< ಅರಣ್ಯಕಾಂಡ 18 >
1 ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.
И рече Господь ко Аарону, глаголя: ты и сынове твои, и дом отца твоего с тобою, возмите грехи святых, ты же и сынове твои возмите грехи жречества вашего:
2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.
и братию твою, племя Левиино, сонм отца твоего приведи к себе, и да приложатся к тебе, и да служат тебе, и ты и сынове твои с тобою пред скиниею свидения,
3 ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.
и да блюдут стражбы твоя и стражбы скинии: токмо к сосудом святым и ко олтарю да не приступают, да не измрут и сии, и вы:
4 ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.
и приложатся к тебе и да блюдут стражбы скинии свидения по всем службам скинии, и иноплеменник да не приступит к тебе,
5 “ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.
и соблюдете стражбы святых и стражбы олтаря, и не будет ктому гнева на сынех Израилевых:
6 ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.
и Аз взях братию вашу левиты от среды сынов Израилевых в дар данный Господу служити службы скинии свидения.
7 ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.
И ты и сынове твои с тобою сохраните жречество ваше по всему образу олтаря, и еже внутрь завесы, и да служите службы в дар жречества вашего: и иноплеменник приступаяй умрет.
8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.
И рече Господь ко Аарону: и се, Аз дах вам снабдение начатков моих от всех освященных Мне от сынов Израилевых: тебе дах я в честь, и сыном твоим по тебе законно вечно:
9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.
и сие да будет вам от освященных святых приношений, от всех даров их и от всех жертв их, и от всякаго преступления их и от всех грех их, елика отдают Мне, от всех святынь, тебе да будут и сыном твоим.
10 ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು.
Во святем святых ядите я: всяк мужеский пол да яст я, ты и сынове твои: свята будут тебе.
11 “ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.
И сие да будет вам от начатков даяний их, от всех возложений сынов Израилевых: тебе дах я, и сыном твоим и дщерем твоим с тобою, законно вечно: всяк чистый в дому твоем да яст я.
12 “ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.
Всяк начаток елеа, и всяк начаток вина и пшеницы, начаток их, елика аще отдадят Господу, тебе дах я: первородная вся елика в земли их, елика аще принесут Господу, тебе да будут:
13 ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.
всяк чистый в дому твоем да яст я.
14 “ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.
Всяко освященное в сынех Израилевых тебе да будет,
15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
и всякое разверзающее всяка ложесна от всякия плоти, елика приносят Господу, от человека до скота, тебе да будут: но токмо искуплением искупятся первенцы человечестии, и первенцы скотов нечистых да искупятся:
16 ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.
и искуп его от единаго месяца, сценение пять сикль, по сиклю святому: двадесять медниц есть:
17 “ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.
обаче первородная телцев и первородная овец и первородная коз да не искупятся: свята суть: и кровь их пролиеши у олтаря, и тук принесеши принос в воню благовония Господу.
18 ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.
И мяса тебе да будут, якоже и груди возложения: и по раму десному тебе да будут.
19 ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.
Всяко участие святых, елика аще отлучат сынове Израилтестии Господу, тебе дах и сыном твоим и дщерем твоим с тобою, законно вечно: завет соли вечныя есть пред Господем, тебе и семени твоему по тебе.
20 ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.
И рече Господь ко Аарону: в земли их да не наследиши наследия, и части да не будет тебе в них: яко Аз часть твоя и наследие твое посреде сынов Израилевых.
21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.
И сыном Левииным, се, дах всю десятину во Израили в жребий за службы их, елико служат тии служение в скинии свидения:
22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.
и да не приступают по сем сынове Израилтестии к скинии свидения прияти грех смертоносный:
23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.
и да служат левити сами службу скинии свидения, и тии возмут грехи их: законно вечно в роды их: и посреде сынов Израилевых да не наследят наследия:
24 ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’” ಎಂದರು.
яко десятины сынов Израилевых, елики аще отлучат Господу, участие дах левитом в жребий: сего ради рекох им: среди сынов Израилевых да не наследят жребия.
25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
И рече Господь к Моисею, глаголя:
26 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.
и левитом да глаголеши и речеши к ним: аще возмете десятину от сынов Израилевых, юже дах вам от них во жребий, и отделите вы от нея участие Господу, десятину от десятины ея,
27 ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.
и вменятся вам участия ваша яко пшеница от гумна и яко участие от точила:
28 ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.
тако отделите их и вы от всех участий Господних, от всех десятин ваших, елики аще возмете от сынов Израилевых, и дадите от них участие Господу, Аарону жерцу:
29 ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’
от всех даяний ваших отделите участие Господу, или от всех начатков освященное от него,
30 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.
и речеши к ним: егда отделите начаток от него, и вменится левитом аки жито от гумна и яко участие от точила:
31 ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.
и ядите то во всяком месте вы и сынове ваши и домове ваши, яко мзда сия вам есть за службы вашя, яже в скинии свидения:
32 ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’” ಎಂದರು.
и не приимете за сие греха, яко аще отлучите начаток от него: и святынь сынов Израилевых не оскверните, да не умрете.