< ನೆಹೆಮೀಯನು 13 >

1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.
בַּיּוֹם הַהוּא נִקְרָא בְּסֵפֶר מֹשֶׁה בְּאׇזְנֵי הָעָם וְנִמְצָא כָּתוּב בּוֹ אֲשֶׁר לֹא־יָבוֹא עַמֹּנִי וּמוֹאָבִי בִּקְהַל הָאֱלֹהִים עַד־עוֹלָֽם׃
2 ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.
כִּי לֹא קִדְּמוּ אֶת־בְּנֵי יִשְׂרָאֵל בַּלֶּחֶם וּבַמָּיִם וַיִּשְׂכֹּר עָלָיו אֶת־בִּלְעָם לְקַֽלְלוֹ וַיַּהֲפֹךְ אֱלֹהֵינוּ הַקְּלָלָה לִבְרָכָֽה׃
3 ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.
וַיְהִי כְּשׇׁמְעָם אֶת־הַתּוֹרָה וַיַּבְדִּילוּ כׇל־עֵרֶב מִיִּשְׂרָאֵֽל׃
4 ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ವಿಚಾರಕನಾಗಿದ್ದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಮೀಪ ಬಂಧುವಾಗಿದ್ದನು.
וְלִפְנֵי מִזֶּה אֶלְיָשִׁיב הַכֹּהֵן נָתוּן בְּלִשְׁכַּת בֵּית־אֱלֹהֵינוּ קָרוֹב לְטוֹבִיָּֽה׃
5 ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.
וַיַּעַשׂ לוֹ לִשְׁכָּה גְדוֹלָה וְשָׁם הָיוּ לְפָנִים נֹתְנִים אֶת־הַמִּנְחָה הַלְּבוֹנָה וְהַכֵּלִים וּמַעְשַׂר הַדָּגָן הַתִּירוֹשׁ וְהַיִּצְהָר מִצְוַת הַלְוִיִּם וְהַמְשֹׁרְרִים וְהַשּׁוֹעֲרִים וּתְרוּמַת הַכֹּהֲנִֽים׃
6 ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,
וּבְכׇל־זֶה לֹא הָיִיתִי בִּֽירוּשָׁלָ͏ִם כִּי בִּשְׁנַת שְׁלֹשִׁים וּשְׁתַּיִם לְאַרְתַּחְשַׁסְתְּא מֶֽלֶךְ־בָּבֶל בָּאתִי אֶל־הַמֶּלֶךְ וּלְקֵץ יָמִים נִשְׁאַלְתִּי מִן־הַמֶּֽלֶךְ׃
7 ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನಾನು ಕಂಡಾಗ, ಅದು ನನಗೆ ಬಹಳ ವ್ಯಸನಕರವಾಯಿತು.
וָאָבוֹא לִֽירוּשָׁלָ͏ִם וָאָבִינָה בָרָעָה אֲשֶׁר עָשָׂה אֶלְיָשִׁיב לְטוֹבִיָּה לַעֲשׂוֹת לוֹ נִשְׁכָּה בְּחַצְרֵי בֵּית הָאֱלֹהִֽים׃
8 ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು.
וַיֵּרַֽע לִי מְאֹד וָֽאַשְׁלִיכָה אֶֽת־כׇּל־כְּלֵי בֵית־טוֹבִיָּה הַחוּץ מִן־הַלִּשְׁכָּֽה׃
9 ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು.
וָאֹמְרָה וַֽיְטַהֲרוּ הַלְּשָׁכוֹת וָאָשִׁיבָה שָּׁם כְּלֵי בֵּית הָאֱלֹהִים אֶת־הַמִּנְחָה וְהַלְּבוֹנָֽה׃
10 ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.
וָאֵדְעָה כִּֽי־מְנָיוֹת הַלְוִיִּם לֹא נִתָּנָה וַיִּבְרְחוּ אִישׁ־לְשָׂדֵהוּ הַלְוִיִּם וְהַמְשֹׁרְרִים עֹשֵׂי הַמְּלָאכָֽה׃
11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
וָאָרִיבָה אֶת־הַסְּגָנִים וָאֹמְרָה מַדּוּעַ נֶעֱזַב בֵּית־הָאֱלֹהִים וָֽאֶקְבְּצֵם וָֽאַעֲמִדֵם עַל־עׇמְדָֽם׃
12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.
