< ನೆಹೆಮೀಯನು 9 >

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
וּבְיוֹם֩ עֶשְׂרִ֨ים וְאַרְבָּעָ֜ה לַחֹ֣דֶשׁ הַזֶּ֗ה נֶאֶסְפ֤וּ בְנֵֽי־יִשְׂרָאֵל֙ בְּצ֣וֹם וּבְשַׂקִּ֔ים וַאֲדָמָ֖ה עֲלֵיהֶֽם׃
2 ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.
וַיִּבָּֽדְלוּ֙ זֶ֣רַע יִשְׂרָאֵ֔ל מִכֹּ֖ל בְּנֵ֣י נֵכָ֑ר וַיַּעַמְד֗וּ וַיִּתְוַדּוּ֙ עַל־חַטֹּ֣אתֵיהֶ֔ם וַעֲוֹנ֖וֹת אֲבֹתֵיהֶֽם׃
3 ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.
וַיָּק֙וּמוּ֙ עַל־עָמְדָ֔ם וַֽיִּקְרְא֗וּ בְּסֵ֨פֶר תּוֹרַ֧ת יְהוָ֛ה אֱלֹהֵיהֶ֖ם רְבִעִ֣ית הַיּ֑וֹם וּרְבִעִית֙ מִתְוַדִּ֣ים וּמִֽשְׁתַּחֲוִ֔ים לַיהוָ֖ה אֱלֹהֵיהֶֽם׃ פ
4 ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.
וַיָּ֜קָם עַֽל־מַֽעֲלֵ֣ה הַלְוִיִּ֗ם יֵשׁ֨וּעַ וּבָנִ֜י קַדְמִיאֵ֧ל שְׁבַנְיָ֛ה בֻּנִּ֥י שֵׁרֵבְיָ֖ה בָּנִ֣י כְנָ֑נִי וַֽיִּזְעֲקוּ֙ בְּק֣וֹל גָּד֔וֹל אֶל־יְהוָ֖ה אֱלֹהֵיהֶֽם׃
5 ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.
וַיֹּאמְר֣וּ הַלְוִיִּ֡ם יֵשׁ֣וּעַ וְ֠קַדְמִיאֵל בָּנִ֨י חֲשַׁבְנְיָ֜ה שֵׁרֵֽבְיָ֤ה הֽוֹדִיָּה֙ שְׁבַנְיָ֣ה פְתַֽחְיָ֔ה ק֗וּמוּ בָּרֲכוּ֙ אֶת־יְהוָ֣ה אֱלֹֽהֵיכֶ֔ם מִן־הָעוֹלָ֖ם עַד־הָעוֹלָ֑ם וִיבָֽרְכוּ֙ שֵׁ֣ם כְּבוֹדֶ֔ךָ וּמְרוֹמַ֥ם עַל־כָּל־בְּרָכָ֖ה וּתְהִלָּֽה׃
6 ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.
אַתָּה־ה֣וּא יְהוָה֮ לְבַדֶּךָ֒ אַתָּ֣ה עָשִׂ֡יתָ אֶֽת־הַשָּׁמַיִם֩ שְׁמֵ֨י הַשָּׁמַ֜יִם וְכָל־צְבָאָ֗ם הָאָ֜רֶץ וְכָל־אֲשֶׁ֤ר עָלֶ֙יהָ֙ הַיַּמִּים֙ וְכָל־אֲשֶׁ֣ר בָּהֶ֔ם וְאַתָּ֖ה מְחַיֶּ֣ה אֶת־כֻּלָּ֑ם וּצְבָ֥א הַשָּׁמַ֖יִם לְךָ֥ מִשְׁתַּחֲוִֽים׃
7 “ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.
אַתָּה־הוּא֙ יְהוָ֣ה הָאֱלֹהִ֔ים אֲשֶׁ֤ר בָּחַ֙רְתָּ֙ בְּאַבְרָ֔ם וְהוֹצֵאת֖וֹ מֵא֣וּר כַּשְׂדִּ֑ים וְשַׂ֥מְתָּ שְּׁמ֖וֹ אַבְרָהָֽם׃
8 ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.
