< ಮತ್ತಾಯನು 5 >
1 ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.
Als er die Volksmenge sah, ging er auf die Bergeshöhe. Dort setzte er sich nieder, und seine Jünger traten zu ihm.
2 ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:
Da tat er seinen Mund auf und lehrte sie also:
3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.
"Selig sind die Armen im Geist! Denn das Königreich der Himmel ist ihr Teil.
4 ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.
Selig sind die Trauernden! Denn sie sollen getröstet werden.
5 ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.
Selig sind die stillen Dulder! Denn ihr Erbteil soll die Erde sein.
6 ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.
Selig sind, die hungern und dürsten nach der Gerechtigkeit! Denn sie sollen gesättigt werden.
7 ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.
Selig sind die Barmherzigen! Denn ihnen soll Erbarmen widerfahren.
8 ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.
Selig sind, die reines Herzens sind! Denn sie sollen Gott schauen.
9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.
Selig sind die Friedenstifter! Denn sie sollen Söhne Gottes heißen.
10 ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.
Selig sind, die um Gerechtigkeit willen Verfolgung gelitten haben! Denn das Königreich der Himmel ist ihr Teil.
11 “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
Selig seid ihr, wenn man euch schmähet und verfolgt und um meinetwillen lügnerisch allerlei Böses von euch redet.
12 ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.
Freuet euch darüber und jubelt, denn euer Lohn dafür ist groß im Himmel! Ebenso hat man ja die Propheten verfolgt, die vor euch lebten.
13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
Ihr seid das Salz der Erde. Wird aber das Salz fade, womit soll man ihm die Salzkraft wiedergeben? Es hat dann weiter keinen Wert; man muß es wegwerfen und von den Leuten zertreten lassen.
14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
Ihr seid das Licht der Welt. Eine Stadt, die auf einem Berge liegt, kann nicht verborgen bleiben.
15 ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.
Man zündet auch nicht eine Lampe an und setzt sie dann unter einen Scheffel; sondern man stellt sie auf den Leuchter; dann gibt sie allen Hausbewohnern Licht.
16 ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
Ebenso soll euer Licht vor den Menschen leuchten, damit sie eure guten Werke sehen und euern Vater im Himmel preisen.
17 “ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.
Denkt nicht, ich sei gekommen, um das Gesetz oder die Propheten aufzuheben! Ich bin nicht gekommen, um aufzuheben, sondern um zu erfüllen.
18 ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Wahrlich, ich sage euch: Eher können Himmel und Erde vergehn, als daß auch nur der kleinste Buchstabe oder ein einziger Strich vom Gesetz abhanden kommt, ohne daß alles erfüllt wird.
19 ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.
Wer darum eins von diesen Geboten, und sei es das geringste, aufhebt und so die Leute lehrt, der wird der Geringste heißen im Königreich der Himmel; wer es aber erfüllt und lehrt, der wird ein Großer heißen im Königreich der Himmel.
20 ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
Denn ich versichere euch: Steht es bei euch mit der Gerechtigkeit nicht viel besser als bei den Schriftgelehrten und Pharisäern, so werdet ihr gewiß nicht eingehn ins Königreich der Himmel.
21 “‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
Ihr habt gehört, daß zu den Alten gesagt worden ist: Du sollst nicht morden! Wer aber einen Mord begeht, der soll dem Ortsgericht verfallen sein.
22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. (Geenna )
Ich aber sage euch: Wer seinem Bruder zürnt, der soll dem Ortsgericht verfallen; wer aber zu seinem Bruder mit Verachtung redet, der soll dem Hohen Rat verfallen; und wer das Scheltwort Narr gebraucht, der soll der Glut des Feuers verfallen. (Geenna )
23 “ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
Wenn du also deine Opfergabe schon zum Altar gebracht hast, und es fällt dir dort ein, daß dein Bruder gegen dich einen Grund zur Klage hat,
24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.
so laß dort deine Opfergabe vor dem Altar stehn und geh zunächst hin und söhne dich mit deinem Bruder aus; dann erst komm und bring dein Opfer dar!
25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.
