< ಅರಣ್ಯಕಾಂಡ 26 >

1 ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,
וַיְהִי אַחֲרֵי הַמַּגֵּפָה וַיֹּאמֶר יְהֹוָה אֶל־מֹשֶׁה וְאֶל אֶלְעָזָר בֶּן־אַהֲרֹן הַכֹּהֵן לֵאמֹֽר׃
2 “ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು.
שְׂאוּ אֶת־רֹאשׁ ׀ כׇּל־עֲדַת בְּנֵי־יִשְׂרָאֵל מִבֶּן עֶשְׂרִים שָׁנָה וָמַעְלָה לְבֵית אֲבֹתָם כׇּל־יֹצֵא צָבָא בְּיִשְׂרָאֵֽל׃
3 ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ,
וַיְדַבֵּר מֹשֶׁה וְאֶלְעָזָר הַכֹּהֵן אֹתָם בְּעַֽרְבֹת מוֹאָב עַל־יַרְדֵּן יְרֵחוֹ לֵאמֹֽר׃
4 “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:
מִבֶּן עֶשְׂרִים שָׁנָה וָמָעְלָה כַּאֲשֶׁר צִוָּה יְהֹוָה אֶת־מֹשֶׁה וּבְנֵי יִשְׂרָאֵל הַיֹּצְאִים מֵאֶרֶץ מִצְרָֽיִם׃
5 ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
רְאוּבֵן בְּכוֹר יִשְׂרָאֵל בְּנֵי רְאוּבֵן חֲנוֹךְ מִשְׁפַּחַת הַחֲנֹכִי לְפַלּוּא מִשְׁפַּחַת הַפַּלֻּאִֽי׃
6 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.
לְחֶצְרֹן מִשְׁפַּחַת הַֽחֶצְרוֹנִי לְכַרְמִי מִשְׁפַּחַת הַכַּרְמִֽי׃
7 ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.
אֵלֶּה מִשְׁפְּחֹת הָראוּבֵנִי וַיִּהְיוּ פְקֻדֵיהֶם שְׁלֹשָׁה וְאַרְבָּעִים אֶלֶף וּשְׁבַע מֵאוֹת וּשְׁלֹשִֽׁים׃
8 ಪಲ್ಲೂವಿನ ಪುತ್ರ ಎಲೀಯಾಬನು.
וּבְנֵי פַלּוּא אֱלִיאָֽב׃
9 ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
וּבְנֵי אֱלִיאָב נְמוּאֵל וְדָתָן וַאֲבִירָם הֽוּא־דָתָן וַאֲבִירָם (קרואי) [קְרִיאֵי] הָעֵדָה אֲשֶׁר הִצּוּ עַל־מֹשֶׁה וְעַֽל־אַהֲרֹן בַּעֲדַת־קֹרַח בְּהַצֹּתָם עַל־יְהֹוָֽה׃
10 ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.
וַתִּפְתַּח הָאָרֶץ אֶת־פִּיהָ וַתִּבְלַע אֹתָם וְאֶת־קֹרַח בְּמוֹת הָעֵדָה בַּאֲכֹל הָאֵשׁ אֵת חֲמִשִּׁים וּמָאתַיִם אִישׁ וַיִּהְיוּ לְנֵֽס׃
11 ಆದರೂ ಕೋರಹನ ಮಕ್ಕಳು ಸಾಯಲಿಲ್ಲ.
וּבְנֵי־קֹרַח לֹא־מֵֽתוּ׃
12 ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;
בְּנֵי שִׁמְעוֹן לְמִשְׁפְּחֹתָם לִנְמוּאֵל מִשְׁפַּחַת הַנְּמוּאֵלִי לְיָמִין מִשְׁפַּחַת הַיָּמִינִי לְיָכִין מִשְׁפַּחַת הַיָּכִינִֽי׃
13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;
לְזֶרַח מִשְׁפַּחַת הַזַּרְחִי לְשָׁאוּל מִשְׁפַּחַת הַשָּׁאוּלִֽי׃
14 ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 22,200 ಪುರುಷರು.
