< ಅರಣ್ಯಕಾಂಡ 35 >

1 ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
וַיְדַבֵּ֧ר יְהוָ֛ה אֶל־מֹשֶׁ֖ה בְּעַֽרְבֹ֣ת מוֹאָ֑ב עַל־יַרְדֵּ֥ן יְרֵח֖וֹ לֵאמֹֽר׃
2 “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.
צַו֮ אֶת־בְּנֵ֣י יִשְׂרָאֵל֒ וְנָתְנ֣וּ לַלְוִיִּ֗ם מִֽנַּחֲלַ֛ת אֲחֻזָּתָ֖ם עָרִ֣ים לָשָׁ֑בֶת וּמִגְרָ֗שׁ לֶֽעָרִים֙ סְבִיבֹ֣תֵיהֶ֔ם תִּתְּנ֖וּ לַלְוִיִּֽם׃
3 ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.
וְהָי֧וּ הֶֽעָרִ֛ים לָהֶ֖ם לָשָׁ֑בֶת וּמִגְרְשֵׁיהֶ֗ם יִהְי֤וּ לִבְהֶמְתָּם֙ וְלִרְכֻשָׁ֔ם וּלְכֹ֖ל חַיָּתָֽם׃
4 “ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
וּמִגְרְשֵׁי֙ הֶֽעָרִ֔ים אֲשֶׁ֥ר תִּתְּנ֖וּ לַלְוִיִּ֑ם מִקִּ֤יר הָעִיר֙ וָח֔וּצָה אֶ֥לֶף אַמָּ֖ה סָבִֽיב׃
5 ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
וּמַדֹּתֶ֞ם מִח֣וּץ לָעִ֗יר אֶת־פְּאַת־קֵ֣דְמָה אַלְפַּ֪יִם בָּֽאַמָּ֟ה וְאֶת־פְּאַת־נֶגֶב֩ אַלְפַּ֨יִם בָּאַמָּ֜ה וְאֶת־פְּאַת־יָ֣ם ׀ אַלְפַּ֣יִם בָּֽאַמָּ֗ה וְאֵ֨ת פְּאַ֥ת צָפ֛וֹן אַלְפַּ֥יִם בָּאַמָּ֖ה וְהָעִ֣יר בַּתָּ֑וֶךְ זֶ֚ה יִהְיֶ֣ה לָהֶ֔ם מִגְרְשֵׁ֖י הֶעָרִֽים׃
6 “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.
וְאֵ֣ת הֶֽעָרִ֗ים אֲשֶׁ֤ר תִּתְּנוּ֙ לַלְוִיִּ֔ם אֵ֚ת שֵׁשׁ־עָרֵ֣י הַמִּקְלָ֔ט אֲשֶׁ֣ר תִּתְּנ֔וּ לָנֻ֥ס שָׁ֖מָּה הָרֹצֵ֑חַ וַעֲלֵיהֶ֣ם תִּתְּנ֔וּ אַרְבָּעִ֥ים וּשְׁתַּ֖יִם עִֽיר׃
7 ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.
כָּל־הֶעָרִ֗ים אֲשֶׁ֤ר תִּתְּנוּ֙ לַלְוִיִּ֔ם אַרְבָּעִ֥ים וּשְׁמֹנֶ֖ה עִ֑יר אֶתְהֶ֖ן וְאֶת־מִגְרְשֵׁיהֶֽן׃
8 ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.
וְהֶֽעָרִ֗ים אֲשֶׁ֤ר תִּתְּנוּ֙ מֵאֲחֻזַּ֣ת בְּנֵי־יִשְׂרָאֵ֔ל מֵאֵ֤ת הָרַב֙ תַּרְבּ֔וּ וּמֵאֵ֥ת הַמְעַ֖ט תַּמְעִ֑יטוּ אִ֗ישׁ כְּפִ֤י נַחֲלָתוֹ֙ אֲשֶׁ֣ר יִנְחָ֔לוּ יִתֵּ֥ן מֵעָרָ֖יו לַלְוִיִּֽם׃ פ
9 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
10 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
דַּבֵּר֙ אֶל־בְּנֵ֣י יִשְׂרָאֵ֔ל וְאָמַרְתָּ֖ אֲלֵהֶ֑ם כִּ֥י אַתֶּ֛ם עֹבְרִ֥ים אֶת־הַיַּרְדֵּ֖ן אַ֥רְצָה כְּנָֽעַן׃
11 ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
וְהִקְרִיתֶ֤ם לָכֶם֙ עָרִ֔ים עָרֵ֥י מִקְלָ֖ט תִּהְיֶ֣ינָה לָכֶ֑ם וְנָ֥ס שָׁ֙מָּה֙ רֹצֵ֔חַ מַכֵּה־נֶ֖פֶשׁ בִּשְׁגָגָֽה׃
12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.
