< ಅರಣ್ಯಕಾಂಡ 33 >

1 ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.
जब से इस्राएली मूसा और हारून की अगुआई में दल बाँधकर मिस्र देश से निकले, तब से उनके ये पड़ाव हुए।
2 ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.
मूसा ने यहोवा से आज्ञा पाकर उनके कूच उनके पड़ावों के अनुसार लिख दिए; और वे ये हैं।
3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.
पहले महीने के पन्द्रहवें दिन को उन्होंने रामसेस से कूच किया; फसह के दूसरे दिन इस्राएली सब मिस्रियों के देखते बेखटके निकल गए,
4 ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.
जबकि मिस्री अपने सब पहिलौठों को मिट्टी दे रहे थे जिन्हें यहोवा ने मारा था; और उसने उनके देवताओं को भी दण्ड दिया था।
5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
इस्राएलियों ने रामसेस से कूच करके सुक्कोत में डेरे डाले।
6 ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
और सुक्कोत से कूच करके एताम में, जो जंगल के छोर पर है, डेरे डाले।
7 ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
और एताम से कूच करके वे पीहहीरोत को मुड़ गए, जो बाल-सपोन के सामने है; और मिग्दोल के सामने डेरे खड़े किए।
8 ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.
तब वे पीहहीरोत के सामने से कूच कर समुद्र के बीच होकर जंगल में गए, और एताम नामक जंगल में तीन दिन का मार्ग चलकर मारा में डेरे डाले।
9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
फिर मारा से कूच करके वे एलीम को गए, और एलीम में जल के बारह सोते और सत्तर खजूर के वृक्ष मिले, और उन्होंने वहाँ डेरे खड़े किए।
10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.
१०तब उन्होंने एलीम से कूच करके लाल समुद्र के तट पर डेरे खड़े किए।
11 ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,
११और लाल समुद्र से कूच करके सीन नामक जंगल में डेरे खड़े किए।
12 ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
१२फिर सीन नामक जंगल से कूच करके उन्होंने दोपका में डेरा किया।
13 ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
१३और दोपका से कूच करके आलूश में डेरा किया।
14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
१४और आलूश से कूच करके रपीदीम में डेरा किया, और वहाँ उन लोगों को पीने का पानी न मिला।
15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
१५फिर उन्होंने रपीदीम से कूच करके सीनै के जंगल में डेरे डाले।
16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
१६और सीनै के जंगल से कूच करके किब्रोतहत्तावा में डेरा किया।
17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
१७और किब्रोतहत्तावा से कूच करके हसेरोत में डेरे डाले।
18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
१८और हसेरोत से कूच करके रित्मा में डेरे डाले।
19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
१९फिर उन्होंने रित्मा से कूच करके रिम्मोनपेरेस में डेरे खड़े किए।
20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
२०और रिम्मोनपेरेस से कूच करके लिब्ना में डेरे खड़े किए।
21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
२१और लिब्ना से कूच करके रिस्सा में डेरे खड़े किए।
22 ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು.
२२और रिस्सा से कूच करके कहेलाता में डेरा किया।
23 ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು.
२३और कहेलाता से कूच करके शेपेर पर्वत के पास डेरा किया।
24 ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು.
२४फिर उन्होंने शेपेर पर्वत से कूच करके हरादा में डेरा किया।
25 ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
२५और हरादा से कूच करके मखेलोत में डेरा किया।
26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
२६और मखेलोत से कूच करके तहत में डेरे खड़े किए।
27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
२७और तहत से कूच करके तेरह में डेरे डाले।
28 ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು.
२८और तेरह से कूच करके मित्का में डेरे डाले।
29 ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು.
२९फिर मित्का से कूच करके उन्होंने हशमोना में डेरे डाले।
30 ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
३०और हशमोना से कूच करके मोसेरोत में डेरे खड़े किए।
31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
३१और मोसेरोत से कूच करके याकानियों के बीच डेरा किया।
32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
३२और याकानियों के बीच से कूच करके होर्हग्गिदगाद में डेरा किया।
33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
३३और होर्हग्गिदगाद से कूच करके योतबाता में डेरा किया।
34 ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು.
