< ಅರಣ್ಯಕಾಂಡ 22 >

1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.
तब इस्राएलियों ने कूच करके यरीहो के पास यरदन नदी के इस पार मोआब के अराबा में डेरे खड़े किए।
2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.
और सिप्पोर के पुत्र बालाक ने देखा कि इस्राएल ने एमोरियों से क्या-क्या किया है।
3 ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.
इसलिए मोआब यह जानकर, कि इस्राएली बहुत हैं, उन लोगों से अत्यन्त डर गया; यहाँ तक कि मोआब इस्राएलियों के कारण अत्यन्त व्याकुल हुआ।
4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.
तब मोआबियों ने मिद्यानी पुरनियों से कहा, “अब वह दल हमारे चारों ओर के सब लोगों को चट कर जाएगा, जिस तरह बैल खेत की हरी घास को चट कर जाता है।” उस समय सिप्पोर का पुत्र बालाक मोआब का राजा था;
5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.
और इसने पतोर नगर को, जो फरात के तट पर बोर के पुत्र बिलाम के जातिभाइयों की भूमि थी, वहाँ बिलाम के पास दूत भेजे कि वे यह कहकर उसे बुला लाएँ, “सुन एक दल मिस्र से निकल आया है, और भूमि उनसे ढक गई है, और अब वे मेरे सामने ही आकर बस गए हैं।
6 ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.
इसलिए आ, और उन लोगों को मेरे निमित्त श्राप दे, क्योंकि वे मुझसे अधिक बलवन्त हैं, तब सम्भव है कि हम उन पर जयवन्त हों, और हम सब इनको अपने देश से मारकर निकाल दें; क्योंकि यह तो मैं जानता हूँ कि जिसको तू आशीर्वाद देता है वह धन्य होता है, और जिसको तू श्राप देता है वह श्रापित होता है।”
7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
तब मोआबी और मिद्यानी पुरनिये भावी कहने की दक्षिणा लेकर चले, और बिलाम के पास पहुँचकर बालाक की बातें कह सुनाईं।
8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.
उसने उनसे कहा, “आज रात को यहाँ टिको, और जो बात यहोवा मुझसे कहेगा, उसी के अनुसार मैं तुम को उत्तर दूँगा।” तब मोआब के हाकिम बिलाम के यहाँ ठहर गए।
9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.
तब परमेश्वर ने बिलाम के पास आकर पूछा, “तेरे यहाँ ये पुरुष कौन हैं?”
10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:
१०बिलाम ने परमेश्वर से कहा, “सिप्पोर के पुत्र मोआब के राजा बालाक ने मेरे पास यह कहला भेजा है,
11 ‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.
११‘सुन, जो दल मिस्र से निकल आया है उससे भूमि ढँप गई है; इसलिए आकर मेरे लिये उन्हें श्राप दे; सम्भव है कि मैं उनसे लड़कर उनको बरबस निकाल सकूँगा।’”
12 ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.
१२परमेश्वर ने बिलाम से कहा, “तू इनके संग मत जा; उन लोगों को श्राप मत दे, क्योंकि वे आशीष के भागी हो चुके हैं।”
13 ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.
१३भोर को बिलाम ने उठकर बालाक के हाकिमों से कहा, “तुम अपने देश को चले जाओ; क्योंकि यहोवा मुझे तुम्हारे साथ जाने की आज्ञा नहीं देता।”
14 ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.
१४तब मोआबी हाकिम चले गए और बालाक के पास जाकर कहा, “बिलाम ने हमारे साथ आने से मना किया है।”
15 ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.
१५इस पर बालाक ने फिर और हाकिम भेजे, जो पहले से प्रतिष्ठित और गिनती में भी अधिक थे।
16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.
१६उन्होंने बिलाम के पास आकर कहा, “सिप्पोर का पुत्र बालाक यह कहता है, ‘मेरे पास आने से किसी कारण मना मत कर;
17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.
१७क्योंकि मैं निश्चय तेरी बड़ी प्रतिष्ठा करूँगा, और जो कुछ तू मुझसे कहे वही मैं करूँगा; इसलिए आ, और उन लोगों को मेरे निमित्त श्राप दे।’”
18 ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
१८बिलाम ने बालाक के कर्मचारियों को उत्तर दिया, “चाहे बालाक अपने घर को सोने चाँदी से भरकर मुझे दे दे, तो भी मैं अपने परमेश्वर यहोवा की आज्ञा को पलट नहीं सकता, कि उसे घटाकर व बढ़ाकर मानूँ।
19 ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.
१९इसलिए अब तुम लोग आज रात को यहीं टिके रहो, ताकि मैं जान लूँ, कि यहोवा मुझसे और क्या कहता है।”
20 ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.
२०और परमेश्वर ने रात को बिलाम के पास आकर कहा, “यदि वे पुरुष तुझे बुलाने आए हैं, तो तू उठकर उनके संग जा; परन्तु जो बात मैं तुझ से कहूँ उसी के अनुसार करना।”
21 ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.