אֵלֶּה מִשְׁפְּחֹת הַשִּׁמְעֹנִי שְׁנַיִם וְעֶשְׂרִים אֶלֶף וּמָאתָֽיִם׃
15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;
בְּנֵי גָד לְמִשְׁפְּחֹתָם לִצְפוֹן מִשְׁפַּחַת הַצְּפוֹנִי לְחַגִּי מִשְׁפַּחַת הַֽחַגִּי לְשׁוּנִי מִשְׁפַּחַת הַשּׁוּנִֽי׃
16 ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
לְאׇזְנִי מִשְׁפַּחַת הָאׇזְנִי לְעֵרִי מִשְׁפַּחַת הָעֵרִֽי׃
17 ಅರೋದನಿಂದ ಅರೋದ್ಯರ ಕುಟುಂಬ; ಅರೇಲೀಯಿಂದ ಅರೇಲೀಯರ ಕುಟುಂಬ.
לַאֲרוֹד מִשְׁפַּחַת הָאֲרוֹדִי לְאַרְאֵלִי מִשְׁפַּחַת הָאַרְאֵלִֽי׃
18 ಗಾದನ ಮಕ್ಕಳ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 40,500 ಪುರುಷರು.
אֵלֶּה מִשְׁפְּחֹת בְּנֵֽי־גָד לִפְקֻדֵיהֶם אַרְבָּעִים אֶלֶף וַחֲמֵשׁ מֵאֽוֹת׃
19 ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
בְּנֵי יְהוּדָה עֵר וְאוֹנָן וַיָּמׇת עֵר וְאוֹנָן בְּאֶרֶץ כְּנָֽעַן׃
20 ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;
וַיִּהְיוּ בְנֵי־יְהוּדָה לְמִשְׁפְּחֹתָם לְשֵׁלָה מִשְׁפַּחַת הַשֵּׁלָנִי לְפֶרֶץ מִשְׁפַּחַת הַפַּרְצִי לְזֶרַח מִשְׁפַּחַת הַזַּרְחִֽי׃
21 ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ
וַיִּהְיוּ בְנֵי־פֶרֶץ לְחֶצְרֹן מִשְׁפַּחַת הַֽחֶצְרֹנִי לְחָמוּל מִשְׁפַּחַת הֶחָמוּלִֽי׃
22 ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.
אֵלֶּה מִשְׁפְּחֹת יְהוּדָה לִפְקֻדֵיהֶם שִׁשָּׁה וְשִׁבְעִים אֶלֶף וַחֲמֵשׁ מֵאֽוֹת׃
23 ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. ತೋಲನ ವಂಶಸ್ಥರಾದ ತೋಲಾಯರು, ಪುವ್ವನಿಂದ ಪೂನ್ಯರ ಕುಟುಂಬ;
בְּנֵי יִשָּׂשכָר לְמִשְׁפְּחֹתָם תּוֹלָע מִשְׁפַּחַת הַתּוֹלָעִי לְפֻוָה מִשְׁפַּחַת הַפּוּנִֽי׃
24 ಯಾಶೂಬನಿಂದ ಯಾಶೂಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.
לְיָשׁוּב מִשְׁפַּחַת הַיָּשֻׁבִי לְשִׁמְרֹן מִשְׁפַּחַת הַשִּׁמְרֹנִֽי׃
25 ಇಸ್ಸಾಕಾರನ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 64,300 ಪುರುಷರು.
אֵלֶּה מִשְׁפְּחֹת יִשָּׂשכָר לִפְקֻדֵיהֶם אַרְבָּעָה וְשִׁשִּׁים אֶלֶף וּשְׁלֹשׁ מֵאֽוֹת׃
26 ಜೆಬುಲೂನನ ಪುತ್ರರು: ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನಿಂದ ಯಹಲೇಲ್ಯರ ಕುಟುಂಬ.