३४और योतबाता से कूच करके अब्रोना में डेरे खड़े किए।
35 ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
३५और अब्रोना से कूच करके एस्योनगेबेर में डेरे खड़े किए।
36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
३६और एस्योनगेबेर से कूच करके उन्होंने सीन नामक जंगल के कादेश में डेरा किया।
37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
३७फिर कादेश से कूच करके होर पर्वत के पास, जो एदोम देश की सीमा पर है, डेरे डाले।
38 ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.
३८वहाँ इस्राएलियों के मिस्र देश से निकलने के चालीसवें वर्ष के पाँचवें महीने के पहले दिन को हारून याजक यहोवा की आज्ञा पाकर होर पर्वत पर चढ़ा, और वहाँ मर गया।
39 ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
३९और जब हारून होर पर्वत पर मर गया तब वह एक सौ तेईस वर्ष का था।
40 ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.
४०और अराद का कनानी राजा, जो कनान देश के दक्षिण भाग में रहता था, उसने इस्राएलियों के आने का समाचार पाया।
41 ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
४१तब इस्राएलियों ने होर पर्वत से कूच करके सलमोना में डेरे डाले।
42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
४२और सलमोना से कूच करके पूनोन में डेरे डाले।
43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
४३और पूनोन से कूच करके ओबोत में डेरे डाले।
44 ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
४४और ओबोत से कूच करके अबारीम नामक डीहों में जो मोआब की सीमा पर हैं, डेरे डाले।
45 ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
४५तब उन डीहों से कूच करके उन्होंने दीबोन-गाद में डेरा किया।
46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
४६और दीबोन-गाद से कूच करके अल्मोनदिबलातैम में डेरा किया।
47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.
४७और अल्मोनदिबलातैम से कूच करके उन्होंने अबारीम नामक पहाड़ों में नबो के सामने डेरा किया।
48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.
४८फिर अबारीम पहाड़ों से कूच करके मोआब के अराबा में, यरीहो के पास यरदन नदी के तट पर डेरा किया।
49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.
४९और उन्होंने मोआब के अराबा में बेत्यशीमोत से लेकर आबेलशित्तीम तक यरदन के किनारे-किनारे डेरे डाले।
50 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
५०फिर मोआब के अराबा में, यरीहो के पास की यरदन नदी के तट पर, यहोवा ने मूसा से कहा,
51 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
५१“इस्राएलियों को समझाकर कह: जब तुम यरदन पार होकर कनान देश में पहुँचो
52 ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.
५२तब उस देश के निवासियों को उनके देश से निकाल देना; और उनके सब नक्काशीदार पत्थरों को और ढली हुई मूर्तियों को नाश करना, और उनके सब पूजा के ऊँचे स्थानों को ढा देना।
53 ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
५३और उस देश को अपने अधिकार में लेकर उसमें निवास करना, क्योंकि मैंने वह देश तुम्हीं को दिया है कि तुम उसके अधिकारी हो।
54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
५४और तुम उस देश को चिट्ठी डालकर अपने कुलों के अनुसार बाँट लेना; अर्थात् जो कुल अधिकवाले हैं उन्हें अधिक, और जो थोड़ेवाले हैं उनको थोड़ा भाग देना; जिस कुल की चिट्ठी जिस स्थान के लिये निकले वही उसका भाग ठहरे; अपने पितरों के गोत्रों के अनुसार अपना-अपना भाग लेना।
55 “‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
५५परन्तु यदि तुम उस देश के निवासियों को अपने आगे से न निकालोगे, तो उनमें से जिनको तुम उसमें रहने दोगे, वे मानो तुम्हारी आँखों में काँटे और तुम्हारे पांजरों में कीलें ठहरेंगे, और वे उस देश में जहाँ तुम बसोगे, तुम्हें संकट में डालेंगे।
56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’”
५६और उनसे जैसा बर्ताव करने की मनसा मैंने की है वैसा ही तुम से करूँगा।”

< ಅರಣ್ಯಕಾಂಡ 33 >