< ಅರಣ್ಯಕಾಂಡ 21 >

1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.
וַיִּשְׁמַ֞ע הַכְּנַעֲנִ֤י מֶֽלֶךְ־עֲרָד֙ יֹשֵׁ֣ב הַנֶּ֔גֶב כִּ֚י בָּ֣א יִשְׂרָאֵ֔ל דֶּ֖רֶךְ הָאֲתָרִ֑ים וַיִּלָּ֙חֶם֙ בְּיִשְׂרָאֵ֔ל וַיִּ֥שְׁבְּ ׀ מִמֶּ֖נּוּ שֶֽׁבִי׃
2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.
וַיִּדַּ֨ר יִשְׂרָאֵ֥ל נֶ֛דֶר לַֽיהוָ֖ה וַיֹּאמַ֑ר אִם־נָתֹ֨ן תִּתֵּ֜ן אֶת־הָעָ֤ם הַזֶּה֙ בְּיָדִ֔י וְהֽ͏ַחֲרַמְתִּ֖י אֶת־עָרֵיהֶֽם׃
3 ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
וַיִּשְׁמַ֨ע יְהוָ֜ה בְּקֹ֣ול יִשְׂרָאֵ֗ל וַיִּתֵּן֙ אֶת־הַֽכְּנַעֲנִ֔י וַיַּחֲרֵ֥ם אֶתְהֶ֖ם וְאֶת־עָרֵיהֶ֑ם וַיִּקְרָ֥א שֵׁם־הַמָּקֹ֖ום חָרְמָֽה׃ פ
4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.
וַיִּסְע֞וּ מֵהֹ֤ר הָהָר֙ דֶּ֣רֶךְ יַם־ס֔וּף לִסְבֹ֖ב אֶת־אֶ֣רֶץ אֱדֹ֑ום וַתִּקְצַ֥ר נֶֽפֶשׁ־הָעָ֖ם בַּדָּֽרֶךְ׃
5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
וַיְדַבֵּ֣ר הָעָ֗ם בֵּֽאלֹהִים֮ וּבְמֹשֶׁה֒ לָמָ֤ה הֶֽעֱלִיתֻ֙נוּ֙ מִמִּצְרַ֔יִם לָמ֨וּת בַּמִּדְבָּ֑ר כִּ֣י אֵ֥ין לֶ֙חֶם֙ וְאֵ֣ין מַ֔יִם וְנַפְשֵׁ֣נוּ קָ֔צָה בַּלֶּ֖חֶם הַקְּלֹקֵֽל׃
6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
וַיְשַׁלַּ֨ח יְהוָ֜ה בָּעָ֗ם אֵ֚ת הַנְּחָשִׁ֣ים הַשְּׂרָפִ֔ים וַֽיְנַשְּׁכ֖וּ אֶת־הָעָ֑ם וַיָּ֥מָת עַם־רָ֖ב מִיִּשְׂרָאֵֽל׃
7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
וַיָּבֹא֩ הָעָ֨ם אֶל־מֹשֶׁ֜ה וַיֹּאמְר֣וּ חָטָ֗אנוּ כִּֽי־דִבַּ֤רְנוּ בַֽיהוָה֙ וָבָ֔ךְ הִתְפַּלֵּל֙ אֶל־יְהוָ֔ה וְיָסֵ֥ר מֵעָלֵ֖ינוּ אֶת־הַנָּחָ֑שׁ וַיִּתְפַּלֵּ֥ל מֹשֶׁ֖ה בְּעַ֥ד הָעָֽם׃
8 ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
וַיֹּ֨אמֶר יְהוָ֜ה אֶל־מֹשֶׁ֗ה עֲשֵׂ֤ה לְךָ֙ שָׂרָ֔ף וְשִׂ֥ים אֹתֹ֖ו עַל־נֵ֑ס וְהָיָה֙ כָּל־הַנָּשׁ֔וּךְ וְרָאָ֥ה אֹתֹ֖ו וָחָֽי׃
9 ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
וַיַּ֤עַשׂ מֹשֶׁה֙ נְחַ֣שׁ נְחֹ֔שֶׁת וַיְשִׂמֵ֖הוּ עַל־הַנֵּ֑ס וְהָיָ֗ה אִם־נָשַׁ֤ךְ הַנָּחָשׁ֙ אֶת־אִ֔ישׁ וְהִבִּ֛יט אֶל־נְחַ֥שׁ הַנְּחֹ֖שֶׁת וָחָֽי׃
10 ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.
וַיִּסְע֖וּ בְּנֵ֣י יִשְׂרָאֵ֑ל וַֽיַּחֲנ֖וּ בְּאֹבֹֽת׃
11 ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
וַיִּסְע֖וּ מֵאֹבֹ֑ת וַֽיַּחֲנ֞וּ בְּעִיֵּ֣י הָֽעֲבָרִ֗ים בַּמִּדְבָּר֙ אֲשֶׁר֙ עַל־פְּנֵ֣י מֹואָ֔ב מִמִּזְרַ֖ח הַשָּֽׁמֶשׁ׃
12 ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.