וּמָצָ֣אתָ אֶת־לְבָבוֹ֮ נֶאֱמָ֣ן לְפָנֶיךָ֒ וְכָר֨וֹת עִמּ֜וֹ הַבְּרִ֗ית לָתֵ֡ת אֶת־אֶרֶץ֩ הַכְּנַעֲנִ֨י הַחִתִּ֜י הָאֱמֹרִ֧י וְהַפְּרִזִּ֛י וְהַיְבוּסִ֥י וְהַגִּרְגָּשִׁ֖י לָתֵ֣ת לְזַרְע֑וֹ וַתָּ֙קֶם֙ אֶת־דְּבָרֶ֔יךָ כִּ֥י צַדִּ֖יק אָֽתָּה׃
9 “ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.
וַתֵּ֛רֶא אֶת־עֳנִ֥י אֲבֹתֵ֖ינוּ בְּמִצְרָ֑יִם וְאֶת־זַעֲקָתָ֥ם שָׁמַ֖עְתָּ עַל־יַם־סֽוּף׃
10 ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.
וַ֠תִּתֵּן אֹתֹ֨ת וּמֹֽפְתִ֜ים בְּפַרְעֹ֤ה וּבְכָל־עֲבָדָיו֙ וּבְכָל־עַ֣ם אַרְצ֔וֹ כִּ֣י יָדַ֔עְתָּ כִּ֥י הֵזִ֖ידוּ עֲלֵיהֶ֑ם וַתַּֽעַשׂ־לְךָ֥ שֵׁ֖ם כְּהַיּ֥וֹם הַזֶּֽה׃
11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ
וְהַיָּם֙ בָּקַ֣עְתָּ לִפְנֵיהֶ֔ם וַיַּֽעַבְר֥וּ בְתוֹךְ־הַיָּ֖ם בַּיַּבָּשָׁ֑ה וְֽאֶת־רֹ֨דְפֵיהֶ֜ם הִשְׁלַ֧כְתָּ בִמְצוֹלֹ֛ת כְּמוֹ־אֶ֖בֶן בְּמַ֥יִם עַזִּֽים׃
12 ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.
וּבְעַמּ֣וּד עָנָ֔ן הִנְחִיתָ֖ם יוֹמָ֑ם וּבְעַמּ֥וּד אֵשׁ֙ לַ֔יְלָה לְהָאִ֣יר לָהֶ֔ם אֶת־הַדֶּ֖רֶךְ אֲשֶׁ֥ר יֵֽלְכוּ־בָֽהּ׃
13 “ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.
וְעַ֤ל הַר־סִינַי֙ יָרַ֔דְתָּ וְדַבֵּ֥ר עִמָּהֶ֖ם מִשָּׁמָ֑יִם וַתִּתֵּ֨ן לָהֶ֜ם מִשְׁפָּטִ֤ים יְשָׁרִים֙ וְתוֹר֣וֹת אֱמֶ֔ת חֻקִּ֥ים וּמִצְוֹ֖ת טוֹבִֽים׃
14 ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.
וְאֶת־שַׁבַּ֥ת קָדְשְׁךָ֖ הוֹדַ֣עַתָ לָהֶ֑ם וּמִצְו֤וֹת וְחֻקִּים֙ וְתוֹרָ֔ה צִוִּ֣יתָ לָהֶ֔ם בְּיַ֖ד מֹשֶׁ֥ה עַבְדֶּֽךָ׃
15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.
וְ֠לֶחֶם מִשָּׁמַ֜יִם נָתַ֤תָּה לָהֶם֙ לִרְעָבָ֔ם וּמַ֗יִם מִסֶּ֛לַע הוֹצֵ֥אתָ לָהֶ֖ם לִצְמָאָ֑ם וַתֹּ֣אמֶר לָהֶ֗ם לָבוֹא֙ לָרֶ֣שֶׁת אֶת־הָאָ֔רֶץ אֲשֶׁר־נָשָׂ֥אתָ אֶת־יָדְךָ֖ לָתֵ֥ת לָהֶֽם׃
16 “ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.
וְהֵ֥ם וַאֲבֹתֵ֖ינוּ הֵזִ֑ידוּ וַיַּקְשׁוּ֙ אֶת־עָרְפָּ֔ם וְלֹ֥א שָׁמְע֖וּ אֶל־מִצְוֹתֶֽיךָ׃
17 ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.