וְהָי֨וּ לָכֶ֧ם הֶעָרִ֛ים לְמִקְלָ֖ט מִגֹּאֵ֑ל וְלֹ֤א יָמוּת֙ הָרֹצֵ֔חַ עַד־עָמְד֛וֹ לִפְנֵ֥י הָעֵדָ֖ה לַמִּשְׁפָּֽט׃
13 ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
וְהֶעָרִ֖ים אֲשֶׁ֣ר תִּתֵּ֑נוּ שֵׁשׁ־עָרֵ֥י מִקְלָ֖ט תִּהְיֶ֥ינָה לָכֶֽם׃
14 ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
אֵ֣ת ׀ שְׁלֹ֣שׁ הֶעָרִ֗ים תִּתְּנוּ֙ מֵעֵ֣בֶר לַיַּרְדֵּ֔ן וְאֵת֙ שְׁלֹ֣שׁ הֶֽעָרִ֔ים תִּתְּנ֖וּ בְּאֶ֣רֶץ כְּנָ֑עַן עָרֵ֥י מִקְלָ֖ט תִּהְיֶֽינָה׃
15 ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
לִבְנֵ֣י יִשְׂרָאֵ֗ל וְלַגֵּ֤ר וְלַתּוֹשָׁב֙ בְּתוֹכָ֔ם תִּהְיֶ֛ינָה שֵׁשׁ־הֶעָרִ֥ים הָאֵ֖לֶּה לְמִקְלָ֑ט לָנ֣וּס שָׁ֔מָּה כָּל־מַכֵּה־נֶ֖פֶשׁ בִּשְׁגָגָֽה׃
16 “‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
וְאִם־בִּכְלִ֨י בַרְזֶ֧ל ׀ הִכָּ֛הוּ וַיָּמֹ֖ת רֹצֵ֣חַֽ ה֑וּא מ֥וֹת יוּמַ֖ת הָרֹצֵֽחַ׃
17 ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
וְאִ֡ם בְּאֶ֣בֶן יָד֩ אֲשֶׁר־יָמ֨וּת בָּ֥הּ הִכָּ֛הוּ וַיָּמֹ֖ת רֹצֵ֣חַֽ ה֑וּא מ֥וֹת יוּמַ֖ת הָרֹצֵֽחַ׃
18 ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.
א֡וֹ בִּכְלִ֣י עֵֽץ־יָד֩ אֲשֶׁר־יָמ֨וּת בּ֥וֹ הִכָּ֛הוּ וַיָּמֹ֖ת רֹצֵ֣חַֽ ה֑וּא מ֥וֹת יוּמַ֖ת הָרֹצֵֽחַ׃
19 ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.
גֹּאֵ֣ל הַדָּ֔ם ה֥וּא יָמִ֖ית אֶת־הָרֹצֵ֑חַ בְּפִגְעוֹ־ב֖וֹ ה֥וּא יְמִיתֶֽנּוּ׃
20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,
וְאִם־בְּשִׂנְאָ֖ה יֶהְדָּפֶ֑נּוּ אֽוֹ־הִשְׁלִ֥יךְ עָלָ֛יו בִּצְדִיָּ֖ה וַיָּמֹֽת׃
21 ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.
א֣וֹ בְאֵיבָ֞ה הִכָּ֤הוּ בְיָדוֹ֙ וַיָּמֹ֔ת מֽוֹת־יוּמַ֥ת הַמַּכֶּ֖ה רֹצֵ֣חַֽ ה֑וּא גֹּאֵ֣ל הַדָּ֗ם יָמִ֛ית אֶת־הָרֹצֵ֖חַ בְּפִגְעוֹ־בֽוֹ׃
22 “‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,
וְאִם־בְּפֶ֥תַע בְּלֹא־אֵיבָ֖ה הֲדָפ֑וֹ אוֹ־הִשְׁלִ֥יךְ עָלָ֛יו כָּל־כְּלִ֖י בְּלֹ֥א צְדִיָּֽה׃
23 ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,
א֣וֹ בְכָל־אֶ֜בֶן אֲשֶׁר־יָמ֥וּת בָּהּ֙ בְּלֹ֣א רְא֔וֹת וַיַּפֵּ֥ל עָלָ֖יו וַיָּמֹ֑ת וְהוּא֙ לֹא־אוֹיֵ֣ב ל֔וֹ וְלֹ֥א מְבַקֵּ֖שׁ רָעָתֽוֹ׃
24 ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
וְשָֽׁפְטוּ֙ הָֽעֵדָ֔ה בֵּ֚ין הַמַּכֶּ֔ה וּבֵ֖ין גֹּאֵ֣ל הַדָּ֑ם עַ֥ל הַמִּשְׁפָּטִ֖ים הָאֵֽלֶּה׃
25 ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.
