< ಅರಣ್ಯಕಾಂಡ 23 >

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.
וַיֹּאמֶר בִּלְעָם אֶל־בָּלָק בְּנֵה־לִי בָזֶה שִׁבְעָה מִזְבְּחֹת וְהָכֵן לִי בָּזֶה שִׁבְעָה פָרִים וְשִׁבְעָה אֵילִֽים׃
2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.
וַיַּעַשׂ בָּלָק כַּאֲשֶׁר דִּבֶּר בִּלְעָם וַיַּעַל בָּלָק וּבִלְעָם פָּר וָאַיִל בַּמִּזְבֵּֽחַ׃
3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.
וַיֹּאמֶר בִּלְעָם לְבָלָק הִתְיַצֵּב עַל־עֹלָתֶךָ וְאֵֽלְכָה אוּלַי יִקָּרֵה יְהֹוָה לִקְרָאתִי וּדְבַר מַה־יַּרְאֵנִי וְהִגַּדְתִּי לָךְ וַיֵּלֶךְ שֶֽׁפִי׃
4 ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.
וַיִּקָּר אֱלֹהִים אֶל־בִּלְעָם וַיֹּאמֶר אֵלָיו אֶת־שִׁבְעַת הַֽמִּזְבְּחֹת עָרַכְתִּי וָאַעַל פָּר וָאַיִל בַּמִּזְבֵּֽחַ׃
5 ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.
וַיָּשֶׂם יְהֹוָה דָּבָר בְּפִי בִלְעָם וַיֹּאמֶר שׁוּב אֶל־בָּלָק וְכֹה תְדַבֵּֽר׃
6 ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
וַיָּשׇׁב אֵלָיו וְהִנֵּה נִצָּב עַל־עֹלָתוֹ הוּא וְכׇל־שָׂרֵי מוֹאָֽב׃
7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.
וַיִּשָּׂא מְשָׁלוֹ וַיֹּאמַר מִן־אֲרָם יַנְחֵנִי בָלָק מֶֽלֶךְ־מוֹאָב מֵֽהַרְרֵי־קֶדֶם לְכָה אָֽרָה־לִּי יַעֲקֹב וּלְכָה זֹעֲמָה יִשְׂרָאֵֽל׃
8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
מָה אֶקֹּב לֹא קַבֹּה אֵל וּמָה אֶזְעֹם לֹא זָעַם יְהֹוָֽה׃
9 ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.
כִּֽי־מֵרֹאשׁ צֻרִים אֶרְאֶנּוּ וּמִגְּבָעוֹת אֲשׁוּרֶנּוּ הֶן־עָם לְבָדָד יִשְׁכֹּן וּבַגּוֹיִם לֹא יִתְחַשָּֽׁב׃
10 ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”
מִי מָנָה עֲפַר יַעֲקֹב וּמִסְפָּר אֶת־רֹבַע יִשְׂרָאֵל תָּמֹת נַפְשִׁי מוֹת יְשָׁרִים וּתְהִי אַחֲרִיתִי כָּמֹֽהוּ׃
11 ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.
וַיֹּאמֶר בָּלָק אֶל־בִּלְעָם מֶה עָשִׂיתָ לִי לָקֹב אֹיְבַי לְקַחְתִּיךָ וְהִנֵּה בֵּרַכְתָּ בָרֵֽךְ׃
12 ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.
וַיַּעַן וַיֹּאמַר הֲלֹא אֵת אֲשֶׁר יָשִׂים יְהֹוָה בְּפִי אֹתוֹ אֶשְׁמֹר לְדַבֵּֽר׃
13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.
וַיֹּאמֶר אֵלָיו בָּלָק (לך) [לְכָה־]נָּא אִתִּי אֶל־מָקוֹם אַחֵר אֲשֶׁר תִּרְאֶנּוּ מִשָּׁם אֶפֶס קָצֵהוּ תִרְאֶה וְכֻלּוֹ לֹא תִרְאֶה וְקׇבְנוֹ־לִי מִשָּֽׁם׃
14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
וַיִּקָּחֵהוּ שְׂדֵה צֹפִים אֶל־רֹאשׁ הַפִּסְגָּה וַיִּבֶן שִׁבְעָה מִזְבְּחֹת וַיַּעַל פָּר וָאַיִל בַּמִּזְבֵּֽחַ׃
15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.
