< ಅರಣ್ಯಕಾಂಡ 6 >

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם אִישׁ אֽוֹ־אִשָּׁה כִּי יַפְלִא לִנְדֹּר נֶדֶר נָזִיר לְהַזִּיר לַֽיהֹוָֽה׃
3 ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.
מִיַּיִן וְשֵׁכָר יַזִּיר חֹמֶץ יַיִן וְחֹמֶץ שֵׁכָר לֹא יִשְׁתֶּה וְכׇל־מִשְׁרַת עֲנָבִים לֹא יִשְׁתֶּה וַעֲנָבִים לַחִים וִיבֵשִׁים לֹא יֹאכֵֽל׃
4 ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.
כֹּל יְמֵי נִזְרוֹ מִכֹּל אֲשֶׁר יֵעָשֶׂה מִגֶּפֶן הַיַּיִן מֵחַרְצַנִּים וְעַד־זָג לֹא יֹאכֵֽל׃
5 “‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.
כׇּל־יְמֵי נֶדֶר נִזְרוֹ תַּעַר לֹא־יַעֲבֹר עַל־רֹאשׁוֹ עַד־מְלֹאת הַיָּמִם אֲשֶׁר־יַזִּיר לַיהֹוָה קָדֹשׁ יִהְיֶה גַּדֵּל פֶּרַע שְׂעַר רֹאשֽׁוֹ׃
6 “‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.
כׇּל־יְמֵי הַזִּירוֹ לַיהֹוָה עַל־נֶפֶשׁ מֵת לֹא יָבֹֽא׃
7 ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.
לְאָבִיו וּלְאִמּוֹ לְאָחִיו וּלְאַחֹתוֹ לֹא־יִטַּמָּא לָהֶם בְּמֹתָם כִּי נֵזֶר אֱלֹהָיו עַל־רֹאשֽׁוֹ׃
8 ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.
כֹּל יְמֵי נִזְרוֹ קָדֹשׁ הוּא לַֽיהֹוָֽה׃
9 “‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.
וְכִֽי־יָמוּת מֵת עָלָיו בְּפֶתַע פִּתְאֹם וְטִמֵּא רֹאשׁ נִזְרוֹ וְגִלַּח רֹאשׁוֹ בְּיוֹם טׇהֳרָתוֹ בַּיּוֹם הַשְּׁבִיעִי יְגַלְּחֶֽנּוּ׃
10 ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
וּבַיּוֹם הַשְּׁמִינִי יָבִא שְׁתֵּי תֹרִים אוֹ שְׁנֵי בְּנֵי יוֹנָה אֶל־הַכֹּהֵן אֶל־פֶּתַח אֹהֶל מוֹעֵֽד׃
11 ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.
וְעָשָׂה הַכֹּהֵן אֶחָד לְחַטָּאת וְאֶחָד לְעֹלָה וְכִפֶּר עָלָיו מֵאֲשֶׁר חָטָא עַל־הַנָּפֶשׁ וְקִדַּשׁ אֶת־רֹאשׁוֹ בַּיּוֹם הַהֽוּא׃
12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.
וְהִזִּיר לַֽיהֹוָה אֶת־יְמֵי נִזְרוֹ וְהֵבִיא כֶּבֶשׂ בֶּן־שְׁנָתוֹ לְאָשָׁם וְהַיָּמִים הָרִאשֹׁנִים יִפְּלוּ כִּי טָמֵא נִזְרֽוֹ׃
13 “‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.
וְזֹאת תּוֹרַת הַנָּזִיר בְּיוֹם מְלֹאת יְמֵי נִזְרוֹ יָבִיא אֹתוֹ אֶל־פֶּתַח אֹהֶל מוֹעֵֽד׃
14 ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.
וְהִקְרִיב אֶת־קׇרְבָּנוֹ לַיהֹוָה כֶּבֶשׂ בֶּן־שְׁנָתוֹ תָמִים אֶחָד לְעֹלָה וְכַבְשָׂה אַחַת בַּת־שְׁנָתָהּ תְּמִימָה לְחַטָּאת וְאַֽיִל־אֶחָד תָּמִים לִשְׁלָמִֽים׃
15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.