בְּנֵי זְבוּלֻן לְמִשְׁפְּחֹתָם לְסֶרֶד מִשְׁפַּחַת הַסַּרְדִּי לְאֵלוֹן מִשְׁפַּחַת הָאֵלֹנִי לְיַחְלְאֵל מִשְׁפַּחַת הַיַּחְלְאֵלִֽי׃
27 ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು.
אֵלֶּה מִשְׁפְּחֹת הַזְּבוּלֹנִי לִפְקֻדֵיהֶם שִׁשִּׁים אֶלֶף וַחֲמֵשׁ מֵאֽוֹת׃
28 ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.
בְּנֵי יוֹסֵף לְמִשְׁפְּחֹתָם מְנַשֶּׁה וְאֶפְרָֽיִם׃
29 ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.
בְּנֵי מְנַשֶּׁה לְמָכִיר מִשְׁפַּחַת הַמָּכִירִי וּמָכִיר הוֹלִיד אֶת־גִּלְעָד לְגִלְעָד מִשְׁפַּחַת הַגִּלְעָדִֽי׃
30 ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
אֵלֶּה בְּנֵי גִלְעָד אִיעֶזֶר מִשְׁפַּחַת הָאִֽיעֶזְרִי לְחֵלֶק מִשְׁפַּחַת הַֽחֶלְקִֽי׃
31 ಅಸ್ರೀಯೇಲನಿಂದ ಅಸ್ರೀಯೇಲ್ಯರ ಕುಟುಂಬ, ಶೆಕೆಮನಿಂದ ಶೆಕೆಮ್ಯರ ಕುಟುಂಬ;
וְאַשְׂרִיאֵל מִשְׁפַּחַת הָאַשְׂרִֽאֵלִי וְשֶׁכֶם מִשְׁפַּחַת הַשִּׁכְמִֽי׃
32 ಶೆಮೀದಾಯನಿಂದ ಶೆಮೀದಾಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
וּשְׁמִידָע מִשְׁפַּחַת הַשְּׁמִידָעִי וְחֵפֶר מִשְׁפַּחַת הַֽחֶפְרִֽי׃
33 ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
וּצְלׇפְחָד בֶּן־חֵפֶר לֹא־הָיוּ לוֹ בָּנִים כִּי אִם־בָּנוֹת וְשֵׁם בְּנוֹת צְלׇפְחָד מַחְלָה וְנֹעָה חׇגְלָה מִלְכָּה וְתִרְצָֽה׃
34 ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.
אֵלֶּה מִשְׁפְּחֹת מְנַשֶּׁה וּפְקֻדֵיהֶם שְׁנַיִם וַחֲמִשִּׁים אֶלֶף וּשְׁבַע מֵאֽוֹת׃
35 ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.
אֵלֶּה בְנֵי־אֶפְרַיִם לְמִשְׁפְּחֹתָם לְשׁוּתֶלַח מִשְׁפַּחַת הַשֻּׁתַלְחִי לְבֶכֶר מִשְׁפַּחַת הַבַּכְרִי לְתַחַן מִשְׁפַּחַת הַֽתַּחֲנִֽי׃
36 ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ.
וְאֵלֶּה בְּנֵי שׁוּתָלַח לְעֵרָן מִשְׁפַּחַת הָעֵרָנִֽי׃
37 ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
אֵלֶּה מִשְׁפְּחֹת בְּנֵי־אֶפְרַיִם לִפְקֻדֵיהֶם שְׁנַיִם וּשְׁלֹשִׁים אֶלֶף וַחֲמֵשׁ מֵאוֹת אֵלֶּה בְנֵי־יוֹסֵף לְמִשְׁפְּחֹתָֽם׃
38 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;
בְּנֵי בִנְיָמִן לְמִשְׁפְּחֹתָם לְבֶלַע מִשְׁפַּחַת הַבַּלְעִי לְאַשְׁבֵּל מִשְׁפַּחַת הָֽאַשְׁבֵּלִי לַאֲחִירָם מִשְׁפַּחַת הָאֲחִירָמִֽי׃
39 ಶೂಫಾಮನಿಂದ ಶೂಫಾಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ.
