< ನಹೂಮನು 1 >

1 ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
מַשָּׂא נִֽינְוֵה סֵפֶר חֲזוֹן נַחוּם הָאֶלְקֹשִֽׁי׃
2 ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.
אֵל קַנּוֹא וְנֹקֵם יְהֹוָה נֹקֵם יְהֹוָה וּבַעַל חֵמָה נֹקֵם יְהֹוָה לְצָרָיו וְנוֹטֵר הוּא לְאֹיְבָֽיו׃
3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.
יְהֹוָה אֶרֶךְ אַפַּיִם (וגדול) [וּגְדׇל־]כֹּחַ וְנַקֵּה לֹא יְנַקֶּה יְהֹוָה בְּ ס וּפָה וּבִשְׂעָרָה דַּרְכּוֹ וְעָנָן אֲבַק רַגְלָֽיו׃
4 ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.
גּוֹעֵר בַּיָּם וַֽיַּבְּשֵׁהוּ וְכׇל־הַנְּהָרוֹת הֶחֱרִיב אֻמְלַל בָּשָׁן וְכַרְמֶל וּפֶרַח לְבָנוֹן אֻמְלָֽל׃
5 ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.
הָרִים רָעֲשׁוּ מִמֶּנּוּ וְהַגְּבָעוֹת הִתְמֹגָגוּ וַתִּשָּׂא הָאָרֶץ מִפָּנָיו וְתֵבֵל וְכׇל־יוֹשְׁבֵי בָֽהּ׃
6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.
לִפְנֵי זַעְמוֹ מִי יַעֲמוֹד וּמִי יָקוּם בַּחֲרוֹן אַפּוֹ חֲמָתוֹ נִתְּכָה כָאֵשׁ וְהַצֻּרִים נִתְּצוּ מִמֶּֽנּוּ׃
7 ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.
טוֹב יְהֹוָה לְמָעוֹז בְּיוֹם צָרָה וְיֹדֵעַ חֹסֵי בֽוֹ׃
8 ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.
וּבְשֶׁטֶף עֹבֵר כָּלָה יַעֲשֶׂה מְקוֹמָהּ וְאֹיְבָיו יְרַדֶּף־חֹֽשֶׁךְ׃
9 ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.
מַה־תְּחַשְּׁבוּן אֶל־יְהֹוָה כָּלָה הוּא עֹשֶׂה לֹא־תָקוּם פַּעֲמַיִם צָרָֽה׃
10 ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.
כִּי עַד־סִירִים סְבֻכִים וּכְסׇבְאָם סְבוּאִים אֻכְּלוּ כְּקַשׁ יָבֵשׁ מָלֵֽא׃
11 ನಿನೆವೆಯೇ ಯೆಹೋವ ದೇವರಿಗೆ ವಿರೋಧವಾಗಿ ದುರಾಲೋಚನೆ ಮಾಡಿ, ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
מִמֵּךְ יָצָא חֹשֵׁב עַל־יְהֹוָה רָעָה יֹעֵץ בְּלִיָּֽעַל׃
12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.
כֹּה ׀ אָמַר יְהֹוָה אִם־שְׁלֵמִים וְכֵן רַבִּים וְכֵן נָגוֹזּוּ וְעָבָר וְעִנִּתִךְ לֹא אֲעַנֵּךְ עֽוֹד׃
13 ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.
וְעַתָּה אֶשְׁבֹּר מֹטֵהוּ מֵעָלָיִךְ וּמוֹסְרֹתַיִךְ אֲנַתֵּֽק׃
14 ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.
וְצִוָּה עָלֶיךָ יְהֹוָה לֹא־יִזָּרַע מִשִּׁמְךָ עוֹד מִבֵּית אֱלֹהֶיךָ אַכְרִית פֶּסֶל וּמַסֵּכָה אָשִׂים קִבְרֶךָ כִּי קַלּֽוֹתָ׃
15 ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.
הִנֵּה עַל־הֶהָרִים רַגְלֵי מְבַשֵּׂר מַשְׁמִיעַ שָׁלוֹם חׇגִּי יְהוּדָה חַגַּיִךְ שַׁלְּמִי נְדָרָיִךְ כִּי לֹא יוֹסִיף עוֹד (לעבור) [לַעֲבׇר־]בָּךְ בְּלִיַּעַל כֻּלֹּה נִכְרָֽת׃

< ನಹೂಮನು 1 >