< ಮೀಕನು 3 >

1 ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.
וָאֹמַר שִׁמְעוּ־נָא רָאשֵׁי יַעֲקֹב וּקְצִינֵי בֵּית יִשְׂרָאֵל הֲלוֹא לָכֶם לָדַעַת אֶת־הַמִּשְׁפָּֽט׃
2 ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,
שֹׂנְאֵי טוֹב וְאֹהֲבֵי (רעה) [רָע] גֹּזְלֵי עוֹרָם מֵֽעֲלֵיהֶם וּשְׁאֵרָם מֵעַל עַצְמוֹתָֽם׃
3 ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”
וַאֲשֶׁר אָכְלוּ שְׁאֵר עַמִּי וְעוֹרָם מֵעֲלֵיהֶם הִפְשִׁיטוּ וְאֶת־עַצְמֹֽתֵיהֶם פִּצֵּחוּ וּפָרְשׂוּ כַּאֲשֶׁר בַּסִּיר וּכְבָשָׂר בְּתוֹךְ קַלָּֽחַת׃
4 ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.
אָז יִזְעֲקוּ אֶל־יְהֹוָה וְלֹא יַעֲנֶה אוֹתָם וְיַסְתֵּר פָּנָיו מֵהֶם בָּעֵת הַהִיא כַּאֲשֶׁר הֵרֵעוּ מַעַלְלֵיהֶֽם׃
5 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
כֹּה אָמַר יְהֹוָה עַל־הַנְּבִיאִים הַמַּתְעִים אֶת־עַמִּי הַנֹּשְׁכִים בְּשִׁנֵּיהֶם וְקָרְאוּ שָׁלוֹם וַאֲשֶׁר לֹא־יִתֵּן עַל־פִּיהֶם וְקִדְּשׁוּ עָלָיו מִלְחָמָֽה׃
6 ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.
לָכֵן לַיְלָה לָכֶם מֵֽחָזוֹן וְחָשְׁכָה לָכֶם מִקְּסֹם וּבָאָה הַשֶּׁמֶשׁ עַל־הַנְּבִיאִים וְקָדַר עֲלֵיהֶם הַיּֽוֹם׃
7 ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”
וּבֹשׁוּ הַחֹזִים וְחָֽפְרוּ הַקֹּסְמִים וְעָטוּ עַל־שָׂפָם כֻּלָּם כִּי אֵין מַעֲנֵה אֱלֹהִֽים׃
8 ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
וְאוּלָם אָנֹכִי מָלֵאתִי כֹחַ אֶת־רוּחַ יְהֹוָה וּמִשְׁפָּט וּגְבוּרָה לְהַגִּיד לְיַֽעֲקֹב פִּשְׁעוֹ וּלְיִשְׂרָאֵל חַטָּאתֽוֹ׃
9 ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,
שִׁמְעוּ־נָא זֹאת רָאשֵׁי בֵּית יַעֲקֹב וּקְצִינֵי בֵּית יִשְׂרָאֵל הַֽמְתַעֲבִים מִשְׁפָּט וְאֵת כׇּל־הַיְשָׁרָה יְעַקֵּֽשׁוּ׃
10 ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
בֹּנֶה צִיּוֹן בְּדָמִים וִירוּשָׁלַ͏ִם בְּעַוְלָֽה׃
11 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.
רָאשֶׁיהָ ׀ בְּשֹׁחַד יִשְׁפֹּטוּ וְכֹהֲנֶיהָ בִּמְחִיר יוֹרוּ וּנְבִיאֶיהָ בְּכֶסֶף יִקְסֹמוּ וְעַל־יְהֹוָה יִשָּׁעֵנוּ לֵאמֹר הֲלוֹא יְהֹוָה בְּקִרְבֵּנוּ לֹֽא־תָבוֹא עָלֵינוּ רָעָֽה׃
12 ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.
לָכֵן בִּגְלַלְכֶם צִיּוֹן שָׂדֶה תֵֽחָרֵשׁ וִירוּשָׁלַ͏ִם עִיִּין תִּֽהְיֶה וְהַר הַבַּיִת לְבָמוֹת יָֽעַר׃

< ಮೀಕನು 3 >