וְכׇל־יְהוּדָה הֵבִיאוּ מַעְשַׂר הַדָּגָן וְהַתִּירוֹשׁ וְהַיִּצְהָר לָאוֹצָרֽוֹת׃
13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.
וָאוֹצְרָה עַל־אוֹצָרוֹת שֶׁלֶמְיָה הַכֹּהֵן וְצָדוֹק הַסּוֹפֵר וּפְדָיָה מִן־הַלְוִיִּם וְעַל־יָדָם חָנָן בֶּן־זַכּוּר בֶּן־מַתַּנְיָה כִּי נֶאֱמָנִים נֶחְשָׁבוּ וַעֲלֵיהֶם לַחֲלֹק לַאֲחֵיהֶֽם׃
14 ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.
זׇכְרָה־לִּי אֱלֹהַי עַל־זֹאת וְאַל־תֶּמַח חֲסָדַי אֲשֶׁר עָשִׂיתִי בְּבֵית אֱלֹהַי וּבְמִשְׁמָרָֽיו׃
15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.
בַּיָּמִים הָהֵמָּה רָאִיתִי בִֽיהוּדָה ׀ דֹּֽרְכִֽים־גִּתּוֹת ׀ בַּשַּׁבָּת וּמְבִיאִים הָעֲרֵמוֹת וְֽעֹמְסִים עַל־הַחֲמֹרִים וְאַף־יַיִן עֲנָבִים וּתְאֵנִים וְכׇל־מַשָּׂא וּמְבִיאִים יְרוּשָׁלַ͏ִם בְּיוֹם הַשַּׁבָּת וָאָעִיד בְּיוֹם מִכְרָם צָֽיִד׃
16 ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
וְהַצֹּרִים יָשְׁבוּ בָהּ מְבִיאִים דָּאג וְכׇל־מֶכֶר וּמוֹכְרִים בַּשַּׁבָּת לִבְנֵי יְהוּדָה וּבִירוּשָׁלָֽ͏ִם׃
17 ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?
וָאָרִיבָה אֵת חֹרֵי יְהוּדָה וָאֹמְרָה לָהֶם מָֽה־הַדָּבָר הָרָע הַזֶּה אֲשֶׁר אַתֶּם עֹשִׂים וּֽמְחַלְּלִים אֶת־יוֹם הַשַּׁבָּֽת׃
18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”
הֲלוֹא כֹה עָשׂוּ אֲבֹתֵיכֶם וַיָּבֵא אֱלֹהֵינוּ עָלֵינוּ אֵת כׇּל־הָרָעָה הַזֹּאת וְעַל הָעִיר הַזֹּאת וְאַתֶּם מוֹסִיפִים חָרוֹן עַל־יִשְׂרָאֵל לְחַלֵּל אֶת־הַשַּׁבָּֽת׃
19 ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.
וַיְהִי כַּאֲשֶׁר צָֽלְלוּ שַׁעֲרֵי יְרוּשָׁלַ͏ִם לִפְנֵי הַשַּׁבָּת וָאֹֽמְרָה וַיִּסָּגְרוּ הַדְּלָתוֹת וָאֹמְרָה אֲשֶׁר לֹא יִפְתָּחוּם עַד אַחַר הַשַּׁבָּת וּמִנְּעָרַי הֶֽעֱמַדְתִּי עַל־הַשְּׁעָרִים לֹא־יָבוֹא מַשָּׂא בְּיוֹם הַשַּׁבָּֽת׃
20 ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
וַיָּלִינוּ הָרֹכְלִים וּמֹכְרֵי כׇל־מִמְכָּר מִחוּץ לִירוּשָׁלָ͏ִם פַּעַם וּשְׁתָּֽיִם׃
21 ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ.
וָאָעִידָה בָהֶם וָאֹמְרָה אֲלֵיהֶם מַדּוּעַ אַתֶּם לֵנִים נֶגֶד הַחוֹמָה אִם־תִּשְׁנוּ יָד אֶשְׁלַח בָּכֶם מִן־הָעֵת הַהִיא לֹא־בָאוּ בַּשַּׁבָּֽת׃
22 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.
