Aionian Verses
ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು. (Sheol )
(parallel missing)
ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು. (Sheol )
(parallel missing)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು. (Sheol )
(parallel missing)
ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು. (Sheol )
(parallel missing)
ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು. (Sheol )
(parallel missing)
ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. (Sheol )
(parallel missing)
ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು. (Sheol )
(parallel missing)
“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ. (Sheol )
(parallel missing)
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು. (Sheol )
(parallel missing)
ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. (Sheol )
(parallel missing)
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. (Sheol )
(parallel missing)
ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. (Sheol )
(parallel missing)
ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ? (Sheol )
(parallel missing)
“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು! (Sheol )
(parallel missing)
ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ, (Sheol )
(parallel missing)
ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” (Sheol )
(parallel missing)
ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ. (Sheol )
(parallel missing)
ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. (Sheol )
(parallel missing)
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ. (Sheol )
(parallel missing)
ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು? (Sheol )
(parallel missing)
ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು. (Sheol )
(parallel missing)
ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ. (Sheol )
(parallel missing)
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು. (Sheol )
(parallel missing)
ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ. (Sheol )
(parallel missing)
ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ. (Sheol )
(parallel missing)
ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು. (Sheol )
(parallel missing)
ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು. (Sheol )
(parallel missing)
ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ. (Sheol )
(parallel missing)
ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ. (Sheol )
(parallel missing)
ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ. (Sheol )
(parallel missing)
ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು? (Sheol )
(parallel missing)
ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. (Sheol )
(parallel missing)
ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ. (Sheol )
(parallel missing)
ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” (Sheol )
(parallel missing)
ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ. (Sheol )
(parallel missing)
ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ. (Sheol )
(parallel missing)
ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ. (Sheol )
(parallel missing)
ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು. (Sheol )
(parallel missing)
ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ? (Sheol )
(parallel missing)
ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು. (Sheol )
(parallel missing)
ಅವರನ್ನು ಬೆತ್ತದಿಂದ ಹೊಡೆದು, ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ. (Sheol )
(parallel missing)
ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ. (Sheol )
(parallel missing)
ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ. (Sheol )
(parallel missing)
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ. (Sheol )
(parallel missing)
ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು. (Sheol )
(parallel missing)
ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು. (Sheol )
(parallel missing)
“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು. (Sheol )
(parallel missing)
ನಿನಗೋಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವುದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವರನ್ನು ಎಂದರೆ, ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರ ಆತ್ಮಗಳನ್ನು ಕಲಕಿ ಎಚ್ಚರಿಸಿ, ಜನಾಂಗಗಳ ಎಲ್ಲಾ ರಾಜರನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. (Sheol )
(parallel missing)
ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ. (Sheol )
(parallel missing)
ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ. (Sheol )
(parallel missing)
“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ? (Sheol )
(parallel missing)
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು. (Sheol )
(parallel missing)
“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು. (Sheol )
(parallel missing)
ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು. (Sheol )
(parallel missing)
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ. (Sheol )
(parallel missing)
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು. (Sheol )
(parallel missing)
ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು. (Sheol )
(parallel missing)
ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು. (Sheol )
(parallel missing)
ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’ (Sheol )
(parallel missing)
ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು. (Sheol )
(parallel missing)
“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ. (Sheol )
(parallel missing)
ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. (Sheol )
(parallel missing)
ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ. (Sheol )
(parallel missing)
ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ. (Sheol )
(parallel missing)
ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು. (Geenna )
(parallel missing)
ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
(parallel missing)
ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. (Geenna )
(parallel missing)
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ. (Geenna )
(parallel missing)
ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು. (Hadēs )
(parallel missing)
ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ. (aiōn )
(parallel missing)
ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn )
(parallel missing)
ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ. (aiōn )
(parallel missing)
“ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು. (aiōn )
(parallel missing)
ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ, (aiōn )
(parallel missing)
ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು. (Hadēs )
(parallel missing)
ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (aiōnios )
(parallel missing)
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (Geenna )
(parallel missing)
ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios )
(parallel missing)
ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios )
(parallel missing)
ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು. (aiōn )
(parallel missing)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. (Geenna )
(parallel missing)
“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ? (Geenna )
(parallel missing)
ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು. (aiōn )
(parallel missing)
“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios )
(parallel missing)
“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು. (aiōnios )
(parallel missing)
ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು. (aiōn )
(parallel missing)
ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು. (aiōn , aiōnios )
(parallel missing)
ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn )
(parallel missing)
ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
(parallel missing)
ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna )
(parallel missing)
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. (Geenna )
(parallel missing)
ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು. (aiōnios )
(parallel missing)
ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು. (aiōn , aiōnios )
(parallel missing)
ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು. (aiōn )
(parallel missing)
ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು. (aiōn )
Šă jăl u vladalit ăm familija lu Jakov dă erikeš, šă kraljevstva aluj nu ave kraj!” (aiōn )
ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.” (aiōn )
(parallel missing)
Luke 1:55 (Luka 1:55)
(parallel missing)
ka kum u obečalit alu preci anoštri dă kănva să fijă pljinj dă milă pălăngă Abraham šă pălăngă potomku aluj dă erikeš.” (aiōn )
ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ. (aiōn )
(parallel missing)
Luke 1:70 (Luka 1:70)
(parallel missing)
Asta nju fost spus dăm gurălje dă proroci aluj svănc dă kănva: (aiōn )
ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು. (Abyssos )
Šă jej sur arugat la Isus să nu lji đe zapovjed să mergă ăm gropă făr dă dno. (Abyssos )
ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. (Hadēs )
Šă voj ominji dăm Kafarnaum! Pănăm nor voj vic răđika? Ăm podzemlje vic fi arunkac. (Hadēs )
ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
Šjeva ka učitelju dă zakonu alu Mojsije su skulat, să ăl iskušulaskă pă Isus šă lu ăntribat: “Učitelju šje trăbă să fakă să kapăt kust dă erikeš? Kum ăl pot kăpăta?” (aiōnios )
ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ. (Geenna )
Ju vuj zăšji dă šjinji trăbă să vă fijă frikă. Fijă vă frikă dă Dimizov kari poči să amori, atunšje vă poči vărlji ăm pakao. Da anume, dă jăl vă trăbă să vă fijă frikă. (Geenna )
“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ. (aiōn )
Atunšje gospodaru u ămărit pă nu đirept upravitelj kari ăm oči aluj nu are bun upravitelj, kă u arătat dăstafelă mărđuljijă kari nuj bună. Asta arată, kă ominji dă asta svet ăs maj mudri ăm stvarurlje alor dă kit dă ominji dă lumină. (aiōn )
ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು. (aiōnios )
Šă ju vă zăk: ‘Koristilec găzdăšije šje fužji daje kă ăj nepravednă ku aje vă făšjec urtašj pă lăngă voj, aša kănd nu maj u fi găzdăšijă, atunšje voj vic fi apukac ăm nor dă erikeš. (aiōnios )
ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು. (Hadēs )
Ăm mari mukă ăm podzemlje, găzdaku su ujtat sus šă u văzut pă Abraham dă dăparći šă pă Lazar kari are lăngă Abraham. (Hadēs )
ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
Are unu vladar akulo kari u ăntribat pă Isus: “Bun Učitelju, šje trăbă să fak să kapăt kust dă erikeš?” (aiōnios )
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. (aiōn , aiōnios )
a să nu kapići dă aje maj mult ăm asta kust dă kit ave, a u kăpăta pă altu svet kari vinji kustu dă erikeš.” (aiōn , aiōnios )
ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ. (aiōn )
Isus u ăntors vorba alor: “Ăm asta svet lume să ămirită šă să ănsoră. (aiōn )
ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. (aiōn )
Ali eje kari ur fost smatralic vredni să uskrsnulaskă dăm morc njiš nu su ănsura, njiš nu să ămirită. (aiōn )
ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.” (aiōnios )
(parallel missing)
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು. (aiōnios )
(parallel missing)
ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು. (aiōnios )
(parallel missing)
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು. (aiōn , aiōnios )
(parallel missing)
ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು. (aiōnios )
(parallel missing)
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ. (aiōnios )
(parallel missing)
ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ. (aiōnios )
(parallel missing)
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು. (aiōnios )
(parallel missing)
ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು. (aiōnios )
(parallel missing)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. (aiōnios )
(parallel missing)
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು. (aiōn )
(parallel missing)
ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. (aiōnios )
(parallel missing)
ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು. (aiōn )
(parallel missing)
ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. (aiōnios )
(parallel missing)
ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ. (aiōn )
(parallel missing)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು. (aiōn )
(parallel missing)
ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ? (aiōn )
(parallel missing)
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ. (aiōn )
(parallel missing)
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn , aiōnios )
(parallel missing)
ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ, (aiōn )
(parallel missing)
ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು. (aiōnios )
(parallel missing)
ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು. (aiōn )
(parallel missing)
ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು. (aiōnios )
(parallel missing)
ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು. (aiōn )
(parallel missing)
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು. (aiōn )
(parallel missing)
ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ. (aiōnios )
(parallel missing)
ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ. (aiōnios )
(parallel missing)
ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. (Hadēs )
(parallel missing)
ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ (Hadēs )
(parallel missing)
ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು. (aiōn )
(parallel missing)
ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. (aiōnios )
(parallel missing)
ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು. (aiōnios )
(parallel missing)
ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ. (aiōn )
(parallel missing)
ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ. (aïdios )
(parallel missing)
ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್. (aiōn )
(parallel missing)
ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು. (aiōnios )
(parallel missing)
ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು. (aiōnios )
(parallel missing)
ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ. (aiōnios )
(parallel missing)
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ. (aiōnios )
(parallel missing)
ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್. (aiōn )
(parallel missing)
ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.” (Abyssos )
(parallel missing)
ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ. (eleēsē )
(parallel missing)
ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್. (aiōn )
(parallel missing)
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ. (aiōn )
(parallel missing)
ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ. (aiōnios )
(parallel missing)
ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ. (aiōnios )
(parallel missing)
ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್. (aiōn )
(parallel missing)
ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ? (aiōn )
(parallel missing)
ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ. (aiōn )
(parallel missing)
ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ. (aiōn )
(parallel missing)
ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ. (aiōn )
(parallel missing)
ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ. (aiōn )
(parallel missing)
ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ. (aiōn )
(parallel missing)
ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ. (aiōn )
(parallel missing)
“ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?” (Hadēs )
(parallel missing)
ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು. (aiōn )
(parallel missing)
ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು. (aiōnios )
(parallel missing)
ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು. (aiōnios )
(parallel missing)
ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ. (aiōnios )
(parallel missing)
ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು.” (aiōn )
(parallel missing)
ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ. (aiōn )
(parallel missing)
ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು. (aiōn )
(parallel missing)
ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್. (aiōn )
(parallel missing)
ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು. (aiōnios )
(parallel missing)
ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು. (aiōn )
(parallel missing)
ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ. (aiōn )
(parallel missing)
ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ. (aiōn )
(parallel missing)
ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ. (aiōn )
(parallel missing)
ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು. (aiōn )
(parallel missing)
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್. (aiōn )
(parallel missing)
ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ. (aiōn )
(parallel missing)
ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್. (aiōn )
(parallel missing)
ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ. (aiōn )
(parallel missing)
ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು. (aiōnios )
(parallel missing)
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ, (aiōnios )
(parallel missing)
ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು. (aiōnios )
(parallel missing)
ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್. (aiōn )
(parallel missing)
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ? (aiōnios )
(parallel missing)
ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್. (aiōnios )
(parallel missing)
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು. (aiōn )
(parallel missing)
ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು. (aiōnios )
(parallel missing)
ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. (aiōnios )
(parallel missing)
ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು. (aiōn )
(parallel missing)
ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್. (aiōn )
(parallel missing)
ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ. (aiōnios )
(parallel missing)
