< ಅರಣ್ಯಕಾಂಡ 8 >

1 ಯೆಹೋವ ದೇವರು ಮೋಶೆಗೆ:
Hina Gode da Mousesema amane sia: i,
2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”
“Elanema amane olelema. ‘E da gamali fesuale amo ilia baiga ligisisia, amo gamali ilia hadigi da midadi hadigima: ne, agoane bugima: ne sia: ma.’”
3 ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
Elane da amo sia: nababeba: le, gamali ea ba: le gaidi amodili gamali ea baiga amoi ilia midadi amoga bugi.
4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.
Gadodili asili ea baiga, gamali bai da gouli amo ha: maga dabagala: i agoane ba: i. Bai Hina Gode da amo hamosu ilegei Mousesema olelei.
5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Hina Gode da Mousesema amane sia: i,
6 “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.
“Dia Lifai dunu amo Isala: ili dunu eno amoga afafama. Amola ilia ledo doga: ma: ne agoane hamoma.
7 ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.
Ilia da: i hodo hinabo huluane waga: ma: ne amola abula huluane dodofema: ne sia: ma. Amasea, ilia da sema defele, ledo hamedei hamoi dagoi ba: mu.
8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.
Amasea, ilia da bulamagau gawali waha debe amola Gala: ine Iasu (falaua amola olife susuligi gilisi) amo lama: ne sia: ma. Amola di bulamagau gawali eno Wadela: i Hou Gogolema: ne Olofoma: ne Iasu hamoma: ne lama.
9 ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.
Amasea, Isala: ili dunu huluane gilisima: ne sia: ma. Amola Lifai dunu amo Na Abula Diasu midadi leloma: ne sia: ma.
10 ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
Isala: ili dunu huluane da ilia lobo Lifai dunu ilia dialuma da: iya ligisima: mu.
11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
Amasea, Lifai dunu da Nama hahawane iasu, Na hawa: hamosu hamoma: ne, Elane da ili momogili gagale ilegema: mu.
12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.
Amasea, Lifai dunu da ilia lobo bulamagau aduna ela dialuma da: iya ligisimu. Ilia da bulamagau afae amo Wadela: i Hou Gogolema: ne Olofoma: ne Iasu hamoma: ne imunu amola eno da Wadela: i Hou Dabe Ima: ne Iasu hamoma: mu.
13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.
Dia Lifai dunu amo Nama noga: idafa fi hamoma: ne momogili gagale ilegema. Amola Elane amola ea mano ilima ouligima: ne ilegema.
14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.
Lifai dunu ilia da Na fidafa esaloma: ne, Isala: ili fi ilima mogima.
15 “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು.
Di da Lifai dunu ledo hamedei esaloma: ne ilegei dagosea, ilia da Na Abula diasu amo ganodini hawa: hamomu defele ba: mu.
16 ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.
Na da Lifai dunu amo Isala: ili mano magobo huluane ilia sogebi lama: ne ilegei dagoi. Ili da Na: fawane.
17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.
Na da Idibidi fi ilia mano magobo huluane fane legeloba, Na da Isala: ili dunu fi amola ohe fi mano magobo huluane Na: fawane esaloma: ne ilegei dagoi.
18 ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.
Be wali Na da Isala: ili mano magobo mae lale, Lifai fi dunu huluane Na: fawane esaloma: ne ilegele laha.
19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”
Amola Isala: ili dunu ilia da Lifai dunu huluane amo Elane amola ea mano ilima ima: ne, Na da ilegesa. Ilia da Isala: ili dunu ilia hawa: hamosu Abula Diasu amo ganodini hamomu. Bai Isala: ili dunu eno da Hadigi Malei Sesei gadenene masea, ilia da gugunufinisi dagoi ba: sa: besa: le, agoane hamosa.”
20 ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
Amaiba: le, Mousese, Elane amola Isala: ili dunu huluane da Hina Gode Ea hamoma: ne sia: i defele, Lifai dunu momogili gagale ilegei.
21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
Lifai dunu da ilia da: i hano ulalu, ilia abula dodofei. Amasea, Elane da ili Hina Godema iasu noga: i ima: ne, momogili gagale ilegei. E amola ledo hamedei hamoma: ne hou ilima hamoi.
22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.
Isala: ili dunu da hou huluane Hina Gode da Mousesema hamoma: ne sia: i, amo huluane Lifai dunuma hamoi. Amaiba: le, Lifai dunu da Elane amola ea mano ilia ouligisu hagudu amo Abula Diasu hawa: hamosu hamoma: ne defele ba: i.
23 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Hina Gode da Mousesema amane sia: i,
24 “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.
“Lifai dunu da ode 25 baligisia, Na Abula Diasu ganodini hawa: hamoma: mu.
25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.
E da ode 50 gidigisia, ea hawa: hamosu fisima: mu.
26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.
Amo ode fa: no, e da ea Lifai sama amo Abula Diasu ganodini fidimu da defea, be hisu da hame hamomu. Di da Lifai dunu ilia hawa: hamosu amo defele ouligima.”

< ಅರಣ್ಯಕಾಂಡ 8 >