< ಅರಣ್ಯಕಾಂಡ 3 >

1 ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.
וְאֵלֶּה תּוֹלְדֹת אַהֲרֹן וּמֹשֶׁה בְּיוֹם דִּבֶּר יְהוָה אֶת־מֹשֶׁה בְּהַר סִינָֽי׃
2 ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.
וְאֵלֶּה שְׁמוֹת בְּֽנֵי־אַהֲרֹן הַבְּכוֹר ׀ נָדָב וַאֲבִיהוּא אֶלְעָזָר וְאִיתָמָֽר׃
3 ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.
אֵלֶּה שְׁמוֹת בְּנֵי אַהֲרֹן הַכֹּהֲנִים הַמְּשֻׁחִים אֲשֶׁר־מִלֵּא יָדָם לְכַהֵֽן׃
4 ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.
וַיָּמָת נָדָב וַאֲבִיהוּא לִפְנֵי יְהוָה בְּֽהַקְרִבָם אֵשׁ זָרָה לִפְנֵי יְהוָה בְּמִדְבַּר סִינַי וּבָנִים לֹא־הָיוּ לָהֶם וַיְכַהֵן אֶלְעָזָר וְאִיתָמָר עַל־פְּנֵי אַהֲרֹן אֲבִיהֶֽם׃
5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהוָה אֶל־מֹשֶׁה לֵּאמֹֽר׃
6 “ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.
הַקְרֵב אֶת־מַטֵּה לֵוִי וְהֽ͏ַעֲמַדְתָּ אֹתוֹ לִפְנֵי אַהֲרֹן הַכֹּהֵן וְשֵׁרְתוּ אֹתֽוֹ׃
7 ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.
וְשָׁמְרוּ אֶת־מִשְׁמַרְתּוֹ וְאֶת־מִשְׁמֶרֶת כָּל־הָעֵדָה לִפְנֵי אֹהֶל מוֹעֵד לַעֲבֹד אֶת־עֲבֹדַת הַמִּשְׁכָּֽן׃
8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.
וְשָׁמְרוּ אֶֽת־כָּל־כְּלֵי אֹהֶל מוֹעֵד וְאֶת־מִשְׁמֶרֶת בְּנֵי יִשְׂרָאֵל לַעֲבֹד אֶת־עֲבֹדַת הַמִּשְׁכָּֽן׃
9 ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.
וְנָתַתָּה אֶת־הַלְוִיִּם לְאַהֲרֹן וּלְבָנָיו נְתוּנִם נְתוּנִם הֵמָּה לוֹ מֵאֵת בְּנֵי יִשְׂרָאֵֽל׃
10 ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”
וְאֶת־אַהֲרֹן וְאֶת־בָּנָיו תִּפְקֹד וְשָׁמְרוּ אֶת־כְּהֻנָּתָם וְהַזָּר הַקָּרֵב יוּמָֽת׃
11 ಯೆಹೋವ ದೇವರು ಮೋಶೆಗೆ ಹೀಗೆಂದರು:
וַיְדַבֵּר יְהוָה אֶל־מֹשֶׁה לֵּאמֹֽר׃
12 “ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.
וַאֲנִי הִנֵּה לָקַחְתִּי אֶת־הַלְוִיִּם מִתּוֹךְ בְּנֵי יִשְׂרָאֵל תַּחַת כָּל־בְּכוֹר פֶּטֶר רֶחֶם מִבְּנֵי יִשְׂרָאֵל וְהָיוּ לִי הַלְוִיִּֽם׃
13 ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”
כִּי לִי כָּל־בְּכוֹר בְּיוֹם הַכֹּתִי כָל־בְּכוֹר בְּאֶרֶץ מִצְרַיִם הִקְדַּשְׁתִּי לִי כָל־בְּכוֹר בְּיִשְׂרָאֵל מֵאָדָם עַד־בְּהֵמָה לִי יִהְיוּ אֲנִי יְהוָֽה׃
14 ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ:
וַיְדַבֵּר יְהוָה אֶל־מֹשֶׁה בְּמִדְבַּר סִינַי לֵאמֹֽר׃
15 “ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.
פְּקֹד אֶת־בְּנֵי לֵוִי לְבֵית אֲבֹתָם לְמִשְׁפְּחֹתָם כָּל־זָכָר מִבֶּן־חֹדֶשׁ וָמַעְלָה תִּפְקְדֵֽם׃
16 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.
וַיִּפְקֹד אֹתָם מֹשֶׁה עַל־פִּי יְהוָה כַּאֲשֶׁר צֻוָּֽה׃
17 ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್ ಮತ್ತು ಮೆರಾರೀ.
וַיִּֽהְיוּ־אֵלֶּה בְנֵֽי־לֵוִי בִּשְׁמֹתָם גֵּרְשׁוֹן וּקְהָת וּמְרָרִֽי׃
18 ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.
וְאֵלֶּה שְׁמוֹת בְּֽנֵי־גֵרְשׁוֹן לְמִשְׁפְּחֹתָם לִבְנִי וְשִׁמְעִֽי׃
19 ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
וּבְנֵי קְהָת לְמִשְׁפְּחֹתָם עַמְרָם וְיִצְהָר חֶבְרוֹן וְעֻזִּיאֵֽל׃
20 ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.