מִשָּׁ֖ם נָסָ֑עוּ וַֽיַּחֲנ֖וּ בְּנַ֥חַל זָֽרֶד׃
13 ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.
מִשָּׁם֮ נָסָעוּ֒ וַֽיַּחֲנ֗וּ מֵעֵ֤בֶר אַרְנֹון֙ אֲשֶׁ֣ר בַּמִּדְבָּ֔ר הַיֹּצֵ֖א מִגְּב֣וּל הָֽאֱמֹרִ֑י כִּ֤י אַרְנֹון֙ גְּב֣וּל מֹואָ֔ב בֵּ֥ין מֹואָ֖ב וּבֵ֥ין הָאֱמֹרִֽי׃
14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್
עַל־כֵּן֙ יֵֽאָמַ֔ר בְּסֵ֖פֶר מִלְחֲמֹ֣ת יְהוָ֑ה אֶת־וָהֵ֣ב בְּסוּפָ֔ה וְאֶת־הַנְּחָלִ֖ים אַרְנֹֽון׃
15 ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”
וְאֶ֙שֶׁד֙ הַנְּחָלִ֔ים אֲשֶׁ֥ר נָטָ֖ה לְשֶׁ֣בֶת עָ֑ר וְנִשְׁעַ֖ן לִגְב֥וּל מֹואָֽב׃
16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.
וּמִשָּׁ֖ם בְּאֵ֑רָה הִ֣וא הַבְּאֵ֗ר אֲשֶׁ֨ר אָמַ֤ר יְהוָה֙ לְמֹשֶׁ֔ה אֱסֹף֙ אֶת־הָעָ֔ם וְאֶתְּנָ֥ה לָהֶ֖ם מָֽיִם׃ ס
17 ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.
אָ֚ז יָשִׁ֣יר יִשְׂרָאֵ֔ל אֶת־הַשִּׁירָ֖ה הַזֹּ֑את עֲלִ֥י בְאֵ֖ר עֱנוּ־לָֽהּ׃
18 ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.
בְּאֵ֞ר חֲפָר֣וּהָ שָׂרִ֗ים כָּר֙וּהָ֙ נְדִיבֵ֣י הָעָ֔ם בִּמְחֹקֵ֖ק בְּמִשְׁעֲנֹתָ֑ם וּמִמִּדְבָּ֖ר מַתָּנָֽה׃
19 ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.
וּמִמַּתָּנָ֖ה נַחֲלִיאֵ֑ל וּמִנַּחֲלִיאֵ֖ל בָּמֹֽות׃
20 ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.
וּמִבָּמֹ֗ות הַגַּיְא֙ אֲשֶׁר֙ בִּשְׂדֵ֣ה מֹואָ֔ב רֹ֖אשׁ הַפִּסְגָּ֑ה וְנִשְׁקָ֖פָה עַל־פְּנֵ֥י הַיְשִׁימֹֽן׃ פ
21 ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
וַיִּשְׁלַ֤ח יִשְׂרָאֵל֙ מַלְאָכִ֔ים אֶל־סִיחֹ֥ן מֶֽלֶךְ־הָאֱמֹרִ֖י לֵאמֹֽר׃
22 “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.
אֶעְבְּרָ֣ה בְאַרְצֶ֗ךָ לֹ֤א נִטֶּה֙ בְּשָׂדֶ֣ה וּבְכֶ֔רֶם לֹ֥א נִשְׁתֶּ֖ה מֵ֣י בְאֵ֑ר בְּדֶ֤רֶךְ הַמֶּ֙לֶךְ֙ נֵלֵ֔ךְ עַ֥ד אֲשֶֽׁר־נַעֲבֹ֖ר גְּבֻלֶֽךָ׃
23 ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.
וְלֹא־נָתַ֨ן סִיחֹ֣ן אֶת־יִשְׂרָאֵל֮ עֲבֹ֣ר בִּגְבֻלֹו֒ וַיֶּאֱסֹ֨ף סִיחֹ֜ן אֶת־כָּל־עַמֹּ֗ו וַיֵּצֵ֞א לִקְרַ֤את יִשְׂרָאֵל֙ הַמִּדְבָּ֔רָה וַיָּבֹ֖א יָ֑הְצָה וַיִּלָּ֖חֶם בְּיִשְׂרָאֵֽל׃
24 ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.
