< ಜ್ಞಾನೋಕ್ತಿಗಳು 1 >

1 ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:
מִ שְׁלֵי שְׁלֹמֹה בֶן־דָּוִד מֶלֶךְ יִשְׂרָאֵֽל׃
2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;
לָדַעַת חׇכְמָה וּמוּסָר לְהָבִין אִמְרֵי בִינָֽה׃
3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;
לָקַחַת מוּסַר הַשְׂכֵּל צֶדֶק וּמִשְׁפָּט וּמֵשָׁרִֽים׃
4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.
לָתֵת לִפְתָאיִם עׇרְמָה לְנַעַר דַּעַת וּמְזִמָּֽה׃
5 ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.
יִשְׁמַע חָכָם וְיוֹסֶף לֶקַח וְנָבוֹן תַּחְבֻּלוֹת יִקְנֶֽה׃
6 ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.
לְהָבִין מָשָׁל וּמְלִיצָה דִּבְרֵי חֲכָמִים וְחִידֹתָֽם׃
7 ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.
יִרְאַת יְהֹוָה רֵאשִׁית דָּעַת חׇכְמָה וּמוּסָר אֱוִילִים בָּֽזוּ׃
8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
שְׁמַע בְּנִי מוּסַר אָבִיךָ וְאַל־תִּטֹּשׁ תּוֹרַת אִמֶּֽךָ׃
9 ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.
כִּי ׀ לִוְיַת חֵן הֵם לְרֹאשֶׁךָ וַעֲנָקִים לְגַרְגְּרֹתֶֽךָ׃
10 ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.
בְּנִי אִם־יְפַתּוּךָ חַטָּאִים אַל־תֹּבֵֽא׃
11 ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;
אִם־יֹאמְרוּ לְכָה אִתָּנוּ נֶאֶרְבָה לְדָם נִצְפְּנָה לְנָקִי חִנָּֽם׃
12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ. (Sheol h7585)
נִבְלָעֵם כִּשְׁאוֹל חַיִּים וּתְמִימִים כְּיוֹרְדֵי בֽוֹר׃ (Sheol h7585)
13 ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;
כׇּל־הוֹן יָקָר נִמְצָא נְמַלֵּא בָתֵּינוּ שָׁלָֽל׃
14 ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ.
גּוֹרָלְךָ תַּפִּיל בְּתוֹכֵנוּ כִּיס אֶחָד יִהְיֶה לְכֻלָּֽנוּ׃
15 ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.
בְּנִי אַל־תֵּלֵךְ בְּדֶרֶךְ אִתָּם מְנַע רַגְלְךָ מִנְּתִיבָתָֽם׃
16 ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.
כִּי רַגְלֵיהֶם לָרַע יָרוּצוּ וִימַהֲרוּ לִשְׁפׇּךְ־דָּֽם׃
17 ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!
כִּֽי־חִנָּם מְזֹרָה הָרָשֶׁת בְּעֵינֵי כׇּל־בַּעַל כָּנָֽף׃
18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.
וְהֵם לְדָמָם יֶאֱרֹבוּ יִצְפְּנוּ לְנַפְשֹׁתָֽם׃
19 ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.
כֵּן אׇרְחוֹת כׇּל־בֹּצֵֽעַ בָּצַע אֶת־נֶפֶשׁ בְּעָלָיו יִקָּֽח׃
20 ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
חׇכְמוֹת בַּחוּץ תָּרֹנָּה בָּרְחֹבוֹת תִּתֵּן קוֹלָֽהּ׃
21 ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:
בְּרֹאשׁ הֹמִיּוֹת תִּקְרָא בְּפִתְחֵי שְׁעָרִים בָּעִיר אֲמָרֶיהָ תֹאמֵֽר׃
22 “ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?
עַד־מָתַי ׀ פְּתָיִם תְּֽאֵהֲבוּ ־ פֶתִי וְלֵצִים לָצוֹן חָמְדוּ לָהֶם וּכְסִילִים יִשְׂנְאוּ־דָֽעַת׃
23 ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.
תָּשׁוּבוּ לְֽתוֹכַחְתִּי הִנֵּה אַבִּיעָה לָכֶם רוּחִי אוֹדִיעָה דְבָרַי אֶתְכֶֽם׃
24 ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.
יַעַן קָרָאתִי וַתְּמָאֵנוּ נָטִיתִי יָדִי וְאֵין מַקְשִֽׁיב׃
25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ
וַתִּפְרְעוּ כׇל־עֲצָתִי וְתוֹכַחְתִּי לֹא אֲבִיתֶֽם׃
26 ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.
גַּם־אֲנִי בְּאֵידְכֶם אֶשְׂחָק אֶלְעַג בְּבֹא פַחְדְּכֶֽם׃
27 ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.
בְּבֹא (כשאוה) [כְשׁוֹאָה ׀] פַּחְדְּכֶם וְֽאֵידְכֶם כְּסוּפָה יֶאֱתֶה בְּבֹא עֲלֵיכֶם צָרָה וְצוּקָֽה׃
28 “ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.
אָז יִקְרָאֻנְנִי וְלֹא אֶעֱנֶה יְשַׁחֲרֻנְנִי וְלֹא יִמְצָאֻֽנְנִי׃
29 ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.
תַּחַת כִּֽי־שָׂנְאוּ דָעַת וְיִרְאַת יְהֹוָה לֹא בָחָֽרוּ׃
30 ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.
לֹא־אָבוּ לַעֲצָתִי נָאֲצוּ כׇּל־תּוֹכַחְתִּֽי׃
31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.
וְֽיֹאכְלוּ מִפְּרִי דַרְכָּם וּֽמִמֹּעֲצֹתֵיהֶם יִשְׂבָּֽעוּ׃
32 ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.
כִּי מְשׁוּבַת פְּתָיִם תַּהַרְגֵם וְשַׁלְוַת כְּסִילִים תְּאַבְּדֵֽם׃
33 ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”
וְשֹׁמֵעַֽ לִי יִשְׁכׇּן־בֶּטַח וְשַׁאֲנַן מִפַּחַד רָעָֽה׃

< ಜ್ಞಾನೋಕ್ತಿಗಳು 1 >