< ಅರಣ್ಯಕಾಂಡ 15 >

1 ಯೆಹೋವ ದೇವರು ಮೋಶೆಗೆ,
וַיְדַבֵּר יְהוָה אֶל־מֹשֶׁה לֵּאמֹֽר׃
2 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם כִּי תָבֹאוּ אֶל־אֶרֶץ מוֹשְׁבֹתֵיכֶם אֲשֶׁר אֲנִי נֹתֵן לָכֶֽם׃
3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.
וַעֲשִׂיתֶם אִשֶּׁה לַֽיהוָה עֹלָה אוֹ־זֶבַח לְפַלֵּא־נֶדֶר אוֹ בִנְדָבָה אוֹ בְּמֹעֲדֵיכֶם לַעֲשׂוֹת רֵיחַ נִיחֹחַ לַֽיהוָה מִן־הַבָּקָר אוֹ מִן־הַצֹּֽאן׃
4 ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.
וְהִקְרִיב הַמַּקְרִיב קָרְבָּנוֹ לַֽיהוָה מִנְחָה סֹלֶת עִשָּׂרוֹן בָּלוּל בִּרְבִעִית הַהִין שָֽׁמֶן׃
5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
וְיַיִן לַנֶּסֶךְ רְבִיעִית הַהִין תַּעֲשֶׂה עַל־הָעֹלָה אוֹ לַזָּבַח לַכֶּבֶשׂ הָאֶחָֽד׃
6 “‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.
אוֹ לָאַיִל תַּעֲשֶׂה מִנְחָה סֹלֶת שְׁנֵי עֶשְׂרֹנִים בְּלוּלָה בַשֶּׁמֶן שְׁלִשִׁית הַהִֽין׃
7 ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
וְיַיִן לַנֶּסֶךְ שְׁלִשִׁית הַהִין תַּקְרִיב רֵֽיחַ־נִיחֹחַ לַיהוָֽה׃
8 “‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,
וְכִֽי־תַעֲשֶׂה בֶן־בָּקָר עֹלָה אוֹ־זָבַח לְפַלֵּא־נֶדֶר אֽוֹ־שְׁלָמִים לַֽיהוָֽה׃
9 ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.
וְהִקְרִיב עַל־בֶּן־הַבָּקָר מִנְחָה סֹלֶת שְׁלֹשָׁה עֶשְׂרֹנִים בָּלוּל בַּשֶּׁמֶן חֲצִי הַהִֽין׃
10 ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.
וְיַיִן תַּקְרִיב לַנֶּסֶךְ חֲצִי הַהִין אִשֵּׁה רֵֽיחַ־נִיחֹחַ לַיהוָֽה׃
11 ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.
כָּכָה יֵעָשֶׂה לַשּׁוֹר הָֽאֶחָד אוֹ לָאַיִל הָאֶחָד אֽוֹ־לַשֶּׂה בַכְּבָשִׂים אוֹ בָעִזִּֽים׃
12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು.
כַּמִּסְפָּר אֲשֶׁר תַּעֲשׂוּ כָּכָה תַּעֲשׂוּ לָאֶחָד כְּמִסְפָּרָֽם׃
13 “‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.
כָּל־הָאֶזְרָח יַעֲשֶׂה־כָּכָה אֶת־אֵלֶּה לְהַקְרִיב אִשֵּׁה רֵֽיחַ־נִיחֹחַ לַֽיהוָֽה׃
14 ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.
וְכִֽי־יָגוּר אִתְּכֶם גֵּר אוֹ אֲשֶֽׁר־בְּתֽוֹכְכֶם לְדֹרֹתֵיכֶם וְעָשָׂה אִשֵּׁה רֵֽיחַ־נִיחֹחַ לַיהוָה כַּאֲשֶׁר תַּעֲשׂוּ כֵּן יַעֲשֶֽׂה׃
15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
הַקָּהָל חֻקָּה אַחַת לָכֶם וְלַגֵּר הַגָּר חֻקַּת עוֹלָם לְדֹרֹתֵיכֶם כָּכֶם כַּגֵּר יִהְיֶה לִפְנֵי יְהוָֽה׃
16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’” ಎಂದರು.