וּבְנֵי מְרָרִי לְמִשְׁפְּחֹתָם מַחְלִי וּמוּשִׁי אֵלֶּה הֵם מִשְׁפְּחֹת הַלֵּוִי לְבֵית אֲבֹתָֽם׃
21 ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.
לְגֵרְשׁוֹן מִשְׁפַּחַת הַלִּבְנִי וּמִשְׁפַּחַת הַשִּׁמְעִי אֵלֶּה הֵם מִשְׁפְּחֹת הַגֵּרְשֻׁנִּֽי׃
22 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ.
פְּקֻדֵיהֶם בְּמִסְפַּר כָּל־זָכָר מִבֶּן־חֹדֶשׁ וָמָעְלָה פְּקֻדֵיהֶם שִׁבְעַת אֲלָפִים וַחֲמֵשׁ מֵאֽוֹת׃
23 ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.
מִשְׁפְּחֹת הַגֵּרְשֻׁנִּי אַחֲרֵי הַמִּשְׁכָּן יַחֲנוּ יָֽמָּה׃
24 ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.
וּנְשִׂיא בֵֽית־אָב לַגֵּרְשֻׁנִּי אֶלְיָסָף בֶּן־לָאֵֽל׃
25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,
וּמִשְׁמֶרֶת בְּנֵֽי־גֵרְשׁוֹן בְּאֹהֶל מוֹעֵד הַמִּשְׁכָּן וְהָאֹהֶל מִכְסֵהוּ וּמָסַךְ פֶּתַח אֹהֶל מוֹעֵֽד׃
26 ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.
וְקַלְעֵי הֶֽחָצֵר וְאֶת־מָסַךְ פֶּתַח הֶֽחָצֵר אֲשֶׁר עַל־הַמִּשְׁכָּן וְעַל־הַמִּזְבֵּחַ סָבִיב וְאֵת מֵֽיתָרָיו לְכֹל עֲבֹדָתֽוֹ׃
27 ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.
וְלִקְהָת מִשְׁפַּחַת הֽ͏ַעַמְרָמִי וּמִשְׁפַּחַת הַיִּצְהָרִי וּמִשְׁפַּחַת הֽ͏ַחֶבְרֹנִי וּמִשְׁפַּחַת הָֽעָזִּיאֵלִי אֵלֶּה הֵם מִשְׁפְּחֹת הַקְּהָתִֽי׃
28 ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.
בְּמִסְפַּר כָּל־זָכָר מִבֶּן־חֹדֶשׁ וָמָעְלָה שְׁמֹנַת אֲלָפִים וְשֵׁשׁ מֵאוֹת שֹׁמְרֵי מִשְׁמֶרֶת הַקֹּֽדֶשׁ׃
29 ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.
מִשְׁפְּחֹת בְּנֵי־קְהָת יַחֲנוּ עַל יֶרֶךְ הַמִּשְׁכָּן תֵּימָֽנָה׃
30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.
וּנְשִׂיא בֵֽית־אָב לְמִשְׁפְּחֹת הַקְּהָתִי אֶלִיצָפָן בֶּן־עֻזִּיאֵֽל׃
31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.
וּמִשְׁמַרְתָּם הָאָרֹן וְהַשֻּׁלְחָן וְהַמְּנֹרָה וְהַֽמִּזְבְּחֹת וּכְלֵי הַקֹּדֶשׁ אֲשֶׁר יְשָׁרְתוּ בָּהֶם וְהַמָּסָךְ וְכֹל עֲבֹדָתֽוֹ׃
32 ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.
וּנְשִׂיא נְשִׂיאֵי הַלֵּוִי אֶלְעָזָר בֶּן־אַהֲרֹן הַכֹּהֵן פְּקֻדַּת שֹׁמְרֵי מִשְׁמֶרֶת הַקֹּֽדֶשׁ׃
33 ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.
לִמְרָרִי מִשְׁפַּחַת הַמַּחְלִי וּמִשְׁפַּחַת הַמּוּשִׁי אֵלֶּה הֵם מִשְׁפְּחֹת מְרָרִֽי׃
34 ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ.
וּפְקֻדֵיהֶם בְּמִסְפַּר כָּל־זָכָר מִבֶּן־חֹדֶשׁ וָמָעְלָה שֵׁשֶׁת אֲלָפִים וּמָאתָֽיִם׃
35 ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.
וּנְשִׂיא בֵֽית־אָב לְמִשְׁפְּחֹת מְרָרִי צוּרִיאֵל בֶּן־אֲבִיחָיִל עַל יֶרֶךְ הַמִּשְׁכָּן יַחֲנוּ צָפֹֽנָה׃
36 ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ
וּפְקֻדַּת מִשְׁמֶרֶת בְּנֵי מְרָרִי קַרְשֵׁי הַמִּשְׁכָּן וּבְרִיחָיו וְעַמֻּדָיו וַאֲדָנָיו וְכָל־כֵּלָיו וְכֹל עֲבֹדָתֽוֹ׃
37 ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.
