< ಅರಣ್ಯಕಾಂಡ 12 >

1 ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು.
וַתְּדַבֵּר מִרְיָם וְאַהֲרֹן בְּמֹשֶׁה עַל־אֹדוֹת הָאִשָּׁה הַכֻּשִׁית אֲשֶׁר לָקָח כִּֽי־אִשָּׁה כֻשִׁית לָקָֽח׃
2 ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು.
וַיֹּאמְרוּ הֲרַק אַךְ־בְּמֹשֶׁה דִּבֶּר יְהוָה הֲלֹא גַּם־בָּנוּ דִבֵּר וַיִּשְׁמַע יְהוָֽה׃
3 ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.
וְהָאִישׁ מֹשֶׁה ענו עָנָיו מְאֹד מִכֹּל הָֽאָדָם אֲשֶׁר עַל־פְּנֵי הָאֲדָמָֽה׃
4 ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.
וַיֹּאמֶר יְהוָה פִּתְאֹם אֶל־מֹשֶׁה וְאֶֽל־אַהֲרֹן וְאֶל־מִרְיָם צְאוּ שְׁלָשְׁתְּכֶם אֶל־אֹהֶל מוֹעֵד וַיֵּצְאוּ שְׁלָשְׁתָּֽם׃
5 ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.
וַיֵּרֶד יְהוָה בְּעַמּוּד עָנָן וַֽיַּעֲמֹד פֶּתַח הָאֹהֶל וַיִּקְרָא אַהֲרֹן וּמִרְיָם וַיֵּצְאוּ שְׁנֵיהֶֽם׃
6 ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.
וַיֹּאמֶר שִׁמְעוּ־נָא דְבָרָי אִם־יִֽהְיֶה נְבִיאֲכֶם יְהוָה בַּמַּרְאָה אֵלָיו אֶתְוַדָּע בַּחֲלוֹם אֲדַבֶּר־בּֽוֹ׃
7 ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
לֹא־כֵן עַבְדִּי מֹשֶׁה בְּכָל־בֵּיתִי נֶאֱמָן הֽוּא׃
8 ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”
פֶּה אֶל־פֶּה אֲדַבֶּר־בּוֹ וּמַרְאֶה וְלֹא בְחִידֹת וּתְמֻנַת יְהוָה יַבִּיט וּמַדּוּעַ לֹא יְרֵאתֶם לְדַבֵּר בְּעַבְדִּי בְמֹשֶֽׁה׃
9 ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.
וַיִּֽחַרְ אַף יְהוָה בָּם וַיֵּלַֽךְ׃
10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು.
וְהֶעָנָן סָר מֵעַל הָאֹהֶל וְהִנֵּה מִרְיָם מְצֹרַעַת כַּשָּׁלֶג וַיִּפֶן אַהֲרֹן אֶל־מִרְיָם וְהִנֵּה מְצֹרָֽעַת׃
11 ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
וַיֹּאמֶר אַהֲרֹן אֶל־מֹשֶׁה בִּי אֲדֹנִי אַל־נָא תָשֵׁת עָלֵינוּ חַטָּאת אֲשֶׁר נוֹאַלְנוּ וַאֲשֶׁר חָטָֽאנוּ׃
12 ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.
אַל־נָא תְהִי כַּמֵּת אֲשֶׁר בְּצֵאתוֹ מֵרֶחֶם אִמּוֹ וַיֵּאָכֵל חֲצִי בְשָׂרֽוֹ׃
13 ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.
וַיִּצְעַק מֹשֶׁה אֶל־יְהוָה לֵאמֹר אֵל נָא רְפָא נָא לָֽהּ׃
14 ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.
וַיֹּאמֶר יְהוָה אֶל־מֹשֶׁה וְאָבִיהָ יָרֹק יָרַק בְּפָנֶיהָ הֲלֹא תִכָּלֵם שִׁבְעַת יָמִים תִּסָּגֵר שִׁבְעַת יָמִים מִחוּץ לַֽמַּחֲנֶה וְאַחַר תֵּאָסֵֽף׃
15 ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿ ಇಟ್ಟರು. ಮಿರ್ಯಾಮಳು ತಿರುಗಿ ಒಳಗೆ ಬರುವವರೆಗೆ ಜನರು ಪ್ರಯಾಣ ಮಾಡಲಿಲ್ಲ.
וַתִּסָּגֵר מִרְיָם מִחוּץ לַֽמַּחֲנֶה שִׁבְעַת יָמִים וְהָעָם לֹא נָסַע עַד־הֵאָסֵף מִרְיָֽם׃
16 ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.
וְאַחַר נָסְעוּ הָעָם מֵחֲצֵרוֹת וַֽיַּחֲנוּ בְּמִדְבַּר פָּארָֽן׃

< ಅರಣ್ಯಕಾಂಡ 12 >