< ಮತ್ತಾಯನು 3 >

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,
Ni nton kima Yohana u tie Batisma a ye tren njo Rji ni miji u Yahudiya;
2 “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.
Nda ni wa, ka meme cuwo; mulki shulu a tiewiere.
3 “‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.
Ahi wawuyi ba tre ni nyu anabi Ishaya nda hla. Ilan uyo rji ni miji mla nkon Baci tie mla zren mbi tie.
4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
Yohana ata sru kpie u nfu laklumi nda lo ntan u birli me ana hi lagblan mba ton u miji.
5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.
Indi bi Urushalima ni bi wa ba he kagon igbu bi urdu ba rju wawuu ye.
6 ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
A tie batisma ni bawu ni nne urdu u bata hla' la' tre mba.
7 ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?
A to gbugbu Farisawa ni Saddukiyawa ba ye ndu tie batisma bawu a hla ni bawu biyi mrli grace, ahi nha hla yiwu ndu yi klu ifu wa asi ye'a?
8 ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
Nji mrli wa ba tsar u mla latre mbatie'a ye:
9 ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.
Na tamre ndi bi hla ni kpa mbi ndi kie he ni tie mbu Ibrahim; to misi hla yiwu ni mi tita biyi Irji he gbengblen u ka mba tie imrli Ibrahim.
10 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.
Zizanyime bayo gla ni nci kukron ba: kukron wa ana tie klo didi mana ba tsenwu nda kasru ni lu:
11 “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.
“Ime mi tie batisma yiwu ni maa u ka latre mbi cuwo amma uwa aniye kogon mua a' nna' me ni gbengblen mina mla u si rjirji lagban ma na: wawuyi ni tie batisma yiwu ni Brji tsatsar mba lu' ngame:
12 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.
Mwu mwu ma he ni wo ma ani tsen alkama nda vu bi didi ba sru wruon, u nfon ma ani gonwu ni kpatren lu' wa ana y'bi na'.
13 ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.
Rliko Yesu a wlu ni Galili hi ni urdu ni Yohana ni ndu tie batisma niwu.
14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.
U Yohana ka tie' san nda tre mi si son ndu tie batisma ni mu, i wu la' ye' ni me?
15 ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.
Yesu a kasa niwu nda tre uka y'me zizanyi: towa ahe tie nkon ni tawu ndu ta kle indu tsatsar wawuu Rliko Yohana ka y'me niwu.
16 ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.
U Yesu, wa ba tie batisma niwu'a ani rju ni maa me u shulu ba ka bwu niwu a to Ibriji Rji grji na ngwu ye ku son niwu ni tu.
17 ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.
U lan ka rji na shulu nda tre, Iwayi ahi kponji vrenmu idrimu ni ngri ni wu.

< ಮತ್ತಾಯನು 3 >