< ಅರಣ್ಯಕಾಂಡ 31 >
1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
೧ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 “ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.
೨“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.
3 ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.
೩ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
4 ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.
೪ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”
5 ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
೫ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.
6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.
೬ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,
೭ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.
೮ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.
9 ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.
೯ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
10 ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
೧೦ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.
11 ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.
೧೧ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.
12 ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.
೧೨ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.
13 ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
೧೩ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.
14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.
೧೪ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.
15 ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?
೧೫ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?
16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.
೧೬ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
17 ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
೧೭ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.
18 ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.
೧೮ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.
19 “ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.
೧೯ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
20 ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.
೨೦ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.
21 ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:
೨೧ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
22 ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು
೨೨ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
23 ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.
೨೩ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
24 ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.
೨೪ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.
25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
೨೫ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
26 “ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.
೨೬“ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
27 ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.
೨೭ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
28 ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.
೨೮ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
29 ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.
೨೯ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.
30 ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.
೩೦ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
31 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.
೩೧ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.
32 ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.
೩೨ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,
35 ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.
೩೫ಕನ್ಯೆಯರು - 32,000.
36 ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ
೩೬ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.
37 ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;
೩೭ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
38 ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;
೩೮ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
39 30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61;
೩೯ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
40 16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.
೪೦16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
41 ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.
೪೧ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.
42 ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:
೪೨ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ
43 ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;
೪೩ಎಷ್ಟೆಂದರೆ - 3,37,500 ಆಡುಕುರಿಗಳು.
೪೬ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.
47 ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
೪೭ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
48 ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
೪೮ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,
49 ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.
೪೯“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
50 ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.
೫೦ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
51 ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.
೫೧ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.
52 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು.
೫೨ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
53 ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.
೫೩ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.
54 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.
೫೪ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.