< ಅರಣ್ಯಕಾಂಡ 24 >

1 ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.
巴兰见耶和华喜欢赐福与以色列,就不像前两次去求法术,却面向旷野。
2 ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ
巴兰举目,看见以色列人照着支派居住。 神的灵就临到他身上,
3 ಹೀಗೆ ಪ್ರವಾದಿಸಿದನು: “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: ಸ್ಪಷ್ಟ ಕಣ್ಣುಳ್ಳವನು ನುಡಿದದ್ದು.
他便题起诗歌说: 比珥的儿子巴兰说, 眼目闭住的人说,
4 ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:
得听 神的言语, 得见全能者的异象, 眼目睁开而仆倒的人说:
5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!
雅各啊,你的帐棚何等华美! 以色列啊,你的帐幕何其华丽!
6 “ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. ನದಿತೀರದಲ್ಲಿರುವ ತೋಟಗಳ ಹಾಗೆಯೂ, ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
如接连的山谷, 如河旁的园子, 如耶和华所栽的沉香树, 如水边的香柏木。
7 ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.
水要从他的桶里流出; 种子要撒在多水之处。 他的王必超过亚甲; 他的国必要振兴。
8 “ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.
神领他出埃及; 他似乎有野牛之力。 他要吞吃敌国, 折断他们的骨头, 用箭射透他们。
9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”
他蹲如公狮, 卧如母狮,谁敢惹他? 凡给你祝福的,愿他蒙福; 凡咒诅你的,愿他受咒诅。
10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.
巴勒向巴兰生气,就拍起手来,对巴兰说:“我召你来为我咒诅仇敌,不料,你这三次竟为他们祝福。
11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.
如今你快回本地去吧!我想使你得大尊荣,耶和华却阻止你不得尊荣。”
12 ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ,
巴兰对巴勒说:“我岂不是对你所差遣到我那里的使者说:
13 ‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.
‘巴勒就是将他满屋的金银给我,我也不得越过耶和华的命,凭自己的心意行好行歹。耶和华说什么,我就要说什么’?”
14 ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.
“现在我要回本族去。你来,我告诉你这民日后要怎样待你的民。”
15 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬೆಯೋರನ ಮಗ ಬಿಳಾಮನು ಹೇಳಿದ್ದು: ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು.
他就题起诗歌说: 比珥的儿子巴兰说: 眼目闭住的人说,
16 ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:
得听 神的言语, 明白至高者的意旨, 看见全能者的异象, 眼目睁开而仆倒的人说:
17 “ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.
我看他却不在现时; 我望他却不在近日。 有星要出于雅各,有杖要兴于以色列, 必打破摩押的四角,毁坏扰乱之子。
18 ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,
他必得以东为基业, 又得仇敌之地西珥为产业; 以色列必行事勇敢。
19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”
有一位出于雅各的,必掌大权; 他要除灭城中的余民。
20 ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”
巴兰观看亚玛力,就题起诗歌说: 亚玛力原为诸国之首, 但他终必沉沦。
21 ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
巴兰观看基尼人,就题起诗歌说: 你的住处本是坚固; 你的窝巢做在岩穴中。
22 ಆದರೂ ಅಸ್ಸೀರಿಯರು ನಿನ್ನನ್ನು ಸೆರೆಹಿಡಿಯುವಷ್ಟರಲ್ಲೇ ನೀವು ಕೇನ್ಯರೂ ಹಾಳಾಗುವರು.”
然而基尼必至衰微, 直到亚述把你掳去。
23 ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
巴兰又题起诗歌说: 哀哉! 神行这事,谁能得活?
24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”
必有人乘船从基提界而来, 苦害亚述,苦害希伯; 他也必至沉沦。
25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
于是巴兰起来,回他本地去;巴勒也回去了。

< ಅರಣ್ಯಕಾಂಡ 24 >