< ಮೀಕನು 6 >

1 ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.
שִׁמְעוּ־נָ֕א אֵ֥ת אֲשֶׁר־יְהוָ֖ה אֹמֵ֑ר ק֚וּם רִ֣יב אֶת־הֶהָרִ֔ים וְתִשְׁמַ֥עְנָה הַגְּבָע֖וֹת קוֹלֶֽךָ׃
2 ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.
שִׁמְע֤וּ הָרִים֙ אֶת־רִ֣יב יְהוָ֔ה וְהָאֵתָנִ֖ים מֹ֣סְדֵי אָ֑רֶץ כִּ֣י רִ֤יב לַֽיהוָה֙ עִם־עַמּ֔וֹ וְעִם־יִשְׂרָאֵ֖ל יִתְוַכָּֽח׃
3 ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.
עַמִּ֛י מֶה־עָשִׂ֥יתִי לְךָ֖ וּמָ֣ה הֶלְאֵתִ֑יךָ עֲנֵ֥ה בִֽי׃
4 ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
כִּ֤י הֶעֱלִתִ֙יךָ֙ מֵאֶ֣רֶץ מִצְרַ֔יִם וּמִבֵּ֥ית עֲבָדִ֖ים פְּדִיתִ֑יךָ וָאֶשְׁלַ֣ח לְפָנֶ֔יךָ אֶת־מֹשֶׁ֖ה אַהֲרֹ֥ן וּמִרְיָֽם׃
5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.
עַמִּ֗י זְכָר־נָא֙ מַה־יָּעַ֗ץ בָּלָק֙ מֶ֣לֶךְ מוֹאָ֔ב וּמֶה־עָנָ֥ה אֹת֖וֹ בִּלְעָ֣ם בֶּן־בְּע֑וֹר מִן־הַשִּׁטִּים֙ עַד־הַגִּלְגָּ֔ל לְמַ֕עַן דַּ֖עַת צִדְק֥וֹת יְהוָֽה׃
6 ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?
בַּמָּה֙ אֲקַדֵּ֣ם יְהוָ֔ה אִכַּ֖ף לֵאלֹהֵ֣י מָר֑וֹם הַאֲקַדְּמֶ֣נּוּ בְעוֹל֔וֹת בַּעֲגָלִ֖ים בְּנֵ֥י שָׁנָֽה׃
7 ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?
הֲיִרְצֶ֤ה יְהוָה֙ בְּאַלְפֵ֣י אֵילִ֔ים בְּרִֽבְב֖וֹת נַֽחֲלֵי־שָׁ֑מֶן הַאֶתֵּ֤ן בְּכוֹרִי֙ פִּשְׁעִ֔י פְּרִ֥י בִטְנִ֖י חַטַּ֥את נַפְשִֽׁי׃
8 ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?
הִגִּ֥יד לְךָ֛ אָדָ֖ם מַה־טּ֑וֹב וּמָֽה־יְהוָ֞ה דּוֹרֵ֣שׁ מִמְּךָ֗ כִּ֣י אִם־עֲשׂ֤וֹת מִשְׁפָּט֙ וְאַ֣הֲבַת חֶ֔סֶד וְהַצְנֵ֥עַ לֶ֖כֶת עִם־אֱלֹהֶֽיךָ׃ פ
9 ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.
ק֤וֹל יְהוָה֙ לָעִ֣יר יִקְרָ֔א וְתוּשִׁיָּ֖ה יִרְאֶ֣ה שְׁמֶ֑ךָ שִׁמְע֥וּ מַטֶּ֖ה וּמִ֥י יְעָדָֽהּ׃
10 ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?
ע֗וֹד הַאִשׁ֙ בֵּ֣ית רָשָׁ֔ע אֹצְר֖וֹת רֶ֑שַׁע וְאֵיפַ֥ת רָז֖וֹן זְעוּמָֽה׃
11 ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
הַאֶזְכֶּ֖ה בְּמֹ֣אזְנֵי רֶ֑שַׁע וּבְכִ֖יס אַבְנֵ֥י מִרְמָֽה׃
12 ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
אֲשֶׁ֤ר עֲשִׁירֶ֙יהָ֙ מָלְא֣וּ חָמָ֔ס וְיֹשְׁבֶ֖יהָ דִּבְּרוּ־שָׁ֑קֶר וּלְשׁוֹנָ֖ם רְמִיָּ֥ה בְּפִיהֶֽם׃
13 ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
וְגַם־אֲנִ֖י הֶחֱלֵ֣יתִי הַכּוֹתֶ֑ךָ הַשְׁמֵ֖ם עַל־חַטֹּאתֶֽךָ׃
14 ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.
אַתָּ֤ה תֹאכַל֙ וְלֹ֣א תִשְׂבָּ֔ע וְיֶשְׁחֲךָ֖ בְּקִרְבֶּ֑ךָ וְתַסֵּג֙ וְלֹ֣א תַפְלִ֔יט וַאֲשֶׁ֥ר תְּפַלֵּ֖ט לַחֶ֥רֶב אֶתֵּֽן׃
15 ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.
אַתָּ֥ה תִזְרַ֖ע וְלֹ֣א תִקְצ֑וֹר אַתָּ֤ה תִדְרֹֽךְ־זַ֙יִת֙ וְלֹא־תָס֣וּךְ שֶׁ֔מֶן וְתִיר֖וֹשׁ וְלֹ֥א תִשְׁתֶּה־יָּֽיִן׃
16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.
וְיִשְׁתַּמֵּ֞ר חֻקּ֣וֹת עָמְרִ֗י וְכֹל֙ מַעֲשֵׂ֣ה בֵית־אַחְאָ֔ב וַתֵּלְכ֖וּ בְּמֹֽעֲצוֹתָ֑ם לְמַעַן֩ תִּתִּ֨י אֹתְךָ֜ לְשַׁמָּ֗ה וְיֹשְׁבֶ֙יהָ֙ לִשְׁרֵקָ֔ה וְחֶרְפַּ֥ת עַמִּ֖י תִּשָּֽׂאוּ׃ פ

< ಮೀಕನು 6 >