וַיְמָאֲנ֣וּ לִשְׁמֹ֗עַ וְלֹא־זָכְר֤וּ נִפְלְאֹתֶ֙יךָ֙ אֲשֶׁ֣ר עָשִׂ֣יתָ עִמָּהֶ֔ם וַיַּקְשׁוּ֙ אֶת־עָרְפָּ֔ם וַיִּתְּנוּ־רֹ֛אשׁ לָשׁ֥וּב לְעַבְדֻתָ֖ם בְּמִרְיָ֑ם וְאַתָּה֩ אֱל֨וֹהַּ סְלִיח֜וֹת חַנּ֧וּן וְרַח֛וּם אֶֽרֶךְ־אַפַּ֥יִם וְרַב־חֶ֖סֶד וְלֹ֥א עֲזַבְתָּֽם׃
18 ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.
אַ֗ף כִּֽי־עָשׂ֤וּ לָהֶם֙ עֵ֣גֶל מַסֵּכָ֔ה וַיֹּ֣אמְר֔וּ זֶ֣ה אֱלֹהֶ֔יךָ אֲשֶׁ֥ר הֶעֶלְךָ֖ מִמִּצְרָ֑יִם וַֽיַּעֲשׂ֔וּ נֶאָצ֖וֹת גְּדֹלֽוֹת׃
19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.
וְאַתָּה֙ בְּרַחֲמֶ֣יךָ הָֽרַבִּ֔ים לֹ֥א עֲזַבְתָּ֖ם בַּמִּדְבָּ֑ר אֶת־עַמּ֣וּד הֶ֠עָנָן לֹא־סָ֨ר מֵעֲלֵיהֶ֤ם בְּיוֹמָם֙ לְהַנְחֹתָ֣ם בְּהַדֶּ֔רֶךְ וְאֶת־עַמּ֨וּד הָאֵ֤שׁ בְּלַ֙יְלָה֙ לְהָאִ֣יר לָהֶ֔ם וְאֶת־הַדֶּ֖רֶךְ אֲשֶׁ֥ר יֵֽלְכוּ־בָֽהּ׃
20 ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.
וְרוּחֲךָ֨ הַטּוֹבָ֔ה נָתַ֖תָּ לְהַשְׂכִּילָ֑ם וּמַנְךָ֙ לֹא־מָנַ֣עְתָּ מִפִּיהֶ֔ם וּמַ֛יִם נָתַ֥תָּה לָהֶ֖ם לִצְמָאָֽם׃
21 ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ.
וְאַרְבָּעִ֥ים שָׁנָ֛ה כִּלְכַּלְתָּ֥ם בַּמִּדְבָּ֖ר לֹ֣א חָסֵ֑רוּ שַׂלְמֹֽתֵיהֶם֙ לֹ֣א בָל֔וּ וְרַגְלֵיהֶ֖ם לֹ֥א בָצֵֽקוּ׃
22 “ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.
וַתִּתֵּ֨ן לָהֶ֤ם מַמְלָכוֹת֙ וַעֲמָמִ֔ים וַֽתַּחְלְקֵ֖ם לְפֵאָ֑ה וַיִּֽירְשׁ֞וּ אֶת־אֶ֣רֶץ סִיח֗וֹן וְאֶת־אֶ֙רֶץ֙ מֶ֣לֶךְ חֶשְׁבּ֔וֹן וְאֶת־אֶ֖רֶץ ע֥וֹג מֶֽלֶךְ־הַבָּשָֽׁן׃
23 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.
וּבְנֵיהֶ֣ם הִרְבִּ֔יתָ כְּכֹכְבֵ֖י הַשָּׁמָ֑יִם וַתְּבִיאֵם֙ אֶל־הָאָ֔רֶץ אֲשֶׁר־אָמַ֥רְתָּ לַאֲבֹתֵיהֶ֖ם לָב֥וֹא לָרָֽשֶׁת׃
24 ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.
וַיָּבֹ֤אוּ הַבָּנִים֙ וַיִּֽירְשׁ֣וּ אֶת־הָאָ֔רֶץ וַתַּכְנַ֨ע לִפְנֵיהֶ֜ם אֶת־יֹשְׁבֵ֤י הָאָ֙רֶץ֙ הַכְּנַ֣עֲנִ֔ים וַֽתִּתְּנֵ֖ם בְּיָדָ֑ם וְאֶת־מַלְכֵיהֶם֙ וְאֶת־עַֽמְמֵ֣י הָאָ֔רֶץ לַעֲשׂ֥וֹת בָּהֶ֖ם כִּרְצוֹנָֽם׃
25 ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.
