< ಅರಣ್ಯಕಾಂಡ 9 >

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:
Ubangiji ya yi magana da Musa a Hamadar Sinai, a watan farko na shekara ta biyu bayan fitarsu daga ƙasar Masar. Ya ce,
2 “ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು.
“Ka sa Isra’ilawa su yi Bikin Ƙetarewa a ƙayyadadden lokaci.
3 ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”
A yi wannan bikin ƙayyadadden lokaci da yamma, a rana ta goma sha huɗu ga wannan wata, a yi shi bisa ga dokokinsa da ƙa’idodinsa.”
4 ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು.
Saboda haka sai Musa ya gaya wa Isra’ilawa su yi Bikin Ƙetarewa,
5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.
suka kuwa yi haka a Hamadar Sinai da yamma, a rana ta sha huɗu ga watan farko. Isra’ilawa suka yi dukan abubuwa yadda Ubangiji ya umarci Musa.
6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು
Amma waɗansunsu ba su iya yin Bikin Ƙetarewa a ranar ba gama sun ƙazantu ta wurin taɓa gawa. Saboda haka suka zo wurin Musa da Haruna a wannan rana
7 ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.
suka ce wa Musa, “Mun ƙazantu saboda mun taɓa gawa, don me aka hana mu mu ba da hadaya ga Ubangiji tare da sauran Isra’ilawa a ƙayyadadden lokaci?”
8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.
Musa ya amsa musu ya ce, “Ku dakata sai na sami umarni daga wurin Ubangiji game da ku.”
9 ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ,
Sai Ubangiji ya ce wa Musa,
10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.
“Gaya wa Isra’ilawa cewa, ‘Sa’ad da waninku ko zuriyarku ya ƙazantu ta wurin taɓa gawa, ko kuwa ya yi tafiya mai nisa, duk da haka zai kiyaye Bikin Ƙetarewa ta Ubangiji.
11 ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.
Za su yi bikin da yamma, a rana ta sha huɗu ga wata na biyu. Za su ci naman tunkiya, tare da burodi marar yisti, da ganyaye masu ɗaci.
12 ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.
Kada su bar kome daga cikinsa yă kai safe, ko a karye ƙashinsa. Sa’ad da suke Bikin Ƙetarewa, dole su kiyaye dukan ƙa’idodinsa.
13 ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Amma in mutumin da yake da tsarki bai kuma yi tafiya ba, ya kuwa ƙi yă yi Bikin Ƙetarewar, dole a ware wannan mutum daga mutanensa, domin bai miƙa hadaya ga Ubangiji a ƙayyadadden lokaci ba. Wannan mutum zai ɗauki alhakin zunubinsa.
14 “ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.
“‘Baƙon da yake zaune a cikinku wanda yake so yă yi Bikin Ƙetarewar Ubangiji, dole yă yi shi bisa ga dokokinsa da ƙa’idodinsa. Dole ku kasance da ƙa’ida ɗaya ga baƙo da kuma ɗan ƙasa.’”
15 ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
A ranar da aka kafa Tenti na Alkawari, sai girgije ya rufe shi. Daga yamma har safe, girgijen da yake bisa tabanakul ya yi kama da wuta.
16 ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
Haka ya ci gaba da kasancewa; girgijen ya rufe shi, da dare kuma sai ya yi kamar wuta.
17 ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.
Duk sa’ad da aka ɗaga girgijen daga Tentin, sai Isra’ilawa su kama hanya; duk inda girgijen ya tsaya, a nan Isra’ilawa za su yi sansani.
18 ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
Da umarnin Ubangiji, Isra’ilawa suke tashi. Da umarninsa kuma suke sauka. Muddin girgijen yana tsaye a bisa tabanakul, sukan yi ta zamansu a sansanoni.
19 ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
Sa’ad da girgijen ya ci gaba da kasancewa a bisan tabanakul na dogon lokaci, Isra’ilawa sukan bi umarnin Ubangiji, ba kuwa za su tashi ba.
20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
Wani lokaci girgijen yakan yi’yan kwanaki ne kawai a bisa tabanakul; da umarnin Ubangiji sukan kafa sansani da umarninsa kuma su tashi.
21 ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು.
Wani lokaci girgijen yakan zauna daga yamma har safiya ne kawai, sa’ad da kuma aka ɗaga shi da safe, sai su kama hanya. Ko da rana, ko da dare, duk sa’ad da aka ɗaga girgijen, sai su ma su tashi.
22 ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.
Ko girgijen ya yi kwana biyu a bisa tabanakul, ko wata guda, ko shekara, Isra’ilawa za su zauna a sansani ba kuwa za su tashi ba; amma sa’ad da aka ɗaga shi, sai su kuma su tashi.
23 ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.
Da umarnin Ubangiji sukan kafa sansani, da umarninsa kuma sukan tashi. Sukan bi umarnin Ubangiji, bisa ga umarninsa ta wurin Musa.

< ಅರಣ್ಯಕಾಂಡ 9 >