< ಅರಣ್ಯಕಾಂಡ 29 >
1 “‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.
2 ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.
3 ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಹತ್ತನೇ ಎರಡು ಭಾಗ,
4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,
5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.
6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.
7 “‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.
8 ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
9 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು, ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಎಫಾದ ಹತ್ತನೇ ಎರಡು ಭಾಗ,
10 ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,
11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.
12 “‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.
13 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
14 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ,
15 ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಒಂದು ಭಾಗ,
16 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.
17 “‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
18 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
19 ದೋಷಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
20 “‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
21 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
22 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
23 “‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
24 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ
25 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
26 “‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
27 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ,
28 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
29 “‘ಆರನೆಯ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
30 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
31 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
32 “‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ
33 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
34 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
35 “‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.
36 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ
37 ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
38 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
39 “‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’”
40 ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು.