< ಮತ್ತಾಯನು 9 >
1 ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.
Akabva apinda mugwa, akayambuka ndokusvika muguta rake pachake.
2 ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
Zvino tarira, vakauisa kwaari wakafa mitezo, arere pahwanyanza; zvino Jesu achiona rutendo rwavo akati kune wakafa mitezo: Tsunga moyo, mwana, wakanganwirwa zvivi zvako.
3 ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Zvino tarira, vamwe vevanyori vakati mukati mavo: Uyu unonyomba.
4 ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?
Asi Jesu achiona mifungo yavo wakati: Imwi munofungirei zvakaipa mumoyo yenyu?
5 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
Nokuti ndechipi chakareruka, kuti: Wakanganwirwa zvivi; kana kuti: Simuka ufambe?
6 ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
Asi kuti muzive kuti Mwanakomana wemunhu ane simba panyika rekukanganwira zvivi (wakabva ati kune wakange akafa mitezo): Simuka, tora hwanyanza hwako, uende kumba kwako.
7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
Akasimuka, akaenda kumba kwake.
8 ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
Zvaunga zvakati zvichizviona zvikashamisika, zvikarumbidza Mwari wakapa simba rakadai kuvanhu.
9 ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Zvino Jesu wakati achipfuurapo akaona munhu anonzi Matewu agere pahofisi yemutero, akati kwaari: Nditevere! Ndokusimuka, akamutevera.
10 ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.
Uye zvakaitika agere pakudya mumba, zvino tarira, vateresi vazhinji nevatadzi vakauya vakagara pakudya naJesu nevadzidzi vake.
11 ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.
Zvino VaFarisi vakati vachizviona, vakati kuvadzidzi vake: Nemhaka yei Mudzidzisi wenyu achidya nevateresi nevatadzi?
12 ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
Asi Jesu wakati anzwa, akati kwavari: Vatano havadi murapi asi vanorwara.
13 ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.
Asi endai mudzidze kuti zvinorevei kuti: Ndinoda tsitsi uye kwete chibairo; nokuti handina kuuya kuzodana vakarurama, asi vatadzi vauye mukutendeuka.
14 ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
Ipapo kwakasvika kwaari vadzidzi vaJohwani, vachiti: Nemhaka yei isu neVaFarisi tichitsanya kazhinji, asi vadzidzi venyu vasingatsanyi?
15 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.
Jesu ndokuti kwavari: Vana veimba yemuchato vanogona kuchema here apo muwani anavo? Asi mazuva achasvika pachabviswa muwani kwavari, ipapo vachatsanya.
16 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.
Hakuna anoisa chigamba chemucheka usakaunyana panguvo sharu, nokuti icho chinonamirwa pairi chinobvarura panguvo, buri rikanyanya.
17 ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.
Uye havadiri waini itsva muhombodo tsaru; zvikasadaro hombodo dzinoputika, waini ikateuka, nehombodo dzikaparara; asi vanodira waini itsva muhombodo itsva, zvichengeteke zviri zviviri.
18 ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.
Wakati achitaura zvinhu izvozvi kwavari, tarira, kwakasvika umwe mutungamiriri akamunamata, akati: Mukunda wangu achangofa; asi uyai muise ruoko rwenyu pamusoro pake, uye achararama.
19 ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.
Jesu ndokusimuka akamutevera, nevadzidzi vake.
20 ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,
Zvino, tarira, mukadzi waiva nekubuda ropa makore gumi nemaviri, wakaswedera shure kwake, akabata mupendero wenguvo yake.
21 “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.
Nokuti wakati mukati make: Kana ndikangobata nguvo yake, ndichaporeswa.
22 ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.
Asi Jesu wakatendeuka akati amuona, akati: Mukunda, tsunga moyo; rutendo rwako rwakuponesa. Mukadzi ndokuponeswa kubva panguva iyo.
23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,
Jesu ndokusvika mumba memutungamiriri akaona varidzi venyere nechaunga chichiita mhere-mhere,
24 ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.
akati kwavari: Ibvai; nokuti musikana haana kufa, asi arere. Ndokumuseka vachimusvavaidza.
25 ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.
Asi chaunga chakati chabudiswa, akapinda, ndokubata ruoko rwake, musikana ndokumuka.
26 ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.
Mukurumbira uyu ukabudira kunyika iyo yese.
27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.
Zvino Jesu wakati opfuurapo, mapofu maviri akamutevera, achidanidzira achiti: Tinzwirei tsitsi, Mwanakomana waDhavhidhi!
28 ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.
Zvino wakati apinda mumba, mapofu akauya kwaari; Jesu akati kwaari: Munotenda kuti ndinogona kuita izvozvi here? Akati kwaari: Hongu, Ishe.
29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.
Ipapo wakabata meso avo achiti: Ngazviitike kwamuri maererano nerutendo rwenyu.
30 ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.
Zvino meso avo akasvinudzwa; Jesu akavarairisa achiti: Onai kuti hakuna anozviziva.
31 ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.
Asi vakati vabuda, vakaparidzira mukurumbira wake munyika iyo yese.
32 ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.
Zvino vakati vachibuda, tarira, vakauisa kwaari munhu chimumumu waiva akagarwa nedhimoni.
33 ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.
Zvino dhimoni rakati rabudiswa, chimumumu chikataura; zvaunga zvikashamisika zvikati: Hakuna kumboonekwa zvakadai muna Israeri.
34 ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.
Asi VaFarisi vakati: Anobudisa madhimoni nemukuru wemadhimoni.
35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
Zvino Jesu wakapota nemaguta ese nemisha, achidzidzisa mumasinagoge avo, nekuparidza evhangeri yeushe, nekuporesa denda rese neurwere hwese pakati pevanhu.
36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.
Asi wakati achiona zvaunga, akavanzwira tsitsi, nokuti vakange vaneta, vakapararira semakwai asina mufudzi.
37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.
Ipapo akati kuvadzidzi vake: Zvirokwazvo goho iguru, asi vashandi vashoma;
38 ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.
naizvozvo kumbirisai kuna Ishe wegoho, kuti atumire vashandi pagoho rake.