< ಅರಣ್ಯಕಾಂಡ 11 >

1 ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.
І став народ голосно нарікати до Господніх ушей. І почув Господь, і запалав Його гнів, — і загорівся між ними Господній огонь, та й пожер їх у кінці табо́ру.
2 ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.
І наро́д став кричати до Мойсея. А Мойсей помолився до Господа, — і погас той огонь.
3 ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
І він назвав ім'я́ того місця: Тав'ера, бо між ними горів був Господній огонь.
4 ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?
А збирани́на, що була серед нього, стала вередувати, і також Ізраїлеві сини стали плакати з ними та говорити: „Хто нагодує нас м'ясом?
5 ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.
Ми згадуємо рибу, що їли в Єгипті даремно, огірки й дині, і пір, і цибулю, і часник.
6 ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು.
А тепер душа наша в'яне, немає нічого, — тільки ма́нна нам перед очима“.
7 ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು.
А манна — як корія́ндрове насіння вона, а вигляд її, — як вигляд кришталу.
8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.
Люди розхо́дилися, і збирали її та мололи жо́рнами або товкли в ступі, і варили в горшку та й робили з неї калачі. А смак її був, як смак олійного коржа́.
9 ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುವಾಗ ಅದರೊಂದಿಗೆ ಮನ್ನವು ಬೀಳುತ್ತಿತ್ತು.
А коли роса спада́ла на та́бір, спада́ла й та манна на нього.
10 ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.
І почув Мойсей, що наро́д плаче в родинах своїх, кожен при вході наме́ту свого́. І сильно запалав гнів Господній, і в оча́х Мойсеєвих то було зле.
11 ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?
І сказав Мойсей до Господа: „На́що вчинив Ти зло своєму рабові, і чому́ я не знайшов милости в оча́х Твоїх, що Ти поклав тягара́ всього наро́ду на мене?
12 ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?
Чи я був вагітни́й усім тим наро́дом, чи я його породив, що Ти кажеш мені: Неси його на лоні своїм, як мамка носить ссунця́, до землі, яку Ти присягну́в батька́м його?
13 ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.
Звідки мені взяти м'яса, щоб дати всьому цьому наро́дові? Бо вони плачуть передо мною, говорячи: Дай же нам м'яса, і ми бу́демо їсти!
14 ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.
Не подола́ю я сам носити всього цього народа, — бо він тяжчий за мене!
15 ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.
А якщо Ти таке мені робиш, то краще забий мене, якщо я знайшов милість в очах Твоїх, щоб я не побачив нещастя свого!“
16 ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
І сказав Господь до Мойсея: „Збери ж мені сімдесятеро люда зо старши́х Ізраїлевих, яких знаєш, що вони старші́ народу та його наглядачі, і візьми їх до скинії заповіту, і стануть вони там із тобою.
17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.
І Я зійду́, і буду розмовляти там із тобою, і візьму́ від Духа, що на тобі, і покладу на них, — і вони носитимуть із тобою тягара́ того народу, і не будеш носити ти сам.
18 ಜನರಿಗೆ ನೀನು, “‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.
А до наро́ду скажи: Освятіться наза́втра, і будете їсти м'ясо, бо ви плакали до Господніх ушей, говорячи: Хто дасть нам їсти м'яса, бо добре було нам в Єгипті? І дасть Господь вам м'яса, і ви будете їсти.
19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
Не один день будете ви їсти, і не два дні, і не п'ять день, і не десять день, і не двадцять день,
20 ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.
але ці́лий місяць, аж поки не ви́йде воно з ваших ніздрів, і стане вам на огиду, бо ви зне́хтували собі Господа, що серед вас, і плакали перед лицем Його, говорячи: Чого це ми вийшли з Єгипту?“
21 ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ.
І сказав Мойсей: „Шістсот тисяч піхоти той наро́д, що я серед нього, а Ти сказав: Я дам їм м'яса, і вони будуть їсти місяць ча́су.
22 ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು.
Чи худоба дрібна та худоба велика заріжеться для них, — і ви́стачить їм? Чи також збереться для них уся морська риба, — і вистачить їм?“
23 ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.
А Господь сказав до Мойсея: „Чи Господня рука буває коротка? Тепер ти побачиш, чи спо́вниться тобі Моє слово, чи ні“.
24 ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.
І вийшов Мойсей, і промовляв до того народу Господні слова. І зібрав він сімдесятеро чоловіка зо старши́х народу, і поставив їх навколо скинії.
25 ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.
І зійшов Господь у хмарі, та й промовляв до нього, і взяв від Духа, що на ньому, і дав на сімдеся́т чоловіка старши́х. І сталося, як спочив на них Дух той, то вони стали пророкувати, та потім перестали.
26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
І зоста́лося двоє людей в табо́рі, ім'я́ одному Елдад, а ймення дру́гому Медад. І спочив на них Дух; а вони були серед записаних, та не вийшли до скинії, і пророкували в табо́рі.
27 ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು.
І побіг юнак, і промовив до Мойсея й сказав: „Елдад і Медад пророкують у табо́рі!“
28 ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.
І відповів Ісус, син Навинів, Мойсеїв слуга від своєї мо́лодости, та й сказав: „Пане мій Мойсею, — заборонни їм!“
29 ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.
І сказав йому Мойсей: „Чи ти за́здрісний за мене? О, якби то ввесь Господній наро́д став пророками, коли б дав Господь Духа Свого і на них!“
30 ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
І вернувся Мойсей до табо́ру, він та старші́ Ізра́їлеві.
31 ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
І знявся вітер від Господа, і навіяв перепелиці від моря, і опустив їх над табо́ром, — як денна дорога туди й як денна дорога сюди навко́ло табо́ру, і коло двох ліктів на поверхні землі.
32 ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
І встав наро́д, і ці́лий той день і ці́лу ту ніч, і ці́лий день назавтра збирали перепели́цю. Хто збирав мало, той зібрав десять хомерів, і порозкладали їх собі скрізь навколо табо́ру.
33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.
Те м'ясо було ще між їхніми зубами, поки було пожуване, а гнів Господній запалився на народ! І вдарив Господь дуже великою пора́зкою в народ...
34 ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.
І названо ймення того місця: Ківрот-Гаттаава, бо там поховали народ пожадли́вий.
35 ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು.
З Ківрот-Гаттаави рушили люди до Гацероту, і були в Гацероті.

< ಅರಣ್ಯಕಾಂಡ 11 >