וַיַּכֵּ֥הוּ יִשְׂרָאֵ֖ל לְפִי־חָ֑רֶב וַיִּירַ֨שׁ אֶת־אַרְצֹ֜ו מֵֽאַרְנֹ֗ן עַד־יַבֹּק֙ עַד־בְּנֵ֣י עַמֹּ֔ון כִּ֣י עַ֔ז גְּב֖וּל בְּנֵ֥י עַמֹּֽון׃
25 ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
וַיִּקַּח֙ יִשְׂרָאֵ֔ל אֵ֥ת כָּל־הֶעָרִ֖ים הָאֵ֑לֶּה וַיֵּ֤שֶׁב יִשְׂרָאֵל֙ בְּכָל־עָרֵ֣י הָֽאֱמֹרִ֔י בְּחֶשְׁבֹּ֖ון וּבְכָל־בְּנֹתֶֽיהָ׃
26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.
כִּ֣י חֶשְׁבֹּ֔ון עִ֗יר סִיחֹ֛ן מֶ֥לֶךְ הָאֱמֹרִ֖י הִ֑וא וְה֣וּא נִלְחַ֗ם בְּמֶ֤לֶךְ מֹואָב֙ הָֽרִאשֹׁ֔ון וַיִּקַּ֧ח אֶת־כָּל־אַרְצֹ֛ו מִיָּדֹ֖ו עַד־אַרְנֹֽן׃
27 ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.
עַל־כֵּ֛ן יֹאמְר֥וּ הַמֹּשְׁלִ֖ים בֹּ֣אוּ חֶשְׁבֹּ֑ון תִּבָּנֶ֥ה וְתִכֹּונֵ֖ן עִ֥יר סִיחֹֽון׃
28 “ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
כִּי־אֵשׁ֙ יָֽצְאָ֣ה מֵֽחֶשְׁבֹּ֔ון לֶהָבָ֖ה מִקִּרְיַ֣ת סִיחֹ֑ן אָֽכְלָה֙ עָ֣ר מֹואָ֔ב בַּעֲלֵ֖י בָּמֹ֥ות אַרְנֹֽן׃
29 ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.
אֹוי־לְךָ֣ מֹואָ֔ב אָבַ֖דְתָּ עַם־כְּמֹ֑ושׁ נָתַ֨ן בָּנָ֤יו פְּלֵיטִם֙ וּבְנֹתָ֣יו בַּשְּׁבִ֔ית לְמֶ֥לֶךְ אֱמֹרִ֖י סִיחֹֽון׃
30 “ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”
וַנִּירָ֛ם אָבַ֥ד חֶשְׁבֹּ֖ון עַד־דִּיבֹ֑ון וַנַּשִּׁ֣ים עַד־נֹ֔פַח אֲשֶׁ֖רׄ עַד־מֵֽידְבָֽא׃
31 ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.
וַיֵּ֙שֶׁב֙ יִשְׂרָאֵ֔ל בְּאֶ֖רֶץ הָאֱמֹרִֽי׃
32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.
וַיִּשְׁלַ֤ח מֹשֶׁה֙ לְרַגֵּ֣ל אֶת־יַעְזֵ֔ר וַֽיִּלְכְּד֖וּ בְּנֹתֶ֑יהָ וַיִּירֶשׁ (וַיֹּ֖ורֶשׁ) אֶת־הָאֱמֹרִ֥י אֲשֶׁר־שָֽׁם׃
33 ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
וַיִּפְנוּ֙ וַֽיַּעֲל֔וּ דֶּ֖רֶךְ הַבָּשָׁ֑ן וַיֵּצֵ֣א עֹוג֩ מֶֽלֶךְ־הַבָּשָׁ֨ן לִקְרָאתָ֜ם ה֧וּא וְכָל־עַמֹּ֛ו לַמִּלְחָמָ֖ה אֶדְרֶֽעִי׃
34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
וַיֹּ֨אמֶר יְהוָ֤ה אֶל־מֹשֶׁה֙ אַל־תִּירָ֣א אֹתֹ֔ו כִּ֣י בְיָדְךָ֞ נָתַ֧תִּי אֹתֹ֛ו וְאֶת־כָּל־עַמֹּ֖ו וְאֶת־אַרְצֹ֑ו וְעָשִׂ֣יתָ לֹּ֔ו כַּאֲשֶׁ֣ר עָשִׂ֗יתָ לְסִיחֹן֙ מֶ֣לֶךְ הָֽאֱמֹרִ֔י אֲשֶׁ֥ר יֹושֵׁ֖ב בְּחֶשְׁבֹּֽון׃
35 ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.
וַיַּכּ֨וּ אֹתֹ֤ו וְאֶת־בָּנָיו֙ וְאֶת־כָּל־עַמֹּ֔ו עַד־בִּלְתִּ֥י הִשְׁאִֽיר־לֹ֖ו שָׂרִ֑יד וַיִּֽירְשׁ֖וּ אֶת־אַרְצֹֽו׃

< ಅರಣ್ಯಕಾಂಡ 21 >