לִשְׁפוּפָם מִשְׁפַּחַת הַשּׁוּפָמִי לְחוּפָם מִשְׁפַּחַת הַחוּפָמִֽי׃
40 ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ.
וַיִּהְיוּ בְנֵי־בֶלַע אַרְדְּ וְנַעֲמָן מִשְׁפַּחַת הָֽאַרְדִּי לְנַֽעֲמָן מִשְׁפַּחַת הַֽנַּעֲמִֽי׃
41 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.
אֵלֶּה בְנֵי־בִנְיָמִן לְמִשְׁפְּחֹתָם וּפְקֻדֵיהֶם חֲמִשָּׁה וְאַרְבָּעִים אֶלֶף וְשֵׁשׁ מֵאֽוֹת׃
42 ಕುಟುಂಬಗಳ ಪ್ರಕಾರ ದಾನನ ಪುತ್ರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ; ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ.
אֵלֶּה בְנֵי־דָן לְמִשְׁפְּחֹתָם לְשׁוּחָם מִשְׁפַּחַת הַשּׁוּחָמִי אֵלֶּה מִשְׁפְּחֹת דָּן לְמִשְׁפְּחֹתָֽם׃
43 ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400.
כׇּל־מִשְׁפְּחֹת הַשּׁוּחָמִי לִפְקֻדֵיהֶם אַרְבָּעָה וְשִׁשִּׁים אֶלֶף וְאַרְבַּע מֵאֽוֹת׃
44 ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
בְּנֵי אָשֵׁר לְמִשְׁפְּחֹתָם לְיִמְנָה מִשְׁפַּחַת הַיִּמְנָה לְיִשְׁוִי מִשְׁפַּחַת הַיִּשְׁוִי לִבְרִיעָה מִשְׁפַּחַת הַבְּרִיעִֽי׃
45 ಬೆರೀಯನ ಕುಮಾರರು: ಹೆಬೆರನಿಂದ ಹೆಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
לִבְנֵי בְרִיעָה לְחֶבֶר מִשְׁפַּחַת הַֽחֶבְרִי לְמַלְכִּיאֵל מִשְׁפַּחַת הַמַּלְכִּיאֵלִֽי׃
46 ಆಶೇರನ ಮಗಳ ಹೆಸರು ಸೆರಹ.
וְשֵׁם בַּת־אָשֵׁר שָֽׂרַח׃
47 ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400.
אֵלֶּה מִשְׁפְּחֹת בְּנֵי־אָשֵׁר לִפְקֻדֵיהֶם שְׁלֹשָׁה וַחֲמִשִּׁים אֶלֶף וְאַרְבַּע מֵאֽוֹת׃
48 ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,
בְּנֵי נַפְתָּלִי לְמִשְׁפְּחֹתָם לְיַחְצְאֵל מִשְׁפַּחַת הַיַּחְצְאֵלִי לְגוּנִי מִשְׁפַּחַת הַגּוּנִֽי׃
49 ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
לְיֵצֶר מִשְׁפַּחַת הַיִּצְרִי לְשִׁלֵּם מִשְׁפַּחַת הַשִּׁלֵּמִֽי׃
50 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400.
אֵלֶּה מִשְׁפְּחֹת נַפְתָּלִי לְמִשְׁפְּחֹתָם וּפְקֻדֵיהֶם חֲמִשָּׁה וְאַרְבָּעִים אֶלֶף וְאַרְבַּע מֵאֽוֹת׃
51 ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730.
אֵלֶּה פְּקוּדֵי בְּנֵי יִשְׂרָאֵל שֵׁשׁ־מֵאוֹת אֶלֶף וָאָלֶף שְׁבַע מֵאוֹת וּשְׁלֹשִֽׁים׃
52 ಯೆಹೋವ ದೇವರು ಮೋಶೆಗೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
53 “ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.
לָאֵלֶּה תֵּחָלֵק הָאָרֶץ בְּנַחֲלָה בְּמִסְפַּר שֵׁמֽוֹת׃
54 ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು.
