< ಫಿಲೆಮೋನನಿಗೆ ಬರೆದ ಪತ್ರಿಕೆ 1 >
1 ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ
Paul, a prisoner of Christ Jesus, and Timothy the brother, to Philemon our beloved and co-workman,
2 ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:
and to the beloved Apphia, and Archippus our fellow soldier, and to the congregation at thy house:
3 ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಇರಲಿ.
Grace to you and peace from God our Father and the Lord Jesus Christ.
4 ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
I thank my God, making recollection of thee always in my prayers,
5 ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.
hearing of thy love and faith, which thou have toward the Lord Jesus and for all the sanctified,
6 ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.
so that the fellowship of thy faith may become potent (in the knowledge of every good thing in us) for Christ Jesus.
7 ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.
For we have much joy and encouragement in thy love, because the bowels of the sanctified have been refreshed by thee, brother.
8 ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ
Therefore, though I have much boldness in Christ to command thee that which is befitting,
9 ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
because of love I rather beseech, being such as aged Paul, and now also a prisoner of Jesus Christ.
10 ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.
I beseech thee for my child Onesimus, whom I begot in my bonds.
11 ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
A man formerly unprofitable to thee, but now is profitable to thee and to me, whom I sent back.
12 ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.
And thou should welcome him, that is, my bowels.
13 ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.
Whom I wanted to keep back for myself, so that in thy behalf he might serve me in the bonds of the good news.
14 ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
But I wanted to do nothing without thy mind, so that thy goodness might not be as from obligation, but from volition.
15 ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ! (aiōnios )
For perhaps because of this he departed for an hour, so that thou might receive him back forever, (aiōnios )
16 ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.
no longer as a bondman, but above a bondman, a beloved brother, especially to me, but how much more to thee, both in flesh and in the Lord.
17 ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು.
If then thou have me a partner, accept him as myself.
18 ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.
But if he has wronged thee, or owes anything, charge this to me.
19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.
I Paul write with my hand, I will repay, so that I may not say to thee that thou owe me in return even thyself.
20 ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.
Yes, brother, let me have a favor of thee in the Lord. Refresh my bowels in the Lord.
21 ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.
Being confident in thine obedience I wrote to thee, knowing that thou will do above what I say.
22 ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.
But simultaneously also prepare a lodging for me, for I hope that by your prayers I will be granted to you.
23 ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
Epaphras, my fellow prisoner in Christ Jesus, salutes thee,
24 ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.
and Mark, Aristarchus, Demas, Luke, my co-workmen.
25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
The grace of our Lord Jesus Christ is with your spirit. Truly.