תּוֹרָה אַחַת וּמִשְׁפָּט אֶחָד יִהְיֶה לָכֶם וְלַגֵּר הַגָּר אִתְּכֶֽם׃
17 ಯೆಹೋವ ದೇವರು ಮೋಶೆಗೆ,
וַיְדַבֵּר יְהוָה אֶל־מֹשֶׁה לֵּאמֹֽר׃
18 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ: ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם בְּבֹֽאֲכֶם אֶל־הָאָרֶץ אֲשֶׁר אֲנִי מֵבִיא אֶתְכֶם שָֽׁמָּה׃
19 ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.
וְהָיָה בַּאֲכָלְכֶם מִלֶּחֶם הָאָרֶץ תָּרִימוּ תְרוּמָה לַיהוָֽה׃
20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.
רֵאשִׁית עֲרִסֹתֵכֶם חַלָּה תָּרִימוּ תְרוּמָה כִּתְרוּמַת גֹּרֶן כֵּן תָּרִימוּ אֹתָֽהּ׃
21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.
מֵרֵאשִׁית עֲרִסֹתֵיכֶם תִּתְּנוּ לַיהוָה תְּרוּמָה לְדֹרֹתֵיכֶֽם׃
22 “‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,
וְכִי תִשְׁגּוּ וְלֹא תַעֲשׂוּ אֵת כָּל־הַמִּצְוֺת הָאֵלֶּה אֲשֶׁר־דִּבֶּר יְהוָה אֶל־מֹשֶֽׁה׃
23 ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,
אֵת כָּל־אֲשֶׁר צִוָּה יְהוָה אֲלֵיכֶם בְּיַד־מֹשֶׁה מִן־הַיּוֹם אֲשֶׁר צִוָּה יְהוָה וָהָלְאָה לְדֹרֹתֵיכֶֽם׃
24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
וְהָיָה אִם מֵעֵינֵי הָעֵדָה נֶעֶשְׂתָה לִשְׁגָגָה וְעָשׂוּ כָל־הָעֵדָה פַּר בֶּן־בָּקָר אֶחָד לְעֹלָה לְרֵיחַ נִיחֹחַ לַֽיהוָה וּמִנְחָתוֹ וְנִסְכּוֹ כַּמִּשְׁפָּט וּשְׂעִיר־עִזִּים אֶחָד לְחַטָּֽת׃
25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.
וְכִפֶּר הַכֹּהֵן עַֽל־כָּל־עֲדַת בְּנֵי יִשְׂרָאֵל וְנִסְלַח לָהֶם כִּֽי־שְׁגָגָה הִוא וְהֵם הֵבִיאוּ אֶת־קָרְבָּנָם אִשֶּׁה לַֽיהוָה וְחַטָּאתָם לִפְנֵי יְהוָה עַל־שִׁגְגָתָֽם׃
26 ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
וְנִסְלַח לְכָל־עֲדַת בְּנֵי יִשְׂרָאֵל וְלַגֵּר הַגָּר בְּתוֹכָם כִּי לְכָל־הָעָם בִּשְׁגָגָֽה׃
27 “‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.
וְאִם־נֶפֶשׁ אַחַת תֶּחֱטָא בִשְׁגָגָה וְהִקְרִיבָה עֵז בַּת־שְׁנָתָהּ לְחַטָּֽאת׃
28 ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
וְכִפֶּר הַכֹּהֵן עַל־הַנֶּפֶשׁ הַשֹּׁגֶגֶת בְּחֶטְאָה בִשְׁגָגָה לִפְנֵי יְהוָה לְכַפֵּר עָלָיו וְנִסְלַח לֽוֹ׃
29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.
הָֽאֶזְרָח בִּבְנֵי יִשְׂרָאֵל וְלַגֵּר הַגָּר בְּתוֹכָם תּוֹרָה אַחַת יִהְיֶה לָכֶם לָעֹשֶׂה בִּשְׁגָגָֽה׃
30 “‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.
