< ಜ್ಞಾನೋಕ್ತಿಗಳು 15 >
1 ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
A soft answer turneth away fury; but a mortifying word stirreth up anger.
2 ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.
The tongue of the wise maketh knowledge acceptable; but the mouth of fools sputtereth out folly.
3 ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.
In every place are the eyes of the Lord, looking on the bad and the good.
4 ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.
A healing [word] of the tongue is a tree of life; but perverseness therein is a breach to the spirit.
5 ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.
A fool contemneth the correction of his father; but he that observeth admonition will become prudent.
6 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.
In the house of the righteous there is much treasure; but in the income of the wicked is trouble.
7 ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.
The lips of the wise scatter knowledge; but the heart of fools is not reliable.
8 ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.
The sacrifice of the wicked is an abomination of the Lord: but, the prayer of the upright [obtaineth] his favor.
9 ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.
An abomination of the Lord is the way of the wicked; but him that pursueth righteousness will he love.
10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.
An evil correction is [destined] for him that forsaketh the [right] path; he that hateth admonition will die.
11 ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ? (Sheol )
The nether world and corruption are open before the Lord: how much more then the hearts of the children of men! (Sheol )
12 ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ.
A scorner loveth not that one should admonish him: unto the wise doth he not go.
13 ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.
A merry heart cheereth up the countenance; but when the heart feeleth pain the spirit is depressed.
14 ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.
The heart of the man of understanding seeketh knowledge; but the mouth of fools feedeth on folly.
15 ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
All the days of the afflicted are evil; but he that is of a cheerful heart hath a continual feast.
16 ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.
Better is little with the fear of the Lord, than great treasure and confusion therewith.
17 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ.
Better is an allowance of herbs when love is there, than a stall-fed ox and hatred therewith.
18 ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.
A man of fury stirreth up strife; but he that is slow to anger assuageth contention.
19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.
The way of the slothful man is like a hedge of thorns; but the path of the upright is a levelled [road].
20 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.
A wise son causeth his father to rejoice; but a foolish man despiseth his mother.
21 ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.
Folly is joy to him that is void of sense; but a man of understanding walketh straight forward.
22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.
Plans are frustrated without consultation; but through a multitude of counsellors canst thou maintain thyself.
23 ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.
A man hath joy by the answer of his mouth; and a word [spoken] at the proper time, how good is it!
24 ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು. (Sheol )
The path of life [leadeth] upward for the intelligent, in order that he may avoid the nether world beneath. (Sheol )
25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.
The Lord, will tear down the house of the proud; but he will set up firmly the boundary [-stone] of the widow.
26 ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.
An abomination of the Lord are the thoughts of the bad man; but pleasant speeches are pure [before him].
27 ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.
He that is greedy after gain troubleth his own house; but he that hateth gifts will live.
28 ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
The heart of the righteous reflecteth to answer; but the mouth of the wicked sputtereth out evil things.
29 ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.
The Lord is far from the wicked; but the prayer of the righteous doth he hear.
30 ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.
[What is pleasant to] the light of the eyes rejoiceth the heart: a good report giveth marrow to the bones.
31 ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.
The ear that heareth the admonition of life will ever abide in the midst of the wise.
32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.
He that rejecteth correction despiseth his own soul; but he that heareth admonition acquireth intelligence.
33 ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.
The fear of the Lord is the correction for wisdom; and before honor there must come humility.