< ಮತ್ತಾಯನು 24 >

1 ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು.
anantaraM yIshu ryadA mandirAd bahi rgachChati, tadAnIM shiShyAstaM mandiranirmmANaM darshayitumAgatAH|
2 ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
tato yIshustAnuvAcha, yUyaM kimetAni na pashyatha? yuShmAnahaM satyaM vadAmi, etannichayanasya pAShANaikamapyanyapAShANepari na sthAsyati sarvvANi bhUmisAt kAriShyante|
3 ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು. (aiōn g165)
anantaraM tasmin jaitunaparvvatopari samupaviShTe shiShyAstasya samIpamAgatya guptaM paprachChuH, etA ghaTanAH kadA bhaviShyanti? bhavata Agamanasya yugAntasya cha kiM lakShma? tadasmAn vadatu| (aiōn g165)
4 ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
tadAnIM yIshustAnavochat, avadhadvvaM, kopi yuShmAn na bhramayet|
5 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
bahavo mama nAma gR^ihlanta AgamiShyanti, khrIShTo. ahameveti vAchaM vadanto bahUn bhramayiShyanti|
6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
yUya ncha saMgrAmasya raNasya chADambaraM shroShyatha, avadhadvvaM tena cha nchalA mA bhavata, etAnyavashyaM ghaTiShyante, kintu tadA yugAnto nahi|
7 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.
aparaM deshasya vipakSho desho rAjyasya vipakSho rAjyaM bhaviShyati, sthAne sthAne cha durbhikShaM mahAmArI bhUkampashcha bhaviShyanti,
8 ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.
etAni duHkhopakramAH|
9 “ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.
tadAnIM lokA duHkhaM bhojayituM yuShmAn parakareShu samarpayiShyanti haniShyanti cha, tathA mama nAmakAraNAd yUyaM sarvvadeshIyamanujAnAM samIpe ghR^iNArhA bhaviShyatha|
10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.
bahuShu vighnaM prAptavatsu parasparam R^itIyAM kR^itavatsu cha eko. aparaM parakareShu samarpayiShyati|
11 ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.
tathA bahavo mR^iShAbhaviShyadvAdina upasthAya bahUn bhramayiShyanti|
12 ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.
duShkarmmaNAM bAhulyA ncha bahUnAM prema shItalaM bhaviShyati|
13 ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
kintu yaH kashchit sheShaM yAvad dhairyyamAshrayate, saeva paritrAyiShyate|
14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.
aparaM sarvvadeshIyalokAn pratimAkShI bhavituM rAjasya shubhasamAchAraH sarvvajagati prachAriShyate, etAdR^ishi sati yugAnta upasthAsyati|
15 “ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.
ato yat sarvvanAshakR^idghR^iNArhaM vastu dAniyelbhaviShyadvadinA proktaM tad yadA puNyasthAne sthApitaM drakShyatha, (yaH paThati, sa budhyatAM)
16 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
tadAnIM ye yihUdIyadeshe tiShThanti, te parvvateShu palAyantAM|
17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.
yaH kashchid gR^ihapR^iShThe tiShThati, sa gR^ihAt kimapi vastvAnetum adhe nAvarohet|
18 ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.
yashcha kShetre tiShThati, sopi vastramAnetuM parAvR^itya na yAyAt|
19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!
tadAnIM garbhiNIstanyapAyayitrINAM durgati rbhaviShyati|
20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.
ato yaShmAkaM palAyanaM shItakAle vishrAmavAre vA yanna bhavet, tadarthaM prArthayadhvam|
21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
A jagadArambhAd etatkAlaparyyanantaM yAdR^ishaH kadApi nAbhavat na cha bhaviShyati tAdR^isho mahAkleshastadAnIm upasthAsyati|
22 “ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.
tasya kleshasya samayo yadi hsvo na kriyeta, tarhi kasyApi prANino rakShaNaM bhavituM na shaknuyAt, kintu manonItamanujAnAM kR^ite sa kAlo hsvIkariShyate|
23 ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ.
apara ncha pashyata, khrIShTo. atra vidyate, vA tatra vidyate, tadAnIM yadI kashchid yuShmAna iti vAkyaM vadati, tathApi tat na pratIt|
24 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
yato bhAktakhrIShTA bhAktabhaviShyadvAdinashcha upasthAya yAni mahanti lakShmANi chitrakarmmANi cha prakAshayiShyanti, tai ryadi sambhavet tarhi manonItamAnavA api bhrAmiShyante|
25 ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.
pashyata, ghaTanAtaH pUrvvaM yuShmAn vArttAm avAdiSham|
26 “ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.