וְהַנֶּפֶשׁ אֲשֶֽׁר־תַּעֲשֶׂה ׀ בְּיָד רָמָה מִן־הָֽאֶזְרָח וּמִן־הַגֵּר אֶת־יְהוָה הוּא מְגַדֵּף וְנִכְרְתָה הַנֶּפֶשׁ הַהִוא מִקֶּרֶב עַמָּֽהּ׃
31 ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’” ಎಂದರು.
כִּי דְבַר־יְהוָה בָּזָה וְאֶת־מִצְוָתוֹ הֵפַר הִכָּרֵת ׀ תִּכָּרֵת הַנֶּפֶשׁ הַהִוא עֲוֺנָה בָֽהּ׃
32 ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.
וַיִּהְיוּ בְנֵֽי־יִשְׂרָאֵל בַּמִּדְבָּר וַֽיִּמְצְאוּ אִישׁ מְקֹשֵׁשׁ עֵצִים בְּיוֹם הַשַּׁבָּֽת׃
33 ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,
וַיַּקְרִיבוּ אֹתוֹ הַמֹּצְאִים אֹתוֹ מְקֹשֵׁשׁ עֵצִים אֶל־מֹשֶׁה וְאֶֽל־אַהֲרֹן וְאֶל כָּל־הָעֵדָֽה׃
34 ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು.
וַיַּנִּיחוּ אֹתוֹ בַּמִּשְׁמָר כִּי לֹא פֹרַשׁ מַה־יֵּעָשֶׂה לֽוֹ׃
35 ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.
וַיֹּאמֶר יְהוָה אֶל־מֹשֶׁה מוֹת יוּמַת הָאִישׁ רָגוֹם אֹתוֹ בָֽאֲבָנִים כָּל־הָעֵדָה מִחוּץ לַֽמַּחֲנֶֽה׃
36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.
וַיֹּצִיאוּ אֹתוֹ כָּל־הָעֵדָה אֶל־מִחוּץ לַֽמַּחֲנֶה וַיִּרְגְּמוּ אֹתוֹ בָּאֲבָנִים וַיָּמֹת כַּאֲשֶׁר צִוָּה יְהוָה אֶת־מֹשֶֽׁה׃
37 ಯೆಹೋವ ದೇವರು ಮೋಶೆಗೆ,
וַיֹּאמֶר יְהוָה אֶל־מֹשֶׁה לֵּאמֹֽר׃
38 “ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು.
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם וְעָשׂוּ לָהֶם צִיצִת עַל־כַּנְפֵי בִגְדֵיהֶם לְדֹרֹתָם וְנָֽתְנוּ עַל־צִיצִת הַכָּנָף פְּתִיל תְּכֵֽלֶת׃
39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.
וְהָיָה לָכֶם לְצִיצִת וּרְאִיתֶם אֹתוֹ וּזְכַרְתֶּם אֶת־כָּל־מִצְוֺת יְהוָה וַעֲשִׂיתֶם אֹתָם וְלֹֽא־תָתֻרוּ אַחֲרֵי לְבַבְכֶם וְאַחֲרֵי עֵֽינֵיכֶם אֲשֶׁר־אַתֶּם זֹנִים אַחֲרֵיהֶֽם׃
40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.
לְמַעַן תִּזְכְּרוּ וַעֲשִׂיתֶם אֶת־כָּל־מִצְוֺתָי וִהְיִיתֶם קְדֹשִׁים לֵֽאלֹהֵיכֶֽם׃
41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”
אֲנִי יְהוָה אֱלֹֽהֵיכֶם אֲשֶׁר הוֹצֵאתִי אֶתְכֶם מֵאֶרֶץ מִצְרַיִם לִהְיוֹת לָכֶם לֵאלֹהִים אֲנִי יְהוָה אֱלֹהֵיכֶֽם׃

< ಅರಣ್ಯಕಾಂಡ 15 >