Zeig dich beizeiten deinem Gläubiger entgegenkommend, solange du noch mit ihm auf dem Wege bist! Sonst könnte dich der Gläubiger vor den Richter bringen und der Richter dich dem Büttel übergeben, und man könnte dich ins Schuldgefängnis werfen.
26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Wahrlich, ich sage dir: Du kommst dort nicht eher heraus, als bis du den letzten Pfennig bezahlt hast.
27 “‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.
Ihr habt gehört, daß gesagt worden ist: Du sollst nicht ehebrechen!
28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.
Ich aber sage euch: Wer ein Weib begehrlich anblickt, der hat schon in seinem Herzen Ehebruch mit ihr getrieben.
29 ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
Wenn dich nun dein rechtes Auge zur Sünde verführt, so reiß es aus und wirf es von dir! Denn es ist dir besser, eins von deinen Gliedern geht dir verloren, als daß dein ganzer Leib in die Hölle geworfen werde. (Geenna )
30 ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
Und wenn dich deine rechte Hand zur Sünde verführt, haue sie ab und wirf sie von dir! Denn es ist dir besser, eins von deinen Gliedern geht dir verloren, als daß dein ganzer Leib in die Hölle fahre. (Geenna )
31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.
Ferner ist gesagt worden: Wer sein Weib entläßt, der soll ihr einen Scheidebrief geben.
32 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.
Ich aber sage euch: Wer sein Weib entläßt — abgesehn von dem Falle, daß sie Unzucht getrieben —, der setzt sie der Gefahr aus, daß sie Ehebruch begeht; und wer eine (von ihrem Mann) entlassene Frau zum Weibe nimmt, der begeht damit einen Ehebruch.
33 “‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.
Weiterhin habt ihr gehört, daß zu den Alten gesagt worden ist: Du sollst nicht falsch schwören, du sollst vielmehr dem Herrn deine Eide (und Gelübde) erfüllen.
34 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;
Ich aber sage euch: Ihr sollt überhaupt nicht schwören: weder bei dem Himmel, denn er ist Gottes Thron,
35 ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.
noch bei der Erde, denn sie ist seiner Füße Schemel, noch bei Jerusalem, denn sie ist des großen Königs Stadt.
36 ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
Du sollst auch nicht bei deinem Haupte schwören; denn du bist nicht imstande, ein einziges Haar weiß oder schwarz zu machen.
37 ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.
In eurer Rede sei vielmehr das Ja ein Ja, das Nein ein Nein; was dem hinzugefügt wird, stammt von dem Bösen.
38 “‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
Ihr habt gehört, daß gesagt worden ist: Auge um Auge und Zahn um Zahn!
39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.
Ich aber sage euch: Setzt einem bösen Menschen keinen Widerstand entgegen! Im Gegenteil: Wer dich auf die rechte Wange schlägt, dem halte auch die andre hin!
40 ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು.
Und wer dir durch eine Klage vor Gericht dein Unterkleid entreißen will, dem gib freiwillig auch dein Oberkleid.
41 ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು;
Und wer dein Geleit für eine Meile haben will, mit dem gehe zwei!
42 ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.
Wer dich um etwas bittet, dem gib; und wer etwas von dir borgen will, von dem wende dich nicht ab!
43 “‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.
Ihr habt gehört, daß gesagt worden ist: Du sollst deinen Nächsten lieben und deinen Feind hassen!
44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
Ich aber sage euch: Liebet eure Feinde und betet für eure Verfolger!
45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.
Dann zeigt ihr euch als Söhne eures Vaters im Himmel. Denn er läßt seine Sonne aufgehn über Böse und Gute und läßt regnen über Gerechte und Ungerechte.
46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?
Denn wenn ihr nur die liebt, die euch lieben, was für eine Belohnung habt ihr da zu erwarten? Tun das nicht auch die Zöllner?
47 ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?
Und wenn ihr nur mit euern Volksgenossen verkehrt, was tut ihr da Besonderes? Tun das nicht auch die Heiden?
48 ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.
Darum sollt ihr vollkommen sein, wie euer himmlischer Vater vollkommen ist.