< ಮತ್ತಾಯನು 22 >

1 ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:
Respondiendo Jesús les habló de nuevo en parábolas, y dijo:
2 “ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
“El reino de los cielos es semejante a un rey que celebró las bodas de su hijo.
3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.
Y envió a sus siervos a llamar a los convidados a las bodas, mas ellos no quisieron venir.
4 “ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.
Entonces envió a otros siervos, a los cuales dijo: “Decid a los convidados: Tengo preparado mi banquete; mis toros y animales cebados han sido sacrificados ya, y todo está a punto: venid a las bodas”.
5 “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.
Pero, sin hacerle caso, se fueron el uno a su granja, el otro a sus negocios.
6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.
Y los restantes agarraron a los siervos, los ultrajaron y los mataron.
7 ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
El rey, encolerizado, envió sus soldados, hizo perecer a aquellos homicidas, y quemó su ciudad.
8 “ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.
Entonces dijo a sus siervos: “Las bodas están preparadas, mas los convidados no eran dignos.
9 ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.
Id, pues, a las encrucijadas de los caminos, y a todos cuantos halléis, invitadlos a las bodas”.
10 ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
Salieron aquellos siervos a los caminos, y reunieron a todos cuantos hallaron, malos y buenos, y la sala de las bodas quedó llena de convidados.
11 “ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.
Mas cuando el rey entró para ver a los comensales, notó a un hombre que no estaba vestido con el traje de boda.
12 ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.
Díjole: “Amigo, ¿cómo has entrado aquí sin tener el traje de boda?” Y él enmudeció.
13 “ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.
Entonces el rey dijo a los siervos: “Atadlo de pies y manos, y arrojadlo a las tinieblas de afuera; allí será el llanto y el rechinar de dientes.
14 “ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.
Porque muchos son llamados, mas pocos escogidos”.
15 ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
Entonces los fariseos se fueron y deliberaron cómo le sorprenderían en alguna palabra.
16 ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.
Le enviaron, pues, sus discípulos con los herodianos, a decirle: “Maestro, sabemos que eres veraz y que enseñas el camino de Dios con verdad, sin miedo a nadie, porque no miras a la persona de los hombres.
17 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.
Dinos, pues, lo que piensas: ¿es lícito pagar tributo al César o no?”
18 ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?
Mas Jesús, conociendo su malicia, repuso: “Hipócritas, ¿por qué me tentáis?
19 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.
Mostradme la moneda del tributo”. Y le presentaron un denario.
20 ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.
Preguntoles: “¿De quién es esta figura y la leyenda?”
21 ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.
Le respondieron: “del César”. Entonces les dijo: “Dad, pues, al César lo que es del César, y a Dios lo que es de Dios”.
22 ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.
Oyendo esto, quedaron maravillados, y dejándolo se fueron.
23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,
En aquel día, algunos saduceos, los cuales dicen que no hay resurrección, se acercaron a Él, y le propusieron esta cuestión:
24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
“Maestro, Moisés ha dicho: ‘Si alguno muere sin tener hijos, su hermano se casará con la cuñada, y suscitará prole a su hermano’.
25 ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.
Ahora bien, había entre nosotros siete hermanos. El primero se casó y murió; y como no tuviese descendencia, dejó su mujer a su hermano.
26 ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.
Sucedió lo mismo con el segundo, y con el tercero, hasta el séptimo.
27 ಕಡೆಯದಾಗಿ, ಆ ಸ್ತ್ರೀಯೂ ಸತ್ತಳು.
Después de todos murió la mujer.
28 ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.
En la resurrección, pues, ¿de cuál de los siete será mujer? Porque todos la tuvieron”.
29 ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.
Respondioles Jesús y dijo: “Erráis, por no entender las Escrituras ni el poder de Dios.
30 ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
Pues en la resurrección, ni se casan ( los hombres ), ni se dan (las mujeres ) en matrimonio, sino que son como ángeles de Dios en el cielo.
31 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,
Y en cuanto a la resurrección de los muertos, ¿no habéis leído lo que os ha dicho Dios:
32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.
“Yo soy el Dios de Abrahán, y el Dios de Isaac, y el Dios de Jacob”? Dios no es Dios de muertos, sino de vivientes”.
33 ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.
Al oír esto, las muchedumbres estaban poseídas de admiración por su doctrina.
34 ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.
Mas los fariseos, al oír que había tapado la boca a los saduceos, vinieron a reunirse junto a Él;
35 ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,
y uno de ellos, doctor de la Ley, le propuso esta cuestión para tentarlo:
36 “ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.
“Maestro, ¿cuál es el mayor mandamiento de la Ley?”
37 ಯೇಸು ಅವನಿಗೆ, “‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
Respondió Él: “Amarás al Señor tu Dios de todo tu corazón, con toda tu alma, y con todo tu espíritu.
38 ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ.
Este es el mayor y primer mandamiento.
39 ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
El segundo le es semejante: “Amarás a tu prójimo como a ti mismo”.
40 ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.
De estos dos mandamientos pende toda la Ley y los Profetas”.
41 ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,
Estando aún reunidos los fariseos, Jesús les propuso esta cuestión:
42 “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.
“¿Qué pensáis del Cristo? ¿De quién es hijo?” Dijéronle “de David”.
43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,
Replicó Él “¿Cómo, entonces, David ( inspirado ), por el Espíritu, lo llama “Señor”, cuando dice:
44 “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,”’ ಎಂದು ಹೇಳಿದನಲ್ಲವೇ?
“El Señor dijo a mi Señor: Sientate a mi diestra, hasta que ponga a tus enemigos bajo tus pies”?
45 ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.
Si David lo llama “Señor” ¿cómo es su hijo?
46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.
Y nadie pudo responderle nada, y desde ese día nadie osó más proponerle cuestiones.

< ಮತ್ತಾಯನು 22 >