וְסַל מַצּוֹת סֹלֶת חַלֹּת בְּלוּלֹת בַּשֶּׁמֶן וּרְקִיקֵי מַצּוֹת מְשֻׁחִים בַּשָּׁמֶן וּמִנְחָתָם וְנִסְכֵּיהֶֽם׃
16 “‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.
וְהִקְרִיב הַכֹּהֵן לִפְנֵי יְהֹוָה וְעָשָׂה אֶת־חַטָּאתוֹ וְאֶת־עֹלָתֽוֹ׃
17 ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.
וְאֶת־הָאַיִל יַעֲשֶׂה זֶבַח שְׁלָמִים לַֽיהֹוָה עַל סַל הַמַּצּוֹת וְעָשָׂה הַכֹּהֵן אֶת־מִנְחָתוֹ וְאֶת־נִסְכּֽוֹ׃
18 “‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
וְגִלַּח הַנָּזִיר פֶּתַח אֹהֶל מוֹעֵד אֶת־רֹאשׁ נִזְרוֹ וְלָקַח אֶת־שְׂעַר רֹאשׁ נִזְרוֹ וְנָתַן עַל־הָאֵשׁ אֲשֶׁר־תַּחַת זֶבַח הַשְּׁלָמִֽים׃
19 “‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.
וְלָקַח הַכֹּהֵן אֶת־הַזְּרֹעַ בְּשֵׁלָה מִן־הָאַיִל וְֽחַלַּת מַצָּה אַחַת מִן־הַסַּל וּרְקִיק מַצָּה אֶחָד וְנָתַן עַל־כַּפֵּי הַנָּזִיר אַחַר הִֽתְגַּלְּחוֹ אֶת־נִזְרֽוֹ׃
20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.
וְהֵנִיף אוֹתָם הַכֹּהֵן ׀ תְּנוּפָה לִפְנֵי יְהֹוָה קֹדֶשׁ הוּא לַכֹּהֵן עַל חֲזֵה הַתְּנוּפָה וְעַל שׁוֹק הַתְּרוּמָה וְאַחַר יִשְׁתֶּה הַנָּזִיר יָֽיִן׃
21 “‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’”
זֹאת תּוֹרַת הַנָּזִיר אֲשֶׁר יִדֹּר קׇרְבָּנוֹ לַֽיהֹוָה עַל־נִזְרוֹ מִלְּבַד אֲשֶׁר־תַּשִּׂיג יָדוֹ כְּפִי נִדְרוֹ אֲשֶׁר יִדֹּר כֵּן יַעֲשֶׂה עַל תּוֹרַת נִזְרֽוֹ׃
22 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
וַיְדַבֵּר יְהֹוָה אֶל־מֹשֶׁה לֵּאמֹֽר׃
23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:
דַּבֵּר אֶֽל־אַהֲרֹן וְאֶל־בָּנָיו לֵאמֹר כֹּה תְבָרְכוּ אֶת־בְּנֵי יִשְׂרָאֵל אָמוֹר לָהֶֽם׃
24 “‘“ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ.
יְבָרֶכְךָ יְהֹוָה וְיִשְׁמְרֶֽךָ׃
25 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.
יָאֵר יְהֹוָה ׀ פָּנָיו אֵלֶיךָ וִֽיחֻנֶּֽךָּ׃
26 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.”’
יִשָּׂא יְהֹוָה ׀ פָּנָיו אֵלֶיךָ וְיָשֵׂם לְךָ שָׁלֽוֹם׃
27 “ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”
וְשָׂמוּ אֶת־שְׁמִי עַל־בְּנֵי יִשְׂרָאֵל וַאֲנִי אֲבָרְכֵֽם׃

< ಅರಣ್ಯಕಾಂಡ 6 >