וְהִצִּ֨ילוּ הָעֵדָ֜ה אֶת־הָרֹצֵ֗חַ מִיַּד֮ גֹּאֵ֣ל הַדָּם֒ וְהֵשִׁ֤יבוּ אֹתוֹ֙ הָֽעֵדָ֔ה אֶל־עִ֥יר מִקְלָט֖וֹ אֲשֶׁר־נָ֣ס שָׁ֑מָּה וְיָ֣שַׁב בָּ֗הּ עַד־מוֹת֙ הַכֹּהֵ֣ן הַגָּדֹ֔ל אֲשֶׁר־מָשַׁ֥ח אֹת֖וֹ בְּשֶׁ֥מֶן הַקֹּֽדֶשׁ׃
26 “‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,
וְאִם־יָצֹ֥א יֵצֵ֖א הָרֹצֵ֑חַ אֶת־גְּבוּל֙ עִ֣יר מִקְלָט֔וֹ אֲשֶׁ֥ר יָנ֖וּס שָֽׁמָּה׃
27 ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.
וּמָצָ֤א אֹתוֹ֙ גֹּאֵ֣ל הַדָּ֔ם מִח֕וּץ לִגְב֖וּל עִ֣יר מִקְלָט֑וֹ וְרָצַ֞ח גֹּאֵ֤ל הַדָּם֙ אֶת־הָ֣רֹצֵ֔חַ אֵ֥ין ל֖וֹ דָּֽם׃
28 ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.
כִּ֣י בְעִ֤יר מִקְלָטוֹ֙ יֵשֵׁ֔ב עַד־מ֖וֹת הַכֹּהֵ֣ן הַגָּדֹ֑ל וְאַחֲרֵ֥י מוֹת֙ הַכֹּהֵ֣ן הַגָּדֹ֔ל יָשׁוּב֙ הָרֹצֵ֔חַ אֶל־אֶ֖רֶץ אֲחֻזָּתֽוֹ׃
29 “‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.
וְהָי֨וּ אֵ֧לֶּה לָכֶ֛ם לְחֻקַּ֥ת מִשְׁפָּ֖ט לְדֹרֹתֵיכֶ֑ם בְּכֹ֖ל מוֹשְׁבֹתֵיכֶֽם׃
30 “‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.
כָּל־מַ֨כֵּה־נֶ֔פֶשׁ לְפִ֣י עֵדִ֔ים יִרְצַ֖ח אֶת־הָרֹצֵ֑חַ וְעֵ֣ד אֶחָ֔ד לֹא־יַעֲנֶ֥ה בְנֶ֖פֶשׁ לָמֽוּת׃
31 “‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.
וְלֹֽא־תִקְח֥וּ כֹ֙פֶר֙ לְנֶ֣פֶשׁ רֹצֵ֔חַ אֲשֶׁר־ה֥וּא רָשָׁ֖ע לָמ֑וּת כִּי־מ֖וֹת יוּמָֽת׃
32 “‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.
וְלֹא־תִקְח֣וּ כֹ֔פֶר לָנ֖וּס אֶל־עִ֣יר מִקְלָט֑וֹ לָשׁוּב֙ לָשֶׁ֣בֶת בָּאָ֔רֶץ עַד־מ֖וֹת הַכֹּהֵֽן׃
33 “‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
וְלֹֽא־תַחֲנִ֣יפוּ אֶת־הָאָ֗רֶץ אֲשֶׁ֤ר אַתֶּם֙ בָּ֔הּ כִּ֣י הַדָּ֔ם ה֥וּא יַחֲנִ֖יף אֶת־הָאָ֑רֶץ וְלָאָ֣רֶץ לֹֽא־יְכֻפַּ֗ר לַדָּם֙ אֲשֶׁ֣ר שֻׁפַּךְ־בָּ֔הּ כִּי־אִ֖ם בְּדַ֥ם שֹׁפְכֽוֹ׃
34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’” ಎಂದರು.
וְלֹ֧א תְטַמֵּ֣א אֶת־הָאָ֗רֶץ אֲשֶׁ֤ר אַתֶּם֙ יֹשְׁבִ֣ים בָּ֔הּ אֲשֶׁ֥ר אֲנִ֖י שֹׁכֵ֣ן בְּתוֹכָ֑הּ כִּ֚י אֲנִ֣י יְהוָ֔ה שֹׁכֵ֕ן בְּת֖וֹךְ בְּנֵ֥י יִשְׂרָאֵֽל׃ פ

< ಅರಣ್ಯಕಾಂಡ 35 >