וָאֹמְרָה לַלְוִיִּם אֲשֶׁר יִֽהְיוּ מִֽטַּהֲרִים וּבָאִים שֹׁמְרִים הַשְּׁעָרִים לְקַדֵּשׁ אֶת־יוֹם הַשַּׁבָּת גַּם־זֹאת זׇכְרָה־לִּי אֱלֹהַי וְחוּסָה עָלַי כְּרֹב חַסְדֶּֽךָ׃
23 ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
גַּם ׀ בַּיָּמִים הָהֵם רָאִיתִי אֶת־הַיְּהוּדִים הֹשִׁיבוּ נָשִׁים (אשדודיות) [אַשְׁדֳּדִיּוֹת] (עמוניות) [עַמֳּנִיּוֹת] מוֹאֲבִיּֽוֹת׃
24 ಇವರ ಮಕ್ಕಳು ಅರ್ಧಮಂದಿ ಯೆಹೂದ್ಯರ ಭಾಷೆಯಲ್ಲಿ ಮಾತಾಡಲು ತಿಳಿಯದೆ, ಅಷ್ಡೋದ್ಯರ ಮತ್ತು ಬೇರೆ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು.
וּבְנֵיהֶם חֲצִי מְדַבֵּר אַשְׁדּוֹדִית וְאֵינָם מַכִּירִים לְדַבֵּר יְהוּדִית וְכִלְשׁוֹן עַם וָעָֽם׃
25 ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.
וָאָרִיב עִמָּם וָאֲקַֽלְלֵם וָאַכֶּה מֵהֶם אֲנָשִׁים וָֽאֶמְרְטֵם וָאַשְׁבִּיעֵם בֵּֽאלֹהִים אִם־תִּתְּנוּ בְנֹֽתֵיכֶם לִבְנֵיהֶם וְאִם־תִּשְׂאוּ מִבְּנֹתֵיהֶם לִבְנֵיכֶם וְלָכֶֽם׃
26 ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.
הֲלוֹא עַל־אֵלֶּה חָטָֽא־שְׁלֹמֹה מֶלֶךְ יִשְׂרָאֵל וּבַגּוֹיִם הָרַבִּים לֹֽא־הָיָה מֶלֶךְ כָּמֹהוּ וְאָהוּב לֵֽאלֹהָיו הָיָה וַיִּתְּנֵהוּ אֱלֹהִים מֶלֶךְ עַל־כׇּל־יִשְׂרָאֵל גַּם־אוֹתוֹ הֶחֱטִיאוּ הַנָּשִׁים הַנׇּכְרִיּֽוֹת׃
27 ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು.
וְלָכֶם הֲנִשְׁמַע לַעֲשֹׂת אֵת כׇּל־הָרָעָה הַגְּדוֹלָה הַזֹּאת לִמְעֹל בֵּֽאלֹהֵינוּ לְהֹשִׁיב נָשִׁים נׇכְרִיּֽוֹת׃
28 ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
וּמִבְּנֵי יוֹיָדָע בֶּן־אֶלְיָשִׁיב הַכֹּהֵן הַגָּדוֹל חָתָן לְסַנְבַלַּט הַחֹרֹנִי וָאַבְרִיחֵהוּ מֵעָלָֽי׃
29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ.
זׇכְרָה לָהֶם אֱלֹהָי עַל גׇּאֳלֵי הַכְּהֻנָּה וּבְרִית הַכְּהֻנָּה וְהַלְוִיִּֽם׃
30 ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ,
וְטִֽהַרְתִּים מִכׇּל־נֵכָר וָאַעֲמִידָה מִשְׁמָרוֹת לַכֹּהֲנִים וְלַלְוִיִּם אִישׁ בִּמְלַאכְתּֽוֹ׃
31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.
וּלְקֻרְבַּן הָעֵצִים בְּעִתִּים מְזֻמָּנוֹת וְלַבִּכּוּרִים זׇכְרָה־לִּי אֱלֹהַי לְטוֹבָֽה׃

< ನೆಹೆಮೀಯನು 13 >