< ಮತ್ತಾಯನು 6 >
1 “ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.
人に見せるために人前で善行をしないように気をつけなさい。そうでないと、天におられるあなたがたの父から、報いが受けられません。
2 “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
だから、施しをするときには、人にほめられたくて会堂や通りで施しをする偽善者たちのように、自分の前でラッパを吹いてはいけません。まことに、あなたがたに告げます。彼らはすでに自分の報いを受け取っているのです。
3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.
あなたは、施しをするとき、右の手のしていることを左の手に知られないようにしなさい。
4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
あなたの施しが隠れているためです。そうすれば、隠れた所で見ておられるあなたの父が、あなたに報いてくださいます。
5 “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
また、祈るときには、偽善者たちのようであってはいけません。彼らは、人に見られたくて会堂や通りの四つ角に立って祈るのが好きだからです。まことに、あなたがたに告げます。彼らはすでに自分の報いを受け取っているのです。
6 ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.
あなたは、祈るときには自分の奥まった部屋にはいりなさい。そして、戸をしめて、隠れた所におられるあなたの父に祈りなさい。そうすれば、隠れた所で見ておられるあなたの父が、あなたに報いてくださいます。
7 ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
また、祈るとき、異邦人のように同じことばを、ただくり返してはいけません。彼らはことば数が多ければ聞かれると思っているのです。
8 ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ.
だから、彼らのまねをしてはいけません。あなたがたの父なる神は、あなたがたがお願いする先に、あなたがたに必要なものを知っておられるからです。
9 “ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,
だから、こう祈りなさい。 『天にいます私たちの父よ。 御名があがめられますように。
10 ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
御国が来ますように。 みこころが天で行なわれるように地でも行なわれますように。
11 ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.
私たちの日ごとの糧をきょうもお与えください。
12 ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.
私たちの負いめをお赦しください。 私たちも、私たちに負いめのある人たちを赦しました。
13 ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’
私たちを試みに会わせないで、悪からお救いください。』[国と力と栄えは、とこしえにあなたのものだからです。アーメン。]
14 ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.
もし人の罪を赦すなら、あなたがたの天の父もあなたがたを赦してくださいます。
15 ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
しかし、人を赦さないなら、あなたがたの父もあなたがたの罪をお赦しになりません。
16 “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
断食するときには、偽善者たちのようにやつれた顔つきをしてはいけません。彼らは、断食していることが人に見えるようにと、その顔をやつすのです。まことに、あなたがたに告げます。彼らはすでに自分の報いを受け取っているのです。
17 ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.
しかし、あなたが断食するときには、自分の頭に油を塗り、顔を洗いなさい。
18 ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.
それは、断食していることが、人には見られないで、隠れた所におられるあなたの父に見られるためです。そうすれば、隠れた所で見ておられるあなたの父が報いてくださいます。
19 “ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.
自分の宝を地上にたくわえるのはやめなさい。そこでは虫とさびで、きず物になり、また盗人が穴をあけて盗みます。
20 ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.
自分の宝は、天にたくわえなさい。そこでは、虫もさびもつかず、盗人が穴をあけて盗むこともありません。
21 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.
あなたの宝のあるところに、あなたの心もあるからです。
22 “ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
からだのあかりは目です。それで、もしあなたの目が健全なら、あなたの全身が明るいが、
23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!
もし、目が悪ければ、あなたの全身が暗いでしょう。それなら、もしあなたのうちの光が暗ければ、その暗さはどんなでしょう。
24 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.
だれも、ふたりの主人に仕えることはできません。一方を憎んで他方を愛したり、一方を重んじて他方を軽んじたりするからです。あなたがたは、神にも仕え、また富にも仕えるということはできません。
25 “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?
だから、わたしはあなたがたに言います。自分のいのちのことで、何を食べようか、何を飲もうかと心配したり、また、からだのことで、何を着ようかと心配したりしてはいけません。いのちは食べ物よりたいせつなもの、からだは着物よりたいせつなものではありませんか。
26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?
空の鳥を見なさい。種蒔きもせず、刈り入れもせず、倉に納めることもしません。けれども、あなたがたの天の父がこれを養っていてくださるのです。あなたがたは、鳥よりも、もっとすぐれたものではありませんか。
27 ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?
あなたがたのうちだれが、心配したからといって、自分のいのちを少しでも延ばすことができますか。
28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.
なぜ着物のことで心配するのですか。野のゆりがどうして育つのか、よくわきまえなさい。働きもせず、紡ぎもしません。
29 ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.
しかし、わたしはあなたがたに言います。栄華を窮めたソロモンでさえ、このような花の一つほどにも着飾ってはいませんでした。
30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?
きょうあっても、あすは炉に投げ込まれる野の草さえ、神はこれほどに装ってくださるのだから、ましてあなたがたに、よくしてくださらないわけがありましょうか。信仰の薄い人たち。
31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.
そういうわけだから、何を食べるか、何を飲むか、何を着るか、などと言って心配するのはやめなさい。
32 ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.
こういうものはみな、異邦人が切に求めているものなのです。しかし、あなたがたの天の父は、それがみなあなたがたに必要であることを知っておられます。
33 ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
だから、神の国とその義とをまず第一に求めなさい。そうすれば、それに加えて、これらのものはすべて与えられます。
34 ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.
だから、あすのための心配は無用です。あすのことはあすが心配します。労苦はその日その日に、十分あります。