ataH pashyata, sa prAntare vidyata iti vAkye kenachit kathitepi bahi rmA gachChata, vA pashyata, sontaHpure vidyate, etadvAkya uktepi mA pratIta|
27 ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
yato yathA vidyut pUrvvadisho nirgatya pashchimadishaM yAvat prakAshate, tathA mAnuShaputrasyApyAgamanaM bhaviShyati|
28 ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.
yatra shavastiShThati, tatreva gR^idhrA milanti|
29 “ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’
aparaM tasya kleshasamayasyAvyavahitaparatra sUryyasya tejo lopsyate, chandramA jyosnAM na kariShyati, nabhaso nakShatrANi patiShyanti, gagaNIyA grahAshcha vichaliShyanti|
30 “ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.
tadAnIm AkAshamadhye manujasutasya lakShma darshiShyate, tato nijaparAkrameNa mahAtejasA cha meghArUDhaM manujasutaM nabhasAgachChantaM vilokya pR^ithivyAH sarvvavaMshIyA vilapiShyanti|
31 ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
tadAnIM sa mahAshabdAyamAnatUryyA vAdakAn nijadUtAn praheShyati, te vyomna ekasImAto. aparasImAM yAvat chaturdishastasya manonItajanAn AnIya melayiShyanti|
32 “ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
uDumbarapAdapasya dR^iShTAntaM shikShadhvaM; yadA tasya navInAH shAkhA jAyante, pallavAdishcha nirgachChati, tadA nidAghakAlaH savidho bhavatIti yUyaM jAnItha;
33 ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.
tadvad etA ghaTanA dR^iShTvA sa samayo dvAra upAsthAd iti jAnIta|
34 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
yuShmAnahaM tathyaM vadAmi, idAnIntanajanAnAM gamanAt pUrvvameva tAni sarvvANi ghaTiShyante|
35 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
nabhomedinyo rluptayorapi mama vAk kadApi na lopsyate|
36 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.
aparaM mama tAtaM vinA mAnuShaH svargastho dUto vA kopi taddinaM taddaNDa ncha na j nApayati|
37 ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
aparaM nohe vidyamAne yAdR^ishamabhavat tAdR^ishaM manujasutasyAgamanakAlepi bhaviShyati|
38 ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.
phalato jalAplAvanAt pUrvvaM yaddinaM yAvat nohaH potaM nArohat, tAvatkAlaM yathA manuShyA bhojane pAne vivahane vivAhane cha pravR^ittA Asan;
39 ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.
aparam AplAvitoyamAgatya yAvat sakalamanujAn plAvayitvA nAnayat, tAvat te yathA na vidAmAsuH, tathA manujasutAgamanepi bhaviShyati|
40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
tadA kShetrasthitayordvayoreko dhAriShyate, aparastyAjiShyate|
41 ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಬೀಸುತ್ತಿರುವಾಗ, ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.
tathA peShaNyA piMShatyorubhayo ryoShitorekA dhAriShyate. aparA tyAjiShyate|
42 “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.
yuShmAkaM prabhuH kasmin daNDa AgamiShyati, tad yuShmAbhi rnAvagamyate, tasmAt jAgrataH santastiShThata|
43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.
kutra yAme stena AgamiShyatIti ched gR^ihastho j nAtum ashakShyat, tarhi jAgaritvA taM sandhiM karttitum avArayiShyat tad jAnIta|
44 ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
yuShmAbhiravadhIyatAM, yato yuShmAbhi ryatra na budhyate, tatraiva daNDe manujasuta AyAsyati|
45 “ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?
prabhu rnijaparivArAn yathAkAlaM bhojayituM yaM dAsam adhyakShIkR^itya sthApayati, tAdR^isho vishvAsyo dhImAn dAsaH kaH?
46 ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.
prabhurAgatya yaM dAsaM tathAcharantaM vIkShate, saeva dhanyaH|
47 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
yuShmAnahaM satyaM vadAmi, sa taM nijasarvvasvasyAdhipaM kariShyati|
48 ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು
kintu prabhurAgantuM vilambata iti manasi chintayitvA yo duShTo dAso
49 ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,
.aparadAsAn praharttuM mattAnAM sa Nge bhoktuM pAtu ncha pravarttate,
50 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,
sa dAso yadA nApekShate, ya ncha daNDaM na jAnAti, tatkAlaeva tatprabhurupasthAsyati|
51 ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.
tadA taM daNDayitvA yatra sthAne rodanaM dantagharShaNa nchAsAte, tatra kapaTibhiH sAkaM taddashAM nirUpayiShyati|

< ಮತ್ತಾಯನು 24 >