! Wawu wa a si ye nimi ndi Bachi, ahe ni lulu! Hosanna hi ni shu babran!”
10 ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.
Niwa Yesu a ri ni Urushalima u muu ma ka suni gbua u ba tre ndi, “Ihi nha mu yi?”
11 ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.
U ijbu ndji ba ba saa ndi, “Iwayi hi Yesu anabi wa a rji ni Galilia.”
12 ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.
U Yesu ka ri ni Hekali. A zu bi le ni bi le ni rju nda tru ba tebru u bi sran nklen ni u bi le tatabara (nghwu)
13 ಯೇಸು ಅವರಿಗೆ, “‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.
A hla bawu, “Ba nha ndi, 'Ikoh mu ba yowu nda hi koh u aduwa.' u bi kawu tie fron u bi ybi.”
14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.
U bi fyen ni bi c'bi za baka ye niwu ni Hekalia wa'a den ba.
15 ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.
Niwa Prist bi ninkon ba ni bi tsro ataura ba toh ba kpyi wa a tie u ba manji mba wakran nda lawo mrli ba bubu kla ngblo nyu nimi Hekali nda ni tre, “Hosanna ni vren Doda,” u baka vra nfu.
16 “ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.
Baka hla niwu, “U si wo kpye wa ndji biyi ba ki trea?” Yesu a hla bawu, “Ee! U bina kra na ndi, 'Rji ni nyu kpran mrli ni bi ma sisan u yo gbyre san?”
17 ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.
U Yesu ka kab don nda rju hi ni kiekle gbu Betani nda kru ni kima.
18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.
Ni mble a kma si ye ni gbua, u iyon ka tiwu.
19 ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು. (aiōn g165)
A to nci mbua ni nyu nkon, nda hi ni kima nda hi ni nci ma nda ka toh a hi kpukpa vunvu yi hama ni klo. A hla niwu, “Na la klo ngana sese kase,” u mbua tsi klu (aiōn g165)
20 ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.
Niwa mrli koh ma ba toh a, ba manji ma wakran nda tre, “Anihe mu rli imbua tsi klu?”
21 ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.
Yesu a saa nda hla bawu, “Njanji mu mi hla yiwu, bita he ni nkpon nji ndi na rju ni sron na, bina tie kpye wa ba tie ni mbua yi a megyen, bi hla ni ngblu yi, “Chu hi ku ni mma, u wani he tokima.
22 ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.
Ikpye wa bi mye ni aduwa ndi nyme, bi kpa.”
23 ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
Niwa Yesu ari ni hekalia, u Prist bi ninkon ni cice ba ye niwu kasia tsro nda tre, “Ani ngbengblen rime u tie kpyi biyi, wa hi nha nno wu gbengblen yi?
24 ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,
Yesu a saa nda hla ni bawu, “I me ngame mi mye yi imye ri. Bita hla mu ime me mi hla ni yiwu ka ni ngbengblen rime mi tie kpyi biyi.
25 ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.
Batisma u Yohana - a rji ni mma meyi? A rji ni shulu ka a rji ni ba ndji? U baka sron mu ni kpa mba, nda tre, “Kita tre ndi, a rji ni shulu, ani hla tawu, wa ngye tie bina kpau nyme na?
26 ‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.
U kie ta hla, 'a rji ni ndji,' kie klu sissri ndji, wa ba toh Yohana ahi anabi.”
27 ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
U baka saa ni Yesu na hla, “Kie na toh na.” Wawu ngame hla ni bawu ndi, “Ime me mina hla yiwu ka ni ngbengblen rime mi tie kpi biyi na.
28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.
U biki ta mre nihe? Indji a he ni mri lon ha. Ahi ni u mumla nda tre, 'vrenmu, hi tie ndu ni rju luwa.'
29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.
Ivren a ka saa nda tre, Mi na hina aye tamre ni ko gon nda ye hi.
30 “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.
U igua hi ni vren u ha nda hla wu toh u rima. Ivren yi a saa nda hla, 'Mi hi, Tietie, nda na ye hi na.
31 “ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
A hi rime nimi mri ha ba a tie kpye wa tie mba a son a?” Baka hla, “U mumlaa.” Yesu ka hla ni bawu, “Njanji mu mi hla ni yiwu, bi kpa ban ni bi tie ntran ba ri ni gbu u chu Rji guchi ni yiwu.
32 ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”
Yohana a ye niyi ni ngon u ndindi, u bika na nyme niwu na, u bi kpa' ban ni bi tie ntran baka nyme niwu. U biyi wa bi toh towa, bi na yo ru ru ndi nyme ni wu na.
33 “ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.
La wo njo ri ngari. Indji ri ahe ni rju. A sen kpyi ni mima, nda hrawu kagon ma, nda shi juju u shbi ma klo inabi ni rjua, nda la mme koh ri guglo ma nda nno rjua ni wo bi ron bari. Nda hi ni gbu ri.
34 ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.
Wa nton u shbi inabi a tie whiewhiere, a ton gran ma bari hi ndu ba kpa klo ma nji wu.
35 “ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
U bi ya rju'a baka vu gran ma ba nda tsi ri mba, nda wuu ri nda ta rima ni tita.
36 ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.
U ndji u rju'a ala ton gran ma bari wa ba nna bi mumla, u bi ron rju'a baka tie ni bawu towa ba tie ni bi mumla'a.
37 ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
Indji u rju'a a ye ton vren ma hi ni ko gon bi mu ba, nda tre, ba wo vren mu'a.
38 “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,
U wa bi ron ba ba toh vren'a, ba tre ni kpamba, Iwayi yi hi wa ani son nyu ma, ye, kie wuu ndi kpa rju'a.
39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.
U baka vu rju ni rju'a taga nda wuu.
40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,
U indji u rju'a nita ye, ani tie bi ron ba ni he?
41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.
U ba hla wu, “Ani wuu meme bi ron ba ni kpukpo ya,' nda ka rju'a nno bi ron bari wa ba ka hanwu ni nton wa inebi tie a.
42 ಯೇಸು ಅವರಿಗೆ, “‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?
Yesu a hla ni bwu, “Bi na kra ni tre Irji na, 'Tita wa bi mme ba kamba niwu a ka tie tita u nfron ma. Iwa yi ahi tie u Irji nda bi ni shishi mbu?
43 “ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
Nitu kimayi me hla yiwu, ba kpa gbu u chu Irji niyi nda ka nno u ko ra ri wa ani ti ndindia.
44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.
U wa a rjoku nitu tita yia, ani chon tie rjuru me. U nitu ndji wa ku'a ani Myrian wu.”
45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.
Wa Prist bi ninkon ba ni ba Farisawa ba wo njo maa, baka toh nda asi tre nitu mba.
46 ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.
Ba wa nkon u vu nda klu sissri jbu ndji ba, nitu wa indji ba ban wu nda a hi anabi.

< ಮತ್ತಾಯನು 21 >