< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 4 >
1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!
C'est pourquoi, mes chers et bien-aimés frères, ma joie et ma couronne, tenez ainsi ferme dans le Seigneur, mes bien-aimés.
2 ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
J'exhorte Evodie et j'invite Syntyché à être en bonne intelligence dans le Seigneur.
3 ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.
Et toi aussi, mon fidèle compagnon, je te prie de leur venir en aide, elles qui ont combattu pour l'Evangile avec moi, avec Clément, et mes autres collaborateurs dont les noms sont dans le livre de vie.
4 ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.
Réjouissez-vous dans le Seigneur en tout temps; je le répète, réjouissez-vous.
5 ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.
Que votre modération soit connue de tous les hommes: le Seigneur est proche.
6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
Ne vous inquiétez de rien; mais en toute circonstance faites connaître vos besoins à Dieu par des prières et des supplications, avec des actions de grâce.
7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
Et la paix de Dieu, qui surpasse toute intelligence, gardera vos cœurs et vos pensées dans le Christ Jésus.
8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.
Au reste, frères, que tout ce qui est vrai, tout ce qui est honorable, tout ce qui est juste, tout ce qui est pur, tout ce qui est aimable, tout ce qui est de bonne renommée, s'il est quelque vertu et s'il est quelque louange, que ce soit là l'objet de vos pensées;
9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.
ce que vous avez appris et reçu, ce que vous m'avez entendu dire et vu faire à moi-même, pratiquez-le, et le Dieu de paix sera avec vous.
10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.
Je me suis vivement réjoui dans le Seigneur, de ce que j'ai vu refleurir enfin vos sentiments d'autrefois à mon égard; vous les aviez bien, mais l'occasion vous avait manqué.
11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.
Ce n'est pas à cause de mes besoins que je parle ainsi, car j'ai appris à me suffire avec ce que j'ai.
12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.
Je sais vivre dans le dénûment, et je sais vivre dans l'abondance. En tout et par tout j'ai appris à être rassasié et à avoir faim, à être dans l'abondance et à être dans la détresse.
13 ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
Je puis tout en celui qui me fortifie.
14 ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.
Cependant vous avez bien fait de prendre part à ma détresse.
15 ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.
Vous savez aussi, vous, Philippiens, que dans les débuts de ma prédication de l'Evangile, lorsque je quittai la Macédoine, aucune Eglise ne m'ouvrit un compte de Doit et Avoir, excepté vous seuls.
16 ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.
Car vous m'avez envoyé à Thessalonique, une première fois, puis une seconde, de quoi subvenir à mes besoins.
17 ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.
Ce n'est pas que je recherche les dons; ce que je recherche, c'est le fruit qui va s'augmentant à votre compte.
18 ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.
Maintenant j'ai abondamment de tout, et je suis dans l'abondance; je suis comblé, ayant reçu d'Epaphrodite ce qui vient de vous, comme un parfum de bonne odeur, une hostie que Dieu accepte et qui lui est agréable.
19 ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
Et mon Dieu pourvoira à tous vos besoins, selon sa richesse, avec gloire, dans le Christ Jésus.
20 ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್. (aiōn )
A notre Dieu et Père, soit la gloire aux siècles des siècles! Amen! (aiōn )
21 ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ.
Saluez en Jésus-Christ tous les saints. Les frères qui sont avec moi vous saluent.
22 ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.
Tous les saints vous saluent, et principalement ceux de la maison de César.
23 ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.
Que la grâce du Seigneur Jésus-Christ soit avec votre esprit!