וַיֹּאמֶר אֶל־בָּלָק הִתְיַצֵּב כֹּה עַל־עֹלָתֶךָ וְאָנֹכִי אִקָּרֶה כֹּֽה׃
16 ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.
וַיִּקָּר יְהֹוָה אֶל־בִּלְעָם וַיָּשֶׂם דָּבָר בְּפִיו וַיֹּאמֶר שׁוּב אֶל־בָּלָק וְכֹה תְדַבֵּֽר׃
17 ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.
וַיָּבֹא אֵלָיו וְהִנּוֹ נִצָּב עַל־עֹלָתוֹ וְשָׂרֵי מוֹאָב אִתּוֹ וַיֹּאמֶר לוֹ בָּלָק מַה־דִּבֶּר יְהֹוָֽה׃
18 ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
וַיִּשָּׂא מְשָׁלוֹ וַיֹּאמַר קוּם בָּלָק וּֽשְׁמָע הַאֲזִינָה עָדַי בְּנוֹ צִפֹּֽר׃
19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?
לֹא אִישׁ אֵל וִֽיכַזֵּב וּבֶן־אָדָם וְיִתְנֶחָם הַהוּא אָמַר וְלֹא יַעֲשֶׂה וְדִבֶּר וְלֹא יְקִימֶֽנָּה׃
20 ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು.
הִנֵּה בָרֵךְ לָקָחְתִּי וּבֵרֵךְ וְלֹא אֲשִׁיבֶֽנָּה׃
21 “ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.
לֹֽא־הִבִּיט אָוֶן בְּיַעֲקֹב וְלֹא־רָאָה עָמָל בְּיִשְׂרָאֵל יְהֹוָה אֱלֹהָיו עִמּוֹ וּתְרוּעַת מֶלֶךְ בּֽוֹ׃
22 ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.
אֵל מוֹצִיאָם מִמִּצְרָיִם כְּתוֹעֲפֹת רְאֵם לֽוֹ׃
23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
כִּי לֹא־נַחַשׁ בְּיַעֲקֹב וְלֹא־קֶסֶם בְּיִשְׂרָאֵל כָּעֵת יֵאָמֵר לְיַעֲקֹב וּלְיִשְׂרָאֵל מַה־פָּעַל אֵֽל׃
24 ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”
הֶן־עָם כְּלָבִיא יָקוּם וְכַאֲרִי יִתְנַשָּׂא לֹא יִשְׁכַּב עַד־יֹאכַל טֶרֶף וְדַם־חֲלָלִים יִשְׁתֶּֽה׃
25 ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.
וַיֹּאמֶר בָּלָק אֶל־בִּלְעָם גַּם־קֹב לֹא תִקֳּבֶנּוּ גַּם־בָּרֵךְ לֹא תְבָרְכֶֽנּוּ׃
26 ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.
וַיַּעַן בִּלְעָם וַיֹּאמֶר אֶל־בָּלָק הֲלֹא דִּבַּרְתִּי אֵלֶיךָ לֵאמֹר כֹּל אֲשֶׁר־יְדַבֵּר יְהֹוָה אֹתוֹ אֶֽעֱשֶֽׂה׃
27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.
וַיֹּאמֶר בָּלָק אֶל־בִּלְעָם לְכָה־נָּא אֶקָּחֲךָ אֶל־מָקוֹם אַחֵר אוּלַי יִישַׁר בְּעֵינֵי הָאֱלֹהִים וְקַבֹּתוֹ לִי מִשָּֽׁם׃
28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.
וַיִּקַּח בָּלָק אֶת־בִּלְעָם רֹאשׁ הַפְּעוֹר הַנִּשְׁקָף עַל־פְּנֵי הַיְשִׁימֹֽן׃
29 ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.
וַיֹּאמֶר בִּלְעָם אֶל־בָּלָק בְּנֵה־לִי בָזֶה שִׁבְעָה מִזְבְּחֹת וְהָכֵן לִי בָּזֶה שִׁבְעָה פָרִים וְשִׁבְעָה אֵילִֽם׃
30 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.
וַיַּעַשׂ בָּלָק כַּאֲשֶׁר אָמַר בִּלְעָם וַיַּעַל פָּר וָאַיִל בַּמִּזְבֵּֽחַ׃

< ಅರಣ್ಯಕಾಂಡ 23 >