וַֽיִּלְכְּד֞וּ עָרִ֣ים בְּצֻרוֹת֮ וַאֲדָמָ֣ה שְׁמֵנָה֒ וַיִּֽירְשׁ֡וּ בָּתִּ֣ים מְלֵֽאִים־כָּל־ט֠וּב בֹּר֨וֹת חֲצוּבִ֜ים כְּרָמִ֧ים וְזֵיתִ֛ים וְעֵ֥ץ מַאֲכָ֖ל לָרֹ֑ב וַיֹּאכְל֤וּ וַֽיִּשְׂבְּעוּ֙ וַיַּשְׁמִ֔ינוּ וַיִּֽתְעַדְּנ֖וּ בְּטוּבְךָ֥ הַגָּדֽוֹל׃
26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.
וַיַּמְר֨וּ וַֽיִּמְרְד֜וּ בָּ֗ךְ וַיַּשְׁלִ֤כוּ אֶת־תּוֹרָֽתְךָ֙ אַחֲרֵ֣י גַוָּ֔ם וְאֶת־נְבִיאֶ֣יךָ הָרָ֔גוּ אֲשֶׁר־הֵעִ֥ידוּ בָ֖ם לַהֲשִׁיבָ֣ם אֵלֶ֑יךָ וַֽיַּעֲשׂ֔וּ נֶאָצ֖וֹת גְּדוֹלֹֽת׃
27 ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.
וַֽתִּתְּנֵם֙ בְּיַ֣ד צָֽרֵיהֶ֔ם וַיָּצֵ֖רוּ לָהֶ֑ם וּבְעֵ֤ת צָֽרָתָם֙ יִצְעֲק֣וּ אֵלֶ֔יךָ וְאַתָּה֙ מִשָּׁמַ֣יִם תִּשְׁמָ֔ע וּֽכְרַחֲמֶ֣יךָ הָֽרַבִּ֗ים תִּתֵּ֤ן לָהֶם֙ מֽוֹשִׁיעִ֔ים וְיוֹשִׁיע֖וּם מִיַּ֥ד צָרֵיהֶֽם׃
28 “ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.
וּכְנ֣וֹחַ לָהֶ֔ם יָשׁ֕וּבוּ לַעֲשׂ֥וֹת רַ֖ע לְפָנֶ֑יךָ וַתַּֽעַזְבֵ֞ם בְּיַ֤ד אֹֽיְבֵיהֶם֙ וַיִּרְדּ֣וּ בָהֶ֔ם וַיָּשׁ֙וּבוּ֙ וַיִּזְעָק֔וּךָ וְאַתָּ֞ה מִשָּׁמַ֧יִם תִּשְׁמַ֛ע וְתַצִּילֵ֥ם כְּֽרַחֲמֶ֖יךָ רַבּ֥וֹת עִתִּֽים׃
29 “ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.
וַתָּ֨עַד בָּהֶ֜ם לַהֲשִׁיבָ֣ם אֶל־תּוֹרָתֶ֗ךָ וְהֵ֨מָּה הֵזִ֜ידוּ וְלֹא־שָׁמְע֤וּ לְמִצְוֹתֶ֙יךָ֙ וּבְמִשְׁפָּטֶ֣יךָ חָֽטְאוּ־בָ֔ם אֲשֶׁר־יַעֲשֶׂ֥ה אָדָ֖ם וְחָיָ֣ה בָהֶ֑ם וַיִּתְּנ֤וּ כָתֵף֙ סוֹרֶ֔רֶת וְעָרְפָּ֥ם הִקְשׁ֖וּ וְלֹ֥א שָׁמֵֽעוּ׃
30 ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.
וַתִּמְשֹׁ֤ךְ עֲלֵיהֶם֙ שָׁנִ֣ים רַבּ֔וֹת וַתָּ֨עַד בָּ֧ם בְּרוּחֲךָ֛ בְּיַד־נְבִיאֶ֖יךָ וְלֹ֣א הֶאֱזִ֑ינוּ וַֽתִּתְּנֵ֔ם בְּיַ֖ד עַמֵּ֥י הָאֲרָצֹֽת׃
31 ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.