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ. (aiōn )
(parallel missing)
ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು. (aiōnios )
(parallel missing)
ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ! (aiōnios )
(parallel missing)
ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. (aiōn )
(parallel missing)
ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ. (aiōn )
(parallel missing)
ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ. (aiōn )
(parallel missing)
ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು. (aiōnios )
(parallel missing)
ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ. (aiōnios )
(parallel missing)
ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು (aiōn )
(parallel missing)
ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ. (aiōn )
(parallel missing)
ಕರ್ತ ಯೇಸುವಿನ ವಿಷಯದಲ್ಲಿ, “ನೀನು ಸದಾಕಾಲವೂ, ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,” ಎಂಬ ಸಾಕ್ಷಿಯಿದೆ. (aiōn )
(parallel missing)
ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’” (aiōn )
(parallel missing)
ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ. (aiōn )
(parallel missing)
ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ. (aiōn )
(parallel missing)
ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. (aiōnios )
(parallel missing)
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? (aiōnios )
(parallel missing)
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. (aiōnios )
(parallel missing)
ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. (aiōn )
(parallel missing)
ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ. (aiōn )
(parallel missing)
ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು. (aiōn )
(parallel missing)
ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು. (aiōnios )
(parallel missing)
ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn )
(parallel missing)
ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ. (Geenna )
(parallel missing)
ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ. (aiōn )
(parallel missing)
ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು. (aiōn )
(parallel missing)
ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. (aiōn )
(parallel missing)
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು. (aiōnios )
(parallel missing)
ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. (aiōn )
(parallel missing)
ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು. (aiōnios )
(parallel missing)
ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು. (Tartaroō )
(parallel missing)
ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್. (aiōn )
(parallel missing)
ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. (aiōnios )
(parallel missing)
ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು. (aiōn )
(parallel missing)
ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ. (aiōnios )
(parallel missing)
ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. (aiōnios )
(parallel missing)
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. (aiōnios )
(parallel missing)
ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ. (aiōnios )
(parallel missing)
ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ. (aiōnios )
(parallel missing)
ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ (aiōn )
(parallel missing)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ. (aïdios )
(parallel missing)
ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ. (aiōnios )
(parallel missing)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ. (aiōn )
(parallel missing)
ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios )
(parallel missing)
ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್. (aiōn )
(parallel missing)
ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್. (aiōn )
(parallel missing)
ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ. (aiōn , Hadēs )
(parallel missing)
ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ, (aiōn )
(parallel missing)
ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, (aiōn )
(parallel missing)
ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, (aiōn )
(parallel missing)
ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು. (Hadēs )
(parallel missing)
“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು. (aiōn )
(parallel missing)
ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು. (Abyssos )
(parallel missing)
ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು. (Abyssos )
(parallel missing)
ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು. (Abyssos )
(parallel missing)
ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ! (aiōn )
(parallel missing)
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು. (Abyssos )
(parallel missing)
ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.” (aiōn )
(parallel missing)
ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು. (aiōnios )
(parallel missing)
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು. (aiōn )
(parallel missing)
ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. (aiōn )
(parallel missing)
ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು. (Abyssos )
(parallel missing)
ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು. (aiōn )
(parallel missing)
ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು. (Limnē Pyr )
(parallel missing)
ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. (Abyssos )
(parallel missing)
ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು. (Abyssos )
(parallel missing)
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು. (aiōn , Limnē Pyr )
(parallel missing)
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. (Hadēs )
(parallel missing)
ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. (Hadēs , Limnē Pyr )
(parallel missing)
ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು. (Limnē Pyr )
(parallel missing)
ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು. (Limnē Pyr )
(parallel missing)
ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. (aiōn )
(parallel missing)