לָרַב תַּרְבֶּה נַחֲלָתוֹ וְלַמְעַט תַּמְעִיט נַחֲלָתוֹ אִישׁ לְפִי פְקֻדָיו יֻתַּן נַחֲלָתֽוֹ׃
55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.
אַךְ־בְּגוֹרָל יֵחָלֵק אֶת־הָאָרֶץ לִשְׁמוֹת מַטּוֹת־אֲבֹתָם יִנְחָֽלוּ׃
56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”
עַל־פִּי הַגּוֹרָל תֵּחָלֵק נַחֲלָתוֹ בֵּין רַב לִמְעָֽט׃
57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.
וְאֵלֶּה פְקוּדֵי הַלֵּוִי לְמִשְׁפְּחֹתָם לְגֵרְשׁוֹן מִשְׁפַּחַת הַגֵּרְשֻׁנִּי לִקְהָת מִשְׁפַּחַת הַקְּהָתִי לִמְרָרִי מִשְׁפַּחַת הַמְּרָרִֽי׃
58 ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.
אֵלֶּה ׀ מִשְׁפְּחֹת לֵוִי מִשְׁפַּחַת הַלִּבְנִי מִשְׁפַּחַת הַֽחֶבְרֹנִי מִשְׁפַּחַת הַמַּחְלִי מִשְׁפַּחַת הַמּוּשִׁי מִשְׁפַּחַת הַקׇּרְחִי וּקְהָת הוֹלִד אֶת־עַמְרָֽם׃
59 ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
וְשֵׁם ׀ אֵשֶׁת עַמְרָם יוֹכֶבֶד בַּת־לֵוִי אֲשֶׁר יָלְדָה אֹתָהּ לְלֵוִי בְּמִצְרָיִם וַתֵּלֶד לְעַמְרָם אֶֽת־אַהֲרֹן וְאֶת־מֹשֶׁה וְאֵת מִרְיָם אֲחֹתָֽם׃
60 ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.
וַיִּוָּלֵד לְאַהֲרֹן אֶת־נָדָב וְאֶת־אֲבִיהוּא אֶת־אֶלְעָזָר וְאֶת־אִיתָמָֽר׃
61 ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
וַיָּמׇת נָדָב וַאֲבִיהוּא בְּהַקְרִיבָם אֵשׁ־זָרָה לִפְנֵי יְהֹוָֽה׃
62 ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.
וַיִּהְיוּ פְקֻדֵיהֶם שְׁלֹשָׁה וְעֶשְׂרִים אֶלֶף כׇּל־זָכָר מִבֶּן־חֹדֶשׁ וָמָעְלָה כִּי ׀ לֹא הׇתְפָּקְדוּ בְּתוֹךְ בְּנֵי יִשְׂרָאֵל כִּי לֹא־נִתַּן לָהֶם נַחֲלָה בְּתוֹךְ בְּנֵי יִשְׂרָאֵֽל׃
63 ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
אֵלֶּה פְּקוּדֵי מֹשֶׁה וְאֶלְעָזָר הַכֹּהֵן אֲשֶׁר פָּֽקְדוּ אֶת־בְּנֵי יִשְׂרָאֵל בְּעַֽרְבֹת מוֹאָב עַל יַרְדֵּן יְרֵחֽוֹ׃
64 ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.
וּבְאֵלֶּה לֹא־הָיָה אִישׁ מִפְּקוּדֵי מֹשֶׁה וְאַהֲרֹן הַכֹּהֵן אֲשֶׁר פָּקְדוּ אֶת־בְּנֵי יִשְׂרָאֵל בְּמִדְבַּר סִינָֽי׃
65 ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.
כִּֽי־אָמַר יְהֹוָה לָהֶם מוֹת יָמֻתוּ בַּמִּדְבָּר וְלֹא־נוֹתַר מֵהֶם אִישׁ כִּי אִם־כָּלֵב בֶּן־יְפֻנֶּה וִיהוֹשֻׁעַ בִּן־נֽוּן׃

< ಅರಣ್ಯಕಾಂಡ 26 >