וְעַמֻּדֵי הֶחָצֵר סָבִיב וְאַדְנֵיהֶם וִיתֵדֹתָם וּמֵֽיתְרֵיהֶֽם׃
38 ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.
וְהַחֹנִים לִפְנֵי הַמִּשְׁכָּן קֵדְמָה לִפְנֵי אֹֽהֶל־מוֹעֵד ׀ מִזְרָחָה מֹשֶׁה ׀ וְאַהֲרֹן וּבָנָיו שֹֽׁמְרִים מִשְׁמֶרֶת הַמִּקְדָּשׁ לְמִשְׁמֶרֶת בְּנֵי יִשְׂרָאֵל וְהַזָּר הַקָּרֵב יוּמָֽת׃
39 ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.
כָּל־פְּקוּדֵי הַלְוִיִּם אֲשֶׁר פָּקַד מֹשֶׁה וְאַהֲרֹן עַל־פִּי יְהוָה לְמִשְׁפְּחֹתָם כָּל־זָכָר מִבֶּן־חֹדֶשׁ וָמַעְלָה שְׁנַיִם וְעֶשְׂרִים אָֽלֶף׃
40 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
וַיֹּאמֶר יְהוָה אֶל־מֹשֶׁה פְּקֹד כָּל־בְּכֹר זָכָר לִבְנֵי יִשְׂרָאֵל מִבֶּן־חֹדֶשׁ וָמָעְלָה וְשָׂא אֵת מִסְפַּר שְׁמֹתָֽם׃
41 ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’” ಎಂದರು.
וְלָקַחְתָּ אֶת־הַלְוִיִּם לִי אֲנִי יְהוָה תַּחַת כָּל־בְּכֹר בִּבְנֵי יִשְׂרָאֵל וְאֵת בֶּהֱמַת הַלְוִיִּם תַּחַת כָּל־בְּכוֹר בְּבֶהֱמַת בְּנֵי יִשְׂרָאֵֽל׃
42 ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.
וַיִּפְקֹד מֹשֶׁה כַּאֲשֶׁר צִוָּה יְהוָה אֹתוֹ אֶֽת־כָּל־בְּכֹר בִּבְנֵי יִשְׂרָאֵֽל׃
43 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ.
וַיְהִי כָל־בְּכוֹר זָכָר בְּמִסְפַּר שֵׁמוֹת מִבֶּן־חֹדֶשׁ וָמַעְלָה לִפְקֻדֵיהֶם שְׁנַיִם וְעֶשְׂרִים אֶלֶף שְׁלֹשָׁה וְשִׁבְעִים וּמָאתָֽיִם׃
44 ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ,
וַיְדַבֵּר יְהוָה אֶל־מֹשֶׁה לֵּאמֹֽר׃
45 “ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.
קַח אֶת־הַלְוִיִּם תַּחַת כָּל־בְּכוֹר בִּבְנֵי יִשְׂרָאֵל וְאֶת־בֶּהֱמַת הַלְוִיִּם תַּחַת בְּהֶמְתָּם וְהָיוּ־לִי הַלְוִיִּם אֲנִי יְהוָֽה׃
46 ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ
וְאֵת פְּדוּיֵי הַשְּׁלֹשָׁה וְהַשִּׁבְעִים וְהַמָּאתָיִם הָעֹֽדְפִים עַל־הַלְוִיִּם מִבְּכוֹר בְּנֵי יִשְׂרָאֵֽל׃
47 ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.
וְלָקַחְתָּ חֲמֵשֶׁת חֲמֵשֶׁת שְׁקָלִים לַגֻּלְגֹּלֶת בְּשֶׁקֶל הַקֹּדֶשׁ תִּקָּח עֶשְׂרִים גֵּרָה הַשָּֽׁקֶל׃
48 ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”
וְנָתַתָּה הַכֶּסֶף לְאַהֲרֹן וּלְבָנָיו פְּדוּיֵי הָעֹדְפִים בָּהֶֽם׃
49 ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.
וַיִּקַּח מֹשֶׁה אֵת כֶּסֶף הַפִּדְיוֹם מֵאֵת הָעֹדְפִים עַל פְּדוּיֵי הַלְוִיִּֽם׃
50 ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.
מֵאֵת בְּכוֹר בְּנֵי יִשְׂרָאֵל לָקַח אֶת־הַכָּסֶף חֲמִשָּׁה וְשִׁשִּׁים וּשְׁלֹשׁ מֵאוֹת וָאֶלֶף בְּשֶׁקֶל הַקֹּֽדֶשׁ׃
51 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.
וַיִּתֵּן מֹשֶׁה אֶת־כֶּסֶף הַפְּדֻיִם לְאַהֲרֹן וּלְבָנָיו עַל־פִּי יְהוָה כַּאֲשֶׁר צִוָּה יְהוָה אֶת־מֹשֶֽׁה׃

< ಅರಣ್ಯಕಾಂಡ 3 >