וּֽבְרַחֲמֶ֧יךָ הָרַבִּ֛ים לֹֽא־עֲשִׂיתָ֥ם כָּלָ֖ה וְלֹ֣א עֲזַבְתָּ֑ם כִּ֛י אֵֽל־חַנּ֥וּן וְרַח֖וּם אָֽתָּה׃
32 “ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.
וְעַתָּ֣ה אֱ֠לֹהֵינוּ הָאֵ֨ל הַגָּד֜וֹל הַגִּבּ֣וֹר וְהַנּוֹרָא֮ שׁוֹמֵ֣ר הַבְּרִ֣ית וְהַחֶסֶד֒ אַל־יִמְעַ֣ט לְפָנֶ֡יךָ אֵ֣ת כָּל־הַתְּלָאָ֣ה אֲֽשֶׁר־מְ֠צָאַתְנוּ לִמְלָכֵ֨ינוּ לְשָׂרֵ֧ינוּ וּלְכֹהֲנֵ֛ינוּ וְלִנְבִיאֵ֥נוּ וְלַאֲבֹתֵ֖ינוּ וּלְכָל־עַמֶּ֑ךָ מִימֵי֙ מַלְכֵ֣י אַשּׁ֔וּר עַ֖ד הַיּ֥וֹם הַזֶּֽה׃
33 ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.
וְאַתָּ֣ה צַדִּ֔יק עַ֖ל כָּל־הַבָּ֣א עָלֵ֑ינוּ כִּֽי־אֱמֶ֥ת עָשִׂ֖יתָ וַאֲנַ֥חְנוּ הִרְשָֽׁעְנוּ׃
34 ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.
וְאֶת־מְלָכֵ֤ינוּ שָׂרֵ֙ינוּ֙ כֹּהֲנֵ֣ינוּ וַאֲבֹתֵ֔ינוּ לֹ֥א עָשׂ֖וּ תּוֹרָתֶ֑ךָ וְלֹ֤א הִקְשִׁ֙יבוּ֙ אֶל־מִצְוֹתֶ֔יךָ וּלְעֵ֣דְוֹתֶ֔יךָ אֲשֶׁ֥ר הַעִידֹ֖תָ בָּהֶֽם׃
35 ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
וְהֵ֣ם בְּמַלְכוּתָם֩ וּבְטוּבְךָ֨ הָרָ֜ב אֲשֶׁר־נָתַ֣תָּ לָהֶ֗ם וּבְאֶ֨רֶץ הָרְחָבָ֧ה וְהַשְּׁמֵנָ֛ה אֲשֶׁר־נָתַ֥תָּ לִפְנֵיהֶ֖ם לֹ֣א עֲבָד֑וּךָ וְֽלֹא־שָׁ֔בוּ מִמַּֽעַלְלֵיהֶ֖ם הָרָעִֽים׃
36 “ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ.
הִנֵּ֛ה אֲנַ֥חְנוּ הַיּ֖וֹם עֲבָדִ֑ים וְהָאָ֜רֶץ אֲשֶׁר־נָתַ֣תָּה לַאֲבֹתֵ֗ינוּ לֶאֱכֹ֤ל אֶת־פִּרְיָהּ֙ וְאֶת־טוּבָ֔הּ הִנֵּ֛ה אֲנַ֥חְנוּ עֲבָדִ֖ים עָלֶֽיהָ׃
37 ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.
וּתְבוּאָתָ֣הּ מַרְבָּ֗ה לַמְּלָכִ֛ים אֲשֶׁר־נָתַ֥תָּה עָלֵ֖ינוּ בְּחַטֹּאותֵ֑ינוּ וְעַ֣ל גְּ֠וִיֹּתֵינוּ מֹשְׁלִ֤ים וּבִבְהֶמְתֵּ֙נוּ֙ כִּרְצוֹנָ֔ם וּבְצָרָ֥ה גְדוֹלָ֖ה אֲנָֽחְנוּ׃ פ
38 “ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.
וּבְכָל־זֹ֕את אֲנַ֛חְנוּ כֹּרְתִ֥ים אֲמָנָ֖ה וְכֹתְבִ֑ים וְעַל֙ הֶֽחָת֔וּם שָׂרֵ֥ינוּ לְוִיֵּ֖נוּ כֹּהֲנֵֽינוּ׃

< ನೆಹೆಮೀಯನು 9 >