< ಅರಣ್ಯಕಾಂಡ 30 >

1 ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:
Mose akawaambia viongozi wa makabila ya Israeli: “Hili ndilo Bwana analoagiza:
2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.
Mwanaume awekapo nadhiri kwa Bwana, au anapoapa kujifunga kwa ahadi, kamwe asitangue neno lake, bali ni lazima afanye kila kitu alichosema.
3 “ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,
“Wakati mwanamwali anayeishi bado nyumbani kwa baba yake atakapoweka nadhiri kwa Bwana, ama amejifunga mwenyewe kwa ahadi,
4 ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು.
na baba yake akasikia kuhusu nadhiri au ahadi yake lakini asimwambie lolote, ndipo nadhiri zake zote na kila ahadi aliyoiweka na kujifunga kwayo itathibitika.
5 ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು.
Lakini kama baba yake akimkataza wakati anapoisikia, hakuna nadhiri wala ahadi yake yoyote aliyojifunga kwayo itakayosimama; Bwana atamweka huru huyo mwanamwali kwa sababu baba yake amemkataza.
6 “ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,
“Ikiwa ataolewa baada ya kuweka nadhiri au baada ya midomo yake kutamka ahadi fulani bila kufikiri akawa amejifunga hivyo,
7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.
na mume wake akasikia habari hiyo asimwambie neno lolote, ndipo nadhiri zake ama ahadi zake ambazo alikuwa amejifunga nazo zitathibitika.
8 ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.
Lakini ikiwa mume wake atamkataza atakaposikia kuhusu hilo, atakuwa ametangua nadhiri ambazo zilikuwa zimemfunga mkewe, ama ahadi aliyotamka pasipo kufikiri ambayo amejifunga kwayo, naye Bwana atamweka huru yule mwanamke.
9 “ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು.
“Nadhiri yoyote ama patano ambalo limefanywa na mjane ama mwanamke aliyeachwa vitakuwa vimemfunga.
10 “ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,
“Ikiwa mwanamke anayeishi na mumewe ataweka nadhiri ama kujifunga mwenyewe kwa ahadi chini ya kiapo,
11 ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು, ಅವಳನ್ನು ತಡೆಯದ ಪಕ್ಷದಲ್ಲಿ, ಅವಳ ಸಮಸ್ತ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವುವು.
na mumewe akasikia kuhusu jambo hili lakini asimwambie lolote wala hakumkataza, ndipo viapo vyake vyote au ahadi zinazomfunga zitakapothibitika.
12 ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.
Lakini ikiwa mumewe atabatilisha nadhiri hizo baada ya kuzisikia, basi hakuna nadhiri au ahadi zozote alizoziweka kwa midomo yake zitakazothibitika. Mumewe atakuwa amezibatilisha, na Bwana atamweka huru yule mwanamke.
13 ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.
Mumewe anaweza kuthibitisha au kutangua nadhiri yoyote anayoweka, au ahadi yoyote aliyoweka kwa kuapa ili kujikana mwenyewe.
14 ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
Lakini ikiwa mumewe hasemi lolote kwake kuhusu jambo hilo siku baada ya siku, basi mumewe atakuwa amethibitisha nadhiri zote, na ahadi zote zinazomfunga mkewe. Anavithibitisha kwa kutokusema lolote kwa mkewe anapoyasikia hayo.
15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.”
Hata hivyo, ikiwa mumewe atavibatilisha baada ya kusikia hayo, basi atawajibika kwa hatia ya mkewe.”
16 ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Haya ndiyo masharti ambayo Bwana alimpa Mose kuhusu mahusiano kati ya mtu na mkewe, na kati ya baba na binti yake ambaye bado anaishi nyumbani kwa baba yake.

< ಅರಣ್ಯಕಾಂಡ 30 >