२१तब बिलाम भोर को उठा, और अपनी गदही पर काठी बाँधकर मोआबी हाकिमों के संग चल पड़ा।
22 ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
२२और उसके जाने के कारण परमेश्वर का कोप भड़क उठा, और यहोवा का दूत उसका विरोध करने के लिये मार्ग रोककर खड़ा हो गया। वह तो अपनी गदही पर सवार होकर जा रहा था, और उसके संग उसके दो सेवक भी थे।
23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.
२३और उस गदही को यहोवा का दूत हाथ में नंगी तलवार लिये हुए मार्ग में खड़ा दिखाई पड़ा; तब गदही मार्ग छोड़कर खेत में चली गई; तब बिलाम ने गदही को मारा कि वह मार्ग पर फिर आ जाए।
24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.
२४तब यहोवा का दूत दाख की बारियों के बीच की गली में, जिसके दोनों ओर बारी की दीवार थी, खड़ा हुआ।
25 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.
२५यहोवा के दूत को देखकर गदही दीवार से ऐसी सट गई कि बिलाम का पाँव दीवार से दब गया; तब उसने उसको फिर मारा।
26 ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
२६तब यहोवा का दूत आगे बढ़कर एक सकरे स्थान पर खड़ा हुआ, जहाँ न तो दाहिनी ओर हटने की जगह थी और न बाईं ओर।
27 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.
२७वहाँ यहोवा के दूत को देखकर गदही बिलाम को लिये हुए बैठ गई; फिर तो बिलाम का कोप भड़क उठा, और उसने गदही को लाठी से मारा।
28 ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.
२८तब यहोवा ने गदही का मुँह खोल दिया, और वह बिलाम से कहने लगी, “मैंने तेरा क्या किया है कि तूने मुझे तीन बार मारा?”
29 ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.
२९बिलाम ने गदही से कहा, “यह कि तूने मुझसे नटखटी की। यदि मेरे हाथ में तलवार होती तो मैं तुझे अभी मार डालता।”
30 ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.
३०गदही ने बिलाम से कहा, “क्या मैं तेरी वही गदही नहीं, जिस पर तू जन्म से आज तक चढ़ता आया है? क्या मैं तुझ से कभी ऐसा करती थी?” वह बोला, “नहीं।”
31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.
३१तब यहोवा ने बिलाम की आँखें खोलीं, और उसको यहोवा का दूत हाथ में नंगी तलवार लिये हुए मार्ग में खड़ा दिखाई पड़ा; तब वह झुक गया, और मुँह के बल गिरकर दण्डवत् किया।
32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.
३२यहोवा के दूत ने उससे कहा, “तूने अपनी गदही को तीन बार क्यों मारा? सुन, तेरा विरोध करने को मैं ही आया हूँ, इसलिए कि तू मेरे सामने दुष्ट चाल चलता है;
33 ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.
३३और यह गदही मुझे देखकर मेरे सामने से तीन बार हट गई। यदि वह मेरे सामने से हट न जाती, तो निःसन्देह मैं अब तक तुझको मार ही डालता, परन्तु उसको जीवित छोड़ देता।”
34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.
३४तब बिलाम ने यहोवा के दूत से कहा, “मैंने पाप किया है; मैं नहीं जानता था कि तू मेरा सामना करने को मार्ग में खड़ा है। इसलिए अब यदि तुझे बुरा लगता है, तो मैं लौट जाता हूँ।”
35 ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
३५यहोवा के दूत ने बिलाम से कहा, “इन पुरुषों के संग तू चला जा; परन्तु केवल वही बात कहना जो मैं तुझ से कहूँगा।” तब बिलाम बालाक के हाकिमों के संग चला गया।
36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.
३६यह सुनकर कि बिलाम आ रहा है, बालाक उससे भेंट करने के लिये मोआब के उस नगर तक जो उस देश के अर्नोनवाले सीमा पर है गया।
37 ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.
३७बालाक ने बिलाम से कहा, “क्या मैंने बड़ी आशा से तुझे नहीं बुलवा भेजा था? फिर तू मेरे पास क्यों नहीं चला आया? क्या मैं इस योग्य नहीं कि सचमुच तेरी उचित प्रतिष्ठा कर सकता?”
38 ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.
३८बिलाम ने बालाक से कहा, “देख, मैं तेरे पास आया तो हूँ! परन्तु अब क्या मैं कुछ कर सकता हूँ? जो बात परमेश्वर मेरे मुँह में डालेगा, वही बात मैं कहूँगा।”
39 ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.
३९तब बिलाम बालाक के संग-संग चला, और वे किर्यथूसोत तक आए।
40 ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.
४०और बालाक ने बैल और भेड़-बकरियों को बलि किया, और बिलाम और उसके साथ के हाकिमों के पास भेजा।
41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.
४१भोर को बालाक बिलाम को बाल के ऊँचे स्थानों पर चढ़ा ले गया, और वहाँ से उसको सब इस्राएली लोग दिखाई पड़े।

< ಅರಣ್